spot_img
spot_img

ಉಳ್ಳವರು ಸಾಹಿತ್ಯ ಸೇವೆಯಲ್ಲಿ ತೊಡಗಬೇಕು – ಜಿ. ಸೋಮಶೇಖರ ರೆಡ್ಡಿ

Must Read

ಉಳ್ಳವರು ಸಾಹಿತ್ಯ-ಸಂಸ್ಕೃತಿಯ ಸಂವರ್ಧನೆಗೆ ದತ್ತಿ ದಾನಗಳನ್ನು ನೀಡುವ ಮೂಲಕ ಕನ್ನಡ ಸಾಹಿತ್ಯ ಸೇವೆಗೆ ಮುಂದಾಗಬೇಕೆಂದು ಬಳ್ಳಾರಿ ನಗರ ಶಾಸಕರಾದ ಜಿ ಸೋಮಶೇಖರರೆಡ್ಡಿ ಕರೆ ನೀಡಿದರು.

ಇಂದು ನಗರದ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಸಾಪ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ದಿ. ರುಕ್ಮಿಣಮ್ಮ ದಿ. ಚಂಗಾರೆಡ್ಡಿ ಸ್ಮರಣಾರ್ಥ ದತ್ತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಮ್ಮ ಹಿರಿಯರ ಸ್ಮರಣೆಯಲ್ಲಿ ಆಯೋಜಿಸಲಾಗಿರುವ ಈ ದತ್ತಿ ಕಾರ್ಯಕ್ರಮವು ಕನ್ನಡ ನಾಡು ನುಡಿ ನೆಲ ಜಲ ಸಾಹಿತ್ಯ ಮತ್ತು ಸಂಸ್ಕೃತಿಯ ಚಿಂತನೆಗೆ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಅರ್ಥಪೂರ್ಣ ಕಾರ್ಯಕ್ರಮವಾಗಿದೆ ಎಂದು ಸೋಮಶೇಖರ ರೆಡ್ಡಿ ತಿಳಿಸಿದರು.

ವಿಜಯನಗರದ ಅರಸರ ಕಾಲದಲ್ಲಿ ಕಲೆ ಮತ್ತು ಸಾಹಿತ್ಯಕ್ಕೆ ಮಹತ್ವದ ಸ್ಥಾನ ದೊರೆಕಿತ್ತು ಹಾಗಾಗಿ ಅನೇಕ ಮಹತ್ವದ ಕನ್ನಡದ ಕವಿಗಳು ತಮ್ಮ ಕಾವ್ಯಗಳಲ್ಲಿ ಉದಾತ್ತ ಚಿಂತನೆಗಳನ್ನು ಕಾಣಬಹುದಾಗಿದೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಕೆ.ಎಸ್. ಶಿವಪ್ರಕಾಶ್ ದತ್ತಿ ಉಪನ್ಯಾಸ ಮಾಡುತ್ತಾ ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ ಶ್ರೀದೇವಿ ಆರ್.ಎಂ. ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಕನ್ನಡ ಸಾಹಿತ್ಯ ಪರಿಷತ್ತಿನ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಅಯೋಜಿಸಿದಲ್ಲಿ ತಮ್ಮ ಕಾಲೇಜಿನಿಂದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ ಪಾಲನ್ನ, ಸರಳಾದೇವಿ ಕಾಲೇಜಿನ ಖಜಾಂಚಿಗಳಾದ ಜಿ ವೀರಶೇಖರ ರೆಡ್ಡಿ ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಸಾಪ ಜಿಲ್ಲಾಧ್ಯಕ್ಷ ಡಾ. ನಿಷ್ಠಿ ರುದ್ರಪ್ಪ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕೋಶಾಧ್ಯಕ್ಷರಾದ ಡಾ. ಬಸವರಾಜ ಗದಗಿನ ಕಾರ್ಯಕ್ರಮ ನಿರೂಪಣೆ ಮಾಡಿದರು. ಡಾ. ಎ ಎನ್ ಸಿದ್ದೇಶ್ವರಿ ವಂದನಾರ್ಪಣೆ ಮಾಡಿದರು.

- Advertisement -
- Advertisement -

Latest News

ವಿರಾಟಪುರ ವಿರಾಗಿ ಚಿತ್ರದ ವಾಲ್ ಪೋಸ್ಟರ್ ಬಿಡುಗಡೆ

ಸಿಂದಗಿ: ಹಾನಗಲ್ಲ ಗುರುಕುಮಾರ ಮಹಾಸ್ವಾಮಿಗಳವರ ಉಸಿರೇ ಸಮಾಜವಾಗಿತ್ತು ತಮ್ಮ ಬಗ್ಗೆ ಕಿಂಚಿತ್ತೂ ವಿಚಾರ ಮಾಡಿದವರಲ್ಲ ಎಂದು ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು. ಪಟ್ಟಣದ ಸಾರಂಗಮಠದಲ್ಲಿ ಹಾನಗಲ್ಲ ಶ್ರೀ...
- Advertisement -

More Articles Like This

- Advertisement -
close
error: Content is protected !!