spot_img
spot_img

ಯುವಜನತೆ ರಾಷ್ಟ್ರಭಕ್ತಿ, ಸ್ವಾವಲಂಬನೆ ಅಳವಡಿಸಿಕೊಂಡು

Must Read

ರಾಷ್ಟ್ರದ ಅಭ್ಯುದಯಕ್ಕೆ ಶ್ರಮಿಸಲು ಕರೆ

ಯುವಜನತೆ ತಮ್ಮ ಬದುಕಿನಲ್ಲಿ ರಾಷ್ಟ್ರಭಕ್ತಿ ಅಳವಡಿಸಿಕೊಂಡು, ಉತ್ತಮ ಶಿಕ್ಷಣ ಪಡೆದು ಸ್ವಾವಲಂಬಿ ಜೀವನ ನಡೆಸಬೇಕು ಎಂದು ಹಿರಿಯ ಸಾಹಿತಿ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಕರೆ ನೀಡಿದರು.

ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ಕೆಸ್ತೂರು ಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ನಡೆದ ಸ್ವಾತಂತ್ರ ದಿನಾಚರಣೆಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದ ಅವರು ಮಕ್ಕಳು  ತಮ್ಮ ಪಠ್ಯದ ಜೊತೆ ಕಂಪ್ಯೂಟರ್ ಜ್ಞಾನ, ಇಂಗ್ಲೀಷ್ ಭಾಷೆಯ ಜ್ಞಾನ, ನಾಯಕತ್ವದ ಗುಣ, ಸಾಮಾನ್ಯ ಜ್ಞಾನ ಇವುಗಳನ್ನು  ಪಡೆಯಬೇಕು. ಶಿಕ್ಷಣದ ನಂತರ ಉತ್ತಮ ಉದ್ಯೋಗ ಪಡೆದು, ಸಮಾಜದ ಅಭ್ಯುದಯಕ್ಕೆ ಶ್ರಮಿಸಬೇಕು ಎಂದು ಕರೆ ನೀಡಿದರು.

ಪರಿಸರ ನಾಶದಿಂದ ರಾಷ್ಟ್ರದ ಹಲವೆಡೆ ಅತಿವೃಷ್ಟಿ ಉಂಟಾಗುತ್ತಿದ್ದು ಅಪಾರ ಪ್ರಮಾಣದ ಆಸ್ತಿ ಹಾನಿ, ಜೀವಹಾನಿ ಉಂಟಾಗುತ್ತಿದೆ. ಕಾಡಿನ ನಾಶದಿಂದಾಗಿ ಆನೆ, ಚಿರತೆ ಮೊದಲಾದ ವನ್ಯಜೀವಿಗಳು ಗ್ರಾಮಗಳಿಗೆ ನುಗ್ಗುತ್ತಿವೆ. ವಾಯುಮಾಲಿನ್ಯದಿಂದಾಗಿ ಜನರು ಹೃದಯ ಕಾಯಿಲೆ, ಶ್ವಾಸಕೋಶದ ಕ್ಯಾನ್ಸರ್ ಗಳಂತಹ ಭೀಕರ ರೋಗಗಳಿಗೆ ಬಲಿಯಾಗುತ್ತಿದ್ದಾರೆ. ಆದ್ದರಿಂದ  ಮಕ್ಕಳು ಪರಿಸರ ಸಂರಕ್ಷಣೆ ಸರ್ಕಾರದ ಕರ್ತವ್ಯವೆಂದು ನಿರ್ಲಕ್ಷಿಸಬಾರದು. ಪ್ರತಿಯೊಬ್ಬರೂ ತಮ್ಮ , ತಂದೆ-ತಾಯಿಗಳ, ಸಹೋದರ-ಸಹೋದರಿಯರ ಜನ್ಮದಿನದಂದು ಒಂದೊಂದು ಸಸಿಗಳನ್ನು ನೆಡಬೇಕು. ಅದೇ ರೀತಿ ತಮ್ಮ ಹಿರಿಯರ ನೆನಪಿನಲ್ಲಿ ಸಸಿ ನೆಡಬೇಕು. ಆ ಮೂಲಕ ಪರಿಸರ ಸಂರಕ್ಷಣೆ ಮಾಡಬೇಕೆಂದು ಕರೆ ನೀಡಿದರು.

ಕಾಲೇಜಿನ ಮುಖ್ಯಸ್ಥರಾದ ರಾಜೇಂದ್ರ ಅವರು ಧ್ವಜಾರೋಹಣ ಮಾಡಿದರು. ಉಪನ್ಯಾಸಕರಾದ  ಲೋಕೇಶ್, ನಿವೃತ್ತ ಉಪನ್ಯಾಸಕರಾದ ಕೃಷ್ಣ, ಭಗತ್ ಸಿಂಗ್ ಯೂತ್ ಫೌಂಡೇಶನ್ ಅಧ್ಯಕ್ಷರಾದ ಯೋಗೇಶ್  ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಮೊದಲಾದ ಗಣ್ಯರು ಸ್ವಾತಂತ್ರ ದಿನಾಚರಣೆಯ ಮಹತ್ವ ಕುರಿತು ಸಭೆಯಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳಾದ ವರ್ಷಿಣಿ,ಅಮೂಲ್ಯ, ಭವಾನಿ  ಸ್ವಾತಂತ್ರ್ಯ ದಿನಾಚರಣೆ ಕುರಿತು ಮಾತನಾಡಿದರು.

ಭೂದಾನಿಗಳಾದ ಬಲರಾಮೇಗೌಡ, ಗ್ರಾಮಪಂಚಾಯ್ತಿ ಅಧ್ಕ್ಷಕ್ಷರಾದ  ಜಗದೀಶ್, ಉಪಾಧ್ಯಕ್ಷರಾದ ಶ್ರೀನಿವಾಸ್, ಗ್ರಾಮದ ಮುಖಂಡರಾದ ಶಿವಕುಮಾರ್, ಪ್ರಕಾಶ್,ಭಗತ್ ಸಿಂಗ್ ಯೂತ್ ಫೌಂಡೇಶನ್ ಸಂಸ್ಥೆಯ ರಕ್ಷಿತ್, ಕೃಷ್ಣಯ್ಯ, ಚೆಲುವನ್ ಹಾಗೂ ಇತರ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರೌಢಶಾಲೆಯ ಹಿರಿಯ ಶಿಕ್ಷಕರಾದ ಬಿ.ಹೆಚ್.ಧನಂಜಯ ಸ್ವಾಗತಿಸಿದರು.ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು  ಅಂಕಗಳನ್ನು ಗಳಿಸಿದ ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು.

- Advertisement -
- Advertisement -

Latest News

ವಿಶೇಷ ಅಗತ್ಯತೆಯುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ

ಯರಗಟ್ಟಿಃ ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಮಾದರಿ ಶಾಲೆಯಲ್ಲಿ ೨೦೨೨-೨೩ ನೇ ಸಾಲಿನ ಯರಗಟ್ಟಿ ಹಾಗೂ ಮುರಗೋಡ ವಲಯಗಳ ವಿಕಲಚೇತನ ಮಕ್ಕಳ ಮೌಲಾಂಕನ ಶಿಬಿರ ಜರುಗಿತು. ಕಾರ‍್ಯಕ್ರಮದ...
- Advertisement -

More Articles Like This

- Advertisement -
close
error: Content is protected !!