spot_img
spot_img

“ನಡೆಯಿರಿ ಹೋಗೋಣ” ಎನ್ನುತ್ತಲೇ “ಇಂಕ್ವಿಲಾಬ್ ಜಿಂದಾಬಾದ್” ಎಂದ ದೇಶಭಕ್ತ.

Must Read

- Advertisement -

(ಸರ್ದಾರ್ ಭಗತ್ ಸಿಂಗ್ ಜನ್ಮದಿನದ ಪ್ರಯುಕ್ತ ಪ್ರಸ್ತುತ ಲೇಖನ)

ಸೆಪ್ಟೆಂಬರ 28 ಕ್ರಾಂತಿಯ ಕಿಡಿ “ಭಗತ್ ಸಿಂಗ್” ಅವರ ಜನ್ಮದಿನ, ಈ ಕ್ರಾಂತಿಕಾರಿ ಹೋರಾಟಗಾರನಿಗೆ ನಮ್ಮ ಶತಕೋಟಿಯ ನಮನಗಳು. ಇವರ ತಂದೆ ಸರ್ದಾರ್ ಕಿಶನ್, ತಾಯಿ ವಿದ್ಯಾವತಿ, ಇವರಿಗೆ ಕ್ರಾಂತಿಯ ಕಿಡಿ, ಪಂಜಾಬಿನ ಪುರುಷ ಸಿಂಹ ಎಂಬ ಬಿರುದುಗಳಿದ್ದವು. ಇವರ ಪ್ರಮುಖ ಘೋಷಣೆಯೆಂದರೆ “ಇಂಕ್ವಿಲಾಬ್ ಜಿಂದಾಬಾದ್” (ಕ್ರಾಂತಿ ಚಿರವಾಗಲಿ). ಇವರು “ಹಿಂದೂಸ್ತಾನ್ ಸೋಷಿಯಲಿಸ್ಟ್ ರಿಪಬ್ಲಿಕನ್ ಅಸೋಸಿಯೇಶನ್” ಸ್ಥಾಪಕರಲ್ಲಿ ಒಬ್ಬರಾಗಿದ್ದರು.

“ಕೇವಲ ರಕ್ತಪಾತವಷ್ಟೆ ಕ್ರಾಂತಿಯಲ್ಲ. ಕ್ರಾಂತಿಯೆಂದರೆ ಬರೆ ಬಾಂಬು, ಪಿಸ್ತೂಲುಗಳ ಹೋರಾಟವಲ್ಲ. ಸ್ವಾತಂತ್ರ್ಯ ಎನ್ನುವುದೇ ಕ್ರಾಂತಿ. ಶೋಷಿತ ವ್ಯವಸ್ಥೆಯನ್ನು ಕಿತ್ತೊಗೆದು ಶ್ರಮಿಕರು ವಿಮೋಚನೆ ಪಡೆಯುವುದೇ ಕ್ರಾಂತಿ. ಅಪ್ಪಟ ಕ್ರಾಂತಿಯು ಎಂದಿಗೂ ಒಡೆಯರ, ಪ್ರಭುಗಳ, ಶೋಷಕರ ವಿರೋಧಿ” ಇದು ಭಗತ್ ಸಿಂಗ್ ಅವರ ಅಚ್ಚಳಿಯದ ನುಡಿಗಳು. ಕೇವಲ ಹನ್ನೆರಡನೆಯ ವಯಸ್ಸಿನಲ್ಲೇ ಜಲಿಯನ್ ವಾಲಾಬಾಗ್ ದುರಂತದಿಂದ ಮನನೊಂದು ದೇಶದ ಸ್ವಾತಂತ್ರ್ಯಕ್ಕಾಗಿ ತನ್ನನ್ನು ಮುಡಿಪಾಗಿಟ್ಟುಕೊಂಡ ಭಗತ್ ಸಿಂಗ್ ಅಂತಹ ಉದಾಹರಣೆಗಳು ಅಪರೂಪವಾದದ್ದು.

- Advertisement -

ಭಗತ್ ಸಿಂಗರು 1907ರ ಸೆಪ್ಟೆಂಬರ್ 28 ರಂದು ಈಗ ಪಾಕಿಸ್ತಾನಕ್ಕೆ ಸೇರಿರುವ ಲಾಯಲ್ಪುರ ಜಿಲ್ಲೆಯ ಜರಾನ್ವಾಲಾ ತಾಲ್ಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು. ಭಗತ್ ಸಿಂಗರ ಮೇಲೆ ಅತೀವ ಪ್ರಭಾವವನ್ನು ಬೀರಿದ್ದವರೆಂದರೆ ಅವರ ಚಿಕ್ಕಪ್ಪ ಅಜಿತ್ ಸಿಂಗ್. ಅಜಿತ್ ಸಿಂಗರು ಉಗ್ರ ಭಾಷಣಕಾರರಾಗಿದ್ದು ರೈತರ ನಡುವೆ ಹಲವಾರು ಚಳುವಳಿಗಳನ್ನು ಸಂಘಟಿಸಿ ಪೊಲೀಸರ ಕೈಗೆ ಸಿಗದೆ ಕಾರ್ಯನಿರ್ವಹಿಸುತಿದ್ದರು. ಈ ಪ್ರಭಾವದ ಜೊತೆಯಲ್ಲಿ ಜಲಿಯನ್ ವಾಲಾಬಾಗ್ನಲ್ಲಿ ಬ್ರಿಟೀಷರು ನಡೆಸಿದ ಮಾರಣಹೋಮದಿಂದುಂಟಾದ ರಕ್ತದ ಕೆಂಪು ಕಲೆ ಭಗತ್ ಸಿಂಗರಲ್ಲಿ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಹಬ್ಬಿಸಿ ಮನಸ್ಸಿನಲ್ಲಿ ಹೋರಾಟದ ಚಿತ್ತಾರ ಮೂಡಿಸಿತ್ತು.

ಭಗತ್ ಸಿಂಗರು ಚಂದ್ರಶೇಖರ್ ಆಜಾದ್, ಬಿ.ಕೆ. ದತ್, ಜೆ.ಸಿ.ಚಟರ್ಜಿ, ಬಿಜೊಯ್ ಕುಮಾರ್ ಸಿನ್ಹಾ, ಸಚಿಂದ್ರನಾಥ ಸನ್ಯಾಲ್, ಜೋಗೇಶ್ ಚಂದ್ರ ಚಟರ್ಜಿ, ರಾಮಪ್ರಸಾದ್ ಬಿಸ್ಮಿಲ್, ಶಿವ ವರ್ಮ, ಸುಖದೇವ್ ಮುಂತಾದ ನಿಷ್ಠಾವಂತರೊಡನೆ ದೇಶಪ್ರೇಮದಿಂದ ಮಾಡಿದ ಹಲವಾರು ಹೋರಾಟಗಳು, ಬ್ರಿಟಿಷ್ ಸರ್ಕಾರಕ್ಕೆ ಹಿಡಿಸಿದ ಭಯ, ಈ ಎಲ್ಲವುಗಳ ಹಿಂದೆ ಅಡಗಿದ್ದ ಸ್ವಾರ್ಥರಹಿತ ದೇಶಪ್ರೇಮ ನಮ್ಮ ನಾಡನ್ನು ಸದಾಕಾಲ ಜಾಗೃತಗೊಳಿಸುವಂತಹದ್ದಾಗಿವೆ.

ನೇಣುಗಂಬವೇರಿ ಸಾಯುವ ಕೆಲವೇ ನಿಮಿಷಗಳ ಮೊದಲು ಪ್ರಾರ್ಥನೆಯಂತೆ ಭಗತ್ ನುಡಿದ ಮಾತುಗಳು ಎಂಥವರನ್ನೂ ಕೆಚ್ಚೆದೆಯ ಉತ್ತುಂಗಕ್ಕೇರಿಸಬಲ್ಲವು. “ಮೊದಲು ನಿಮ್ಮ ವೈಯುಕ್ತಿಕತೆಯನ್ನು ನುಚ್ಚುನೂರು ಮಾಡಿ, ವೈಯುಕ್ತಿಕ ಸುಖದ ಕನಸನ್ನು ಭಗ್ನಗೊಳಿಸಿ, ಆ ನಂತರದಲ್ಲಿ ಕೆಲಸ ಮಾಡಲು ತೊಡಗಿ. ನೀವು ಒಂದೊಂದೇ ಅಂಗುಲ ಮುಂದಕ್ಕೆ ಸಾಗಬೇಕು. ಅದಕ್ಕೆ ಧೈರ್ಯ ಬೇಕು; ದೃಢ ನಿರ್ಧಾರ ಬೇಕು; ನಿರಂತರ ಪರಿಶ್ರಮ ಬೇಕು. ಯಾವ ಕಷ್ಟ ಕಾರ್ಪಣ್ಯಗಳೂ ನಿಮ್ಮನ್ನು ನಿರಾಶೆಗೊಳಿಸಲಾರವು. ಯಾವ ವೈಫಲ್ಯಗಳೂ ನಿಮ್ಮನ್ನು ಕಂಗೆಡಿಸಲಾರವು. ತ್ಯಾಗ ಮತ್ತು ನರಳಾಟಗಳ ಅಗ್ನಿದಿವ್ಯವನ್ನು ಹಾದು ನೀವು ವಿಜಯಶಾಲಿಗಳಾಗುತ್ತೀರಿ, ಈ ವೈಯುಕ್ತಿಕ ಗೆಲುವುಗಳು ಕ್ರಾಂತಿಯ ಬಹುದೊಡ್ಡ ಆಸ್ತಿ….”

- Advertisement -

1928 ರಲ್ಲಿ ಲಾಹೋರ್‌ಗೆ ಸೈಮನ್ ಆಯೋಗ ಬಂದಾಗ ಅದನ್ನು ಪ್ರತಿಭಟಿಸುತ್ತಿದ್ದ ಸ್ವಾತಂತ್ಯ ಹೋರಾಟಗಾರ ಲಾಲಾ ಲಜಪತ ರಾಯ್ರವರನ್ನು “ಸ್ಯಾಂಡರ್ಸ್” ಎಂಬ ಪೊಲೀಸ್ ಅಧಿಕಾರಿ ಲಾಟಿ ಚಾರ್ಜ್‌ನಿಂದ ಮರಣ ಹೊಂದಿದರು ಈ ಸೇಡನ್ನು ತೀರಿಸಿಕೊಳ್ಳಲು 1928 ಡಿಸೆಂಬರ್ 17 ರಂದು ಸ್ಯಾಂಡರ್ಸ್ ನನ್ನು ಗುಂಡಿಟ್ಟು ಕೊಂದನು

1929 ಏಪ್ರಿಲ್ 08 ರಂದು ಭಗತ್ ಸಿಂಗ್ ಮತ್ತು ಬಟುಕೇಶ್ವರ ದತ್ತ ರವರು ಕೇಂದ್ರ ಶಾಸನ ಸಭೆಯ ಮೇಲೆ ಎರಡು ಬಾಂಬ್ ಎಸೆದು “ಇಂಕ್ವಿಲಾಬ್ ಜಿಂದಾಬಾದ್” (ಕ್ರಾಂತಿ ಚಿರಾಯುವಾಗಲಿ) ಎಂದು ಹೇಳುತ್ತಾ ಶರಣಾದರು. “ಭಗತ್ ಸಿಂಗ್” “ಸುಖದೇವ್” ಮತ್ತು “ರಾಜಗುರು” ರವರನ್ನು ಲಾಹೋರ್ ಜೈಲಿನಲ್ಲಿ “ಲಾಹೋರ್ ಒಳಸಂಚು” ಕಾರಣಕ್ಕಾಗಿ ಗಲ್ಲಿಗೆ ಏರಿಸಲಾಯಿತು.

ಭಗತ್ ಸಿಂಗ್ ಅದೆಷ್ಟು ಶ್ರೇಷ್ಠ ಪುಸ್ತಕಗಳನ್ನು ಓದುತ್ತಿದ್ದರೆಂದರೆ ಸಾಯುವ ದಿನದಲ್ಲಿ ಅವರನ್ನು ನೇಣುಗಂಬಕ್ಕೆ ಕರೆದೊಯ್ಯಲು ಬಂದಾಗ ಕೂಡಾ “ಒಂದು ಕ್ಷಣ ತಡಿ ಮಹಾನ್ ಕ್ರಾಂತಿಕಾರ ಲೆನಿನ್ ಬಗ್ಗೆ ಇನ್ನೊಂದೆರಡು ವಾಕ್ಯ ಓದಿ ಬಿಡುತ್ತೇನೆ” ಎಂದು ಹೇಳಿ ಒಂದೆರಡು ಕ್ಷಣದ ನಂತರ “ನಡೆಯಿರಿ ಹೋಗೋಣ” ಎಂದರಂತೆ. 1931ರ ಮಾರ್ಚ್ 23 ರಂದು ಅವರು ನಗುನಗುತ್ತಾ ಗೆಳೆಯ ಸುಖದೇವ್, ರಾಜ್ ಗುರು ಅವರ ಜೊತೆಗೂಡಿ ಗಲ್ಲಿಗೇರಿದಾಗ ಅವರಿಗಿನ್ನೂ 23ರ ಹರೆಯ.

ಈ ಮಹಾನ್ ದೇಶಪುತ್ರನ ಜನ್ಮದಿನದ ಸಂದರ್ಭದಲ್ಲಿ ಅವರಿಗೆ ನಮನ ಸಲ್ಲಿಸೋಣ. ಇಂತಹ ಮಹನೀಯರು ದೇಶಕ್ಕೆ ಬಲಿದಾನ ಸಲ್ಲಿಸಿ ತಂದುಕೊಟ್ಟ ಸ್ವಾತಂತ್ರ್ಯಕ್ಕೆ ಯೋಗ್ಯರಾಗಿ ಬಾಳುವ ಸಂಕಲ್ಪ ಕೈಗೊಳ್ಳೋಣ.

ಎನ್.ಎನ್.ಕಬ್ಬೂರ
ಶಿಕ್ಷಕರು, ತಾ-ಸವದತ್ತಿ ಜಿ-ಬೆಳಗಾವಿ
ಮೊಬೈಲ್-9740043452
mutturaj.kabbur@gmail.com
○○○○○○○○○○○○○

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಸಮುದ್ರ ವಿಹಾರ ತಂದಿತು ಜೀವಕ್ಕೆ ಕುತ್ತು; ನೋಡನೋಡುತ್ತಲೇ ಮುಳುಗಿದ ಬೋಟ್

ಗೋವಾದಂಥ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ಕೊಟ್ಟಾಗ ಅಲ್ಲಿನ ಸಮುದ್ರದಲ್ಲಿ ವಿಹಾರ ಮಾಡುವುದು ಅತ್ಯಂತ ಹೆಚ್ಚಿನ ಬೇಡಿಕೆಯಾಗಿರುತ್ತದೆ. ಹಾಗೆಯೇ ಗೋವಾದಲ್ಲಿ ನಡೆದಿದೆಯೆಂದು ಹೇಳಲಾದ ಬೋಟ್ ಪಯಣ ಅದರ...
- Advertisement -

More Articles Like This

- Advertisement -
close
error: Content is protected !!
Join WhatsApp Group