spot_img
spot_img

ರಾಜ್ಯದಲ್ಲಿ ಮುಂದಿನ ೪-೫ ದಿನ ಮಳೆ ಸಾಧ್ಯತೆ

Must Read

spot_img
- Advertisement -

ಬೆಂಗಳೂರು – ಬಂಗಾಳ ಕೊಲ್ಲಿಯಲ್ಲಿ ಬೀಸಿರುವ ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮಳೆ ಆರಂಭವಾಗಿದೆ.

ಬರುವ 4-5 ದಿನಗಳು ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ. ಹೀಗಾಗಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ಕಲಬುರ್ಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳ ಪ್ರದೇಶಗಳಲ್ಲಿ ಇನ್ನೆರಡು ದಿನ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ.

- Advertisement -

ಶುಕ್ರವಾರ ಬೆಳಗ್ಗೆ 8 : 30 ರಿಂದ ಶನಿವಾರದವರೆಗೆ ಶಿವಮೊಗ್ಗ, ದಾವಣಗೆರೆ, ಹಾವೇರಿ, ರಾಮನರ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಹಾಗೂ ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಅ. 2ರವರೆಗೂ ಗುಡುಗು ಸಹಿತ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಕೂಡ ಮುಂದಿ‌ನ ಎರಡು ದಿನ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದಾದ್ಯಂತ ಇಂದು ಮತ್ತು ನಾಳೆ ಕೆಲವು ಜಿಲ್ಲೆಗಳಲ್ಲಿ ಗುಡುಗಿನಿಂದ ಕೂಡಿದ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

- Advertisement -
- Advertisement -

Latest News

ಶ್ರೀ ಬಸವೇಶ್ವರ ಸೊಸಾಯಿಟಿಗೆ ರಜತ ಮಹೋತ್ಸವ ಸಂಭ್ರಮ

ಮೂಡಲಗಿ -ಪಟ್ಟಣದ ಶ್ರೀ ಬಸವೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ೨೫ ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಇದೇ ದಿ. ೨೫ ರಂದು ಸಂಭ್ರಮದ ಬೆಳ್ಳಿ ಮಹೋತ್ಸವ...
- Advertisement -

More Articles Like This

- Advertisement -
close
error: Content is protected !!
Join WhatsApp Group