“ಕೋವಿಡ್ ಲಸಿಕೆ ಹಾಕಿಸಿಕೊಂಡವರು ಎಲ್ಲಿಯೂ ಸತ್ತಿರುವ ಉದಾಹರಣೆಗಳಿಲ್ಲ” – ಡಾ. ಶಿವನಗೌಡ ಹಚಡದ, ವೈದ್ಯರು

Must Read

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...

ಲೋಳಸೂರ ಹೊಸ ಸೇತುವೆ ನಿರ್ಮಿಸುವಂತೆ ನೂತನ ಸಿಎಂ ಅವರಿಗೆ ಕಡಾಡಿಯವರಿಂದ ಮನವಿ

ಮೂಡಲಗಿ: ಗೋಕಾಕ ನಗರಕ್ಕೆ ಸಂಪರ್ಕ ಕಲ್ಪಿಸುವ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ-31 ರ ಲೋಳಸೂರ ಗ್ರಾಮದ ಹತ್ತಿರ ಘಟಪ್ರಭಾ ನದಿಗೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಿಸುವಂತೆ...

ಭಾರತ ಮಾತೆಯ ಜ್ಞಾನ ಶಕ್ತಿ ಭಾರತೀಯ ಸ್ತ್ರೀಯಲ್ಲಿದೆ

ಪತಿವ್ರತೆಗೂ ಧರ್ಮ ಪತ್ನಿಗಿರುವ ವ್ಯತ್ಯಾಸವಿಷ್ಟೆ. ಪತಿವ್ರತೆ ಪತಿಯ ದಾರಿಯಲ್ಲಿ ತಾನೂ ನಡೆಯೋದು. ಧರ್ಮಪತ್ನಿ ಪತಿಯನ್ನು ಧರ್ಮದ ಹಾದಿಯಲ್ಲಿ ನಡೆಸೋದು. ಭೂಮಿ ಮೇಲೆ ಧರ್ಮ ನೆಲೆಸಬೇಕಾದರೆ ಸ್ತ್ರೀ...

ಸವದತ್ತಿ: ಕೋವಿಡ್ ಲಸಿಕೆ ಹಾಕಿಸಿಕೊಂಡವರು ಎಲ್ಲಿಯೂ ಸತ್ತಿರುವ ಉದಾಹರಣೆಗಳಿಲ್ಲ. ಸತ್ತವರ ಕಾರಣಗಳು ಹಲವಾರು ಇರುತ್ತವೆ. ಆದರೆ ಕೆಲವರು ಸುಮ್ಮನೆ ವದಂತಿಗಳನ್ನು ಹಬ್ಬಿಸುತ್ತಿರುತ್ತಾರೆ, ವದಂತಿಗಳನ್ನು ನಂಬಬೇಡಿ ಎಂದು ಸವದತ್ತಿ ತಾಲೂಕ ಆಸ್ಪತ್ರೆಯ ವೈದ್ಯರಾದ ಡಾ. ಶಿವನಗೌಡ ಹಚಡದ ನುಡಿದರು.

ಅವರು ಪಟ್ಟಣದ ಕೆ.ಎಲ್.ಇ.ಸಂಸ್ಥೆಯ ಎಸ್.ವಿ.ಎಸ್. ಬೆಳ್ಳುಬ್ಬಿ ಮಹಾವಿದ್ಯಾಲಯದ ಎನ್.ಎಸ್.ಎಸ್.ಘಟಕ, ಎನ್.ಸಿ.ಸಿ., ಯುಥ್ ರೆಡ್ ಕ್ರಾಸ್ ಮತ್ತು ತಾಲೂಕ ಆಸ್ಪತ್ರೆ ಹಾಗೂ ತಾಲೂಕ ಆಡಳಿತವು ಹಮ್ಮಿಕೊಂಡ ಬೃಹತ್ ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಲಸಿಕೆ ಹಾಕಿಸಿಕೊಂಡವರಿಗೆ ಕೊರೊನಾ ವೈರಸ್ ಬರುವದಿಲ್ಲ ಅಂತಲ್ಲ. ಲಸಿಕೆ ಹಾಕಿಸಿಕೊಂಡ ವ್ಯಕ್ತಿಯ ದೇಹದಲ್ಲಿ ಕೊರೊನಾ ವೈರಸ್ ಪ್ರವೇಶಿಸಿದರೂ ಅವನಿಗೆ ಪ್ರಾಣಾಂತಿಕ ಆಗುವಂತಹ ಯಾವ ಸಮಸ್ಯೆಗಳು ಆಗುವುದಿಲ್ಲ. ಎರಡು ಡೋಸ್ ಲಸಿಕೆ ತೆಗೆದುಕೊಂಡವರು ಆರೋಗ್ಯವಾಗಿದ್ದ ಉದಾಹರಣೆಗಳು ಇವೆ. ಹೀಗಾಗಿ ಎಲ್ಲರೂ ಸರಕಾರ ನೀಡುವ ಉಚಿತ ಲಸಿಕೆಯನ್ನು ಪಡೆಯುವ ಮೂಲಕ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಹೇಳಿದರು.

- Advertisement -

ಮತ್ತೋರ್ವ ಅತಿಥಿಗಳಾದ ಸ್ಥಾನಿಕ ಆಡಳಿತ ಮಂಡಳಿ ಸದಸ್ಯರಾದ ಶ್ರೀ ಬಿ.ವಿ.ಮಲಗೌಡರ ಮಾತನಾಡಿ ದೇಶದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನರಿಗಾಗಿ ಈ ಬೃಹತ್ ಲಸಿಕೆ ಅಭಿಯಾನವನ್ನು ಹಮ್ಮಿಕೊಂಡಿವೆ. ನೀವೆಲ್ಲರೂ ಲಸಿಕೆ ಹಾಕಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಕಿವಿ ಮಾತು ಹೇಳಿದರು.

ಇಂದು ಮಹಾವಿದ್ಯಾಲಯದಲ್ಲಿ ಒಟ್ಟು 183 ವಿದ್ಯಾರ್ಥಿಗಳು ಲಸಿಕೆ ಹಾಕಿಸಿಕೊಂಡರು.

ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಪ್ರೊ. ಮಾರುತಿ ಎ. ದೊಂಬರ ಅಧ್ಯಕ್ಷತೆ ವಹಿಸಿದ್ದರು. ಶಾಂಭವಿ ಬಡಿಗೇರ ಪ್ರಾರ್ಥಿಸಿದರು, ಪ್ರೊ. ಎಂ.ಸಿ.ಹಾದಿಮನಿ ಸ್ವಾಗತಿಸಿದರು, ವೇದಿಕೆ ಮೇಲೆ ವೈದ್ಯಾಧಿಕಾರಿಗಳಾದ ಡಾ.ಖಾಜಪ್ಪ ಹೊಸಮನಿ ಉಪಸ್ಥಿತರಿದ್ದರು, ಪ್ರೊ.ಶಿವಾನಂದ ಎಂ. ಹೊಳಿ ವಂದಿಸಿದರು, ಪ್ರೊ.ಶಿವಲೀಲಾ ಅರಹುಣಸಿ ನಿರೂಪಿಸಿದರು.

- Advertisement -
- Advertisement -

Latest News

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...
- Advertisement -

More Articles Like This

- Advertisement -
close
error: Content is protected !!