ಮೂಡಲಗಿ:- ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಯಶಸ್ವಿಯಾದ ಹಿನ್ನೆಲೆ ಮೇ,೨೦ ರಂದು ಮಂಗಳವಾರ,ಸಂಜೆ ೪ ಗಂಟೆಗೆ ಮೂಡಲಗಿ ಪಟ್ಟಣದಲ್ಲಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ತಿಳಿಸಿದ್ದಾರೆ.
ವೀರಯೋಧರಿಗೆ ನೈತಿಕ, ಆತ್ಮ ಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು ದೇಶದ ತುಂಬೆಲ್ಲ ತಿರಂಗಾ ಯಾತ್ರೆ ನಡೆಸಲು ಕರೆ ಕೊಟ್ಟಿದ್ದಾರೆ. ಭಾರತೀಯ ವೀರಯೋಧರಿಗೆ ಈ ರೀತಿಯಾಗಿ ನಮನ ತಿಳಿಸುವ ಸಲುವಾಗಿ ಮೂಡಲಗಿಯಲ್ಲಿ ತಿರಂಗಾ ಯಾತ್ರೆ ನಡೆಸಲು ಮುಂದಾಗಿದ್ದೇವೆ ಪಕ್ಷಾತೀತವಾಗಿ ಎಲ್ಲರೂ ಭಾಗವಹಿಸಿರಿ ಎಂದು ಅರಭಾವಿ ಮತಕ್ಷೇತ್ರದ ಬಿಜೆಪಿ ಕರೆ ಕೊಟ್ಟಿದೆ.