ಕೋವಿಡ್ ನಲ್ಲಿ ಪತ್ರಕರ್ತರ ಕಾರ್ಯ ಮಹತ್ವದ್ದು – ಗೋಪಾಲ ಜಾಗನೂರಿ

Must Read

ಮೂಡಲಗಿ – ಕೊರೋನಾ ವೈರಾಣು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅದರಿಂದ ರಕ್ಷಿಸಿಕೊಳ್ಳಲು ಪ್ರತಿಯೊಬ್ಬರೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಪಾಡಬೇಕು ಎಂದು ಗ್ರಾಮೀಣ ಕೂಟ ಕಿರು ಹಣಕಾಸು ಸಂಸ್ಥೆಯ ಮೂಡಲಗಿ ಬ್ರ್ಯಾಂಚ್ ಮ್ಯಾನೇಜರ್ ಗೋಪಾಲ ಸಿ. ಜಾಗನೂರಿ ಹೇಳಿದರು.

ಮೂಡಲಗಿ ತಾಲೂಕಿನ ಪತ್ರಕರ್ತರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಿ ಅವರು ಮಾತನಾಡಿದರು.

ಕೊರೋನಾ ಕುರಿತು ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಪತ್ರಕರ್ತರ ಕಾರ್ಯ ತುಂಬಾ ಮಹತ್ವದ್ದು. ಅವರು ಕೊರೋನಾ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿದ್ದಾರೆ ಅವರ ಕೆಲಸ ಹೀಗೆಯೇ ಸಾಗುತ್ತಿರಬೇಕು ಎಂದು ಗೋಪಾಲ ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮೀಣ ಕೂಟದ ಇನ್ನೋರ್ವ ಸಿಬ್ಬಂದಿ ಮಲ್ಲಿಕಾರ್ಜುನ ಮಠಪತಿ ಇದ್ದರು.

Latest News

ಕವನ : ಶ್ರದ್ಧೆ

ಶ್ರದ್ಧೆಶ್ರದ್ಧೆ ಎಂದರೆ ಕೇವಲ ನಂಬಿಕೆ ಅಲ್ಲ, ಸಾಧನೆಯ ಕೀಲಿ ಕೈ ಆಗಿದೆಯಲ್ಲ ಹೃದಯದಿಂದ ಹೊಮ್ಮುವ ಶಕ್ತಿ ಎಲ್ಲ ಕಣ್ಣಿಗೆ ಕಾಣದ ಅದ್ಭುತ ಅನುಭವದ ಬೆಲ್ಲ ಹೆಜ್ಜೆಗೆ ದಿಕ್ಕು ತೋರುವ ಬೆಳಕ ಸಾಧನೆಯ ಹಾದಿಯ...

More Articles Like This

error: Content is protected !!
Join WhatsApp Group