ಮನೆಗಳ್ಳನ ಬಂಧನ

Must Read

ಸಿಂದಗಿ; ಪಟ್ಟಣ ಸೇರಿದಂತೆ ತಾಲೂಕಿನ ಹಲವು ಗ್ರಾಮಗಳಲ್ಲಿ ಕಳ್ಳತನ ಕೃತ್ಯವೆಸಗುತ್ತಿದ್ದ ನಿಂಗಪ್ಪ ರಾಜಪ್ಪ ಬಡಿಗೇರ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈತ ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ರಾಜನಕೋಳೂರು ಮೂಲದವನೆಂದು ತಿಳಿದು ಬಂದಿದೆ. ಈತ ಆಗಾಗ ಸಿಂದಗಿಗೆ ಬಂದು ಕಳ್ಳತನ ನಡೆಸಿರುವ ಕುರಿತು ಬಾಯಿ ಬಿಟ್ಟಿದ್ದಾನೆಂದು ಹೇಳಲಾಗಿದೆ.

ಬುಧವಾರ ಪಟ್ಟಣದಲ್ಲಿ ಸಂಶಯ ಬರುವ ರೀತಿಯಲ್ಲಿ ತಿರುಗಾಡುತ್ತಿದ್ದನು. ಆಗ ಈತನನ್ನು ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಿದಾಗ ಪಟ್ಟಣದ ಕಲ್ಯಾಣ ನಗರ, ಮಲ್ಲಿಕಾರ್ಜುನ ನಗರ ಹಾಗೂ ಕೊಕಟನೂರು, ಸುಂಗಠಾಣ ಗ್ರಾಮಗಳಲ್ಲಿ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ. ಆರೋಪಿತನಿಂದ ಒಂದು ಬೈಕ್, ೧೦೫ ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಸಿಂದಗಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಸಿಪಿಐ ನಾನಾಗೌಡ ಪೊಲೀಸಪಾಟೀಲ, ಪಿಎಸ್‌ಐ ಆರೀಫ್ ಮುಶಾಪುರಿ ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು

Latest News

ವಿದ್ಯಾರ್ಥಿಗಳು ಅಭ್ಯಾಸದೊಂದಿಗೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು- ದೇಮಶೆಟ್ಟಿ

ಮೂಡಲಗಿ: ಇಂದಿನ ವಿದ್ಯಾರ್ಥಿಗಳು ಅಭ್ಯಾಸದೊಂದಿಗೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು, ಪ್ರತಿಯೊಂದನ್ನು ಪ್ರಶ್ನಿಸಿ ತಿಳಿದುಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಮಮದಾಪೂರ ಚಿಂತಾಮಣಿ ಪಾವಟೆ ಪ್ರೌಢಶಾಲೆಯ ನಿವೃತ್ತ ಮುಖ್ಯಾದ್ಯಾಪಕ...

More Articles Like This

error: Content is protected !!
Join WhatsApp Group