spot_img
spot_img

ಶಿಕ್ಷಕರ ದಿನಾಚರಣೆ ನಿಮಿತ್ತ ನಿವೃತ್ತ ಹಾಗೂ ಸಾಧಕ ಶಿಕ್ಷಕರಿಗೆ ಸನ್ಮಾನ

Must Read

spot_img

ಮೂಡಲಗಿ: ಜಿ.ಪಂ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮೂಡಲಗಿ ಶೈಕ್ಷಣಿಕ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಆಶ್ರಯದಲ್ಲಿ ಸೆ. ೫ ರಂದು ಸೋಮವಾರ ಮುಂಜಾನೆ ೧೧ ಗಂಟೆಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ಪ್ರಯುಕ್ತ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ-೨೦೨೨ ನಿಮಿತ್ತ ನಿವೃತ್ತ ಶಿಕ್ಷಕರ ಸನ್ಮಾನ ಹಾಗೂ ಸಾಧಕ ಶಿಕ್ಷಕರಿಗೆ ಅಭಿನಂದನಾ ಸಮಾರಂಭವು ಅರಭಾವಿಯ ಶ್ರೀ ಬಸವೇಶ್ವರ ಸಭಾ ಭವನ ಫ್ಯಾಕ್ಟರಿ ಕ್ರಾಸ್‌ದಲ್ಲಿ ಜರುಗಲಿದೆ ಎಂದು ಬಿಇಒ ಅಜಿತ ಮನ್ನಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಗೋಕಾಕ ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ವಹಿಸುವರು.

ಸಾನ್ನಿಧ್ಯವನ್ನು ಸುಣಧೋಳಿಯ ಶ್ರೀ ಮ.ನಿ.ಪ್ರ.ಅ ಶಿವಾನಂದ ಮಹಾಸ್ವಾಮಿಗಳು, ಉದ್ಘಾಟಕರಾಗಿ ಗೋಕಾಕ ಶಾಸಕರಾದ ರಮೇಶ ಜಾರಕಿಹೊಳಿ, ಅಧ್ಯಕ್ಷತೆಯನ್ನು ಅರಭಾಂವಿ ಶಾಸಕರು, ಕೆ.ಎಂ.ಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ, ಮುಖ್ಯ ಅತಿಥಿಗಳಾಗಿ ಸಂಸದೆ ಮಂಗಳಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ವಿಧಾನ ಪರಿಷತ್ ಸದಸ್ಯರಾದ ಲಖನ್ ಜಾರಕಿಹೊಳಿ, ಚನ್ನರಾಜ ಹಟ್ಟಿಹೊಳಿ, ಪ್ರಕಾಶ ಹುಕ್ಕೇರಿ, ಹಣಮಂತ ನಿರಾಣಿ, ಅತಿಥಿ ಉಪನ್ಯಾಸಕರಾಗಿ ವಿಶ್ರಾಂತ ಪ್ರಧ್ಯಾಪಕರಾದ ಪ್ರೋ. ಚಂದ್ರಶೇಖರ ಅಕ್ಕಿ, ಮುಖ್ಯ ಅತಿಥಿಗಳಾಗಿ ಡಿ.ಡಿ.ಪಿ.ಐ ಮೋಹನಕುಮಾರ ಹಂಚಾಟೆ, ಮೂಡಲಗಿ ತಹಶೀಲ್ದಾರ ಡಿ.ಜಿ ಮಹಾತ, ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಮೂಡಲಗಿ ತಾಪಂ ಇಒ ಎಫ್.ಜಿ ಚಿನ್ನಣ್ಣವರ, ಗೋಕಾಕ ತಾಪಂ ಇಒ ಎಮ್.ಎಚ್ ದೇಶಪಾಂಡೆ, ಅರಭಾವಿ ಸಿಡಿಪಿಓ ವಾಯ್.ಕೆ ಗದಾಡಿ, ಗೋಕಾಕ ಟಿ.ಎಚ್.ಓ ಡಾ. ಮುತ್ತಣ್ಣ ಕೊಪ್ಪದ, ಮುಖ್ಯ ವೈದ್ಯಾಧಿಕಾರಿ ಡಾ. ಭಾರತಿ ಕೋಣಿ, ಮೂಡಲಗಿ ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ, ಉಪಾಧ್ಯಕ್ಷೆ ರೇಣುಕಾ ಹಾದಿಮನಿ,ಅರಭಾವಿ ಪ.ಪಂ ಮುಖ್ಯಾಧಿಕಾರಿ ತುಕಾರಾಮ ಮಾದರ, ಗೋಕಾಕ ಮ.ಉ.ಯೋ ಸಹಾಕ ನಿರ್ದೇಶಕ ಎ.ಬಿ ಮಲಬನ್ನವರ ಹಾಗೂ ಪುರಸಭೆ, ಪ.ಪಂ ಹಾಗೂ ಗ್ರಾ.ಪಂ ಸದಸ್ಯರು ಮತ್ತು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿರುವರೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
- Advertisement -

Latest News

ಪಂಚಮಸಾಲಿ ಸಮಾಜದ ಹೋರಾಟಕ್ಕೆ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಕೂಡಲ ಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ ಹೋರಾಟಕ್ಕೆ ಸಹಕಾರ ಘೋಷಣೆ ಮೂಡಲಗಿ: ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ...
- Advertisement -

More Articles Like This

- Advertisement -
close
error: Content is protected !!