spot_img
spot_img

ರಂಗಭೂಮಿಯು ಮನುಷ್ಯನನ್ನು ಮನುಷ್ಯನನ್ನಾಗಿ ಬದುಕಲು ಕಲಿಸುತ್ತದೆ. – ಝಾಕೀರ್ ನದಾಫ್

Must Read

ಸವದತ್ತಿ: ರಂಗಭೂಮಿಯು ಮನುಷ್ಯನನ್ನು ಮನುಷ್ಯನನ್ನಾಗಿ ಬದುಕಲು ಕಲಿಸುತ್ತದೆ. ಅದು ನಮ್ಮ ಬದುಕಿನಲ್ಲಿ ಎದುರಾಗುವ ಓರೆಕೋರೆಗಳನ್ನು ತಿದ್ದಿಕೊಳ್ಳಲು ಅರಿವನ್ನು ಕೊಡುತ್ತದೆ ಎಂದು ರಂಗ ನಿರ್ದೇಶಕ ಝಾಕೀರ್ ನದಾಫ್ ನುಡಿದರು.

ಅವರು ಪಟ್ಟಣದ ಕೆ.ಎಲ್.ಇ.ಸಂಸ್ಥೆಯ ಎಸ್.ವಿ.ಎಸ್. ಬೆಳ್ಳುಬ್ಬಿ ಮಹಾವಿದ್ಯಾಲಯದ ಕನ್ನಡ ವಿಭಾಗ ಮತ್ತು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಬೆಂಗಳೂರು, ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆ ಸವದತ್ತಿ ಮತ್ತು ಬೀದಿ ನಾಟಕ ಅಕಾಡೆಮಿ ಬೆಂಗಳೂರು ಇವುಗಳ ಸಹಯೋಗದಲ್ಲಿ ಬೆಳ್ಳುಬ್ಬಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಅಭಿನಯಿಸಿದ ನಾಟಕ ಜಾಳ್‌ಪೋಳ್ ಮತ್ತು ಸಿಜಿಕೆ ರಂಗ ಪ್ರಶಸ್ತಿ ಮತ್ತು ರಂಗ ಸಂಗಾತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಮಾಜದಲ್ಲಿ ಬೇರೂರಿದ ಸಾಮಾಜಿಕ, ಆರ್ಥಿಕ, ಧಾರ್ಮಿಕ ಮತ್ತು ಜಾತಿ ಅಸಮಾನತೆಗಳನ್ನು ಹೋಗಲಾಡಿಸಲು ರಂಗಭೂಮಿಯ ಸಂಸ್ಕಾರ ಇಂದಿನ ವಿದ್ಯಾರ್ಥಿಗಳಿಗೆ ಅಗತ್ಯವೆಂದು ನುಡಿದರು.

ಬೀಚಿಯವರು ತಮ್ಮ ಒಂದು ಬರಹದಲ್ಲಿ ಹೀಗೆ ಹೇಳಿದ್ದಾರೆ. ಜಾತಿ ಎನ್ನುವುದು ಇರಬೇಕು ಆದರೆ ಅದು ನಮ್ಮ ಒಳ ಉಡುಪಿನಂತಿರಬೇಕು. ನಮಗೆ ಬೇಕು ಆಗಿರಬೆಕು ಜೊತೆಗೆ ಯಾರಿಗೂ ಕಾಣದಂತೆ ನಾವು ಎಚ್ಚರ ವಹಿಸಬೇಕು ಎಂಬ ಮಾತನ್ನು ನೆನಪಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಬೀದಿ ನಾಟಕ ಅಕಾಡೆಮಿ ಬೆಂಗಳೂರು ಇವರು ಕೊಡಮಾಡುವ ಸಿಜಿಕೆ ರಂಗ ಪುರಸ್ಕಾರವನ್ನು ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆಯ ಕಲಾವಿದರಾದ ಶ್ರೀ ಶಿವಾನಂದ ತಾರಿಹಾಳ ಮತ್ತು ಪ್ರತಿಭಾ ವಕ್ಕುಂದ ಅವರಿಗೆ ಮತ್ತು ರಂಗ ಸಂಗಾತಿ ಪ್ರಶಸ್ತಿಯನ್ನು ಶ್ರೀಮತಿ ಅನಿತಾ ದಿನ್ನಿಮನಿ ಅವರಿಗೆ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಮಾರುತಿ ದೊಂಬರ ವಹಿಸಿದ್ದರು, ಶಾಂಭವಿ ಬಡಿಗೇರ ಪ್ರಾರ್ಥಿಸಿದರು, ಶ್ರೀ ಕೆ.ರಾಮರೆಡ್ಡಿ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಡಾ.ಅರುಂಧತಿ ಬದಾಮಿ ವಂದಿಸಿದರು, ಶ್ರೀಮತಿ ಸುನಂದಾ ಹತ್ತಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಪಾಲಕರು, ಹಳೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

- Advertisement -
- Advertisement -

Latest News

ಶ್ರೀ ಕೃಷ್ಣ ಜನ್ಮಾಷ್ಟಮಿ

ಸರ್ವಾಸಾಂ ಜಯಂತೀನಾಂ ಶ್ರೇಷ್ಠಾ ಕೃಷ್ಣಾಷ್ಟಮೀ ಮತಾ ಯಸ್ಮಾತ್ ಸನ್ನಿಹಿತಾತ್ಯಂತಂ ತತ್ರೈವೋಪವಸೇನ್ನರಃ ಸರ್ವಾಸ್ವಪಿ ಜಯಂತೀಷು ಪೂಜಾ ಕಾರ್ಯಾ ವಿಸೇಷತಃ ಸಾನಿಧ್ಯ ಏವ ಕರ್ತವ್ಯ ಉಪವಾಸೋ ನ ದೂರಗಃ ಎಲ್ಲ ಜಯಂತಿಗಳಲ್ಲಿಯೂ ಶ್ರೀ ಕೃಷ್ಣ...
- Advertisement -

More Articles Like This

- Advertisement -
close
error: Content is protected !!