ಸವದತ್ತಿ – ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕ್ಷಯರೋಗವನ್ನು ಸಂಪೂರ್ಣವಾಗಿ ಹೊಡೆದೋಡಿಸಬೇಕೆಂದರೆ ಕೇವಲ 6 ರಿಂದ 9 ತಿಂಗಳ ಕಾಲ ಔಷಧೋಪಚಾರ ಉಚಿತವಾಗಿ ಚಿಕಿತ್ಸೆ ಪಡೆದುಕೊಳ್ಳುವುದರ ಮೂಲಕ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬಹಳಷ್ಟು ದಿನಗಳಿಂದ ತೀವ್ರ ಪ್ರಮಾಣದ ಕೆಮ್ಮು ಇದ್ದರೆ ಅಂತಹವರನ್ನು ಸರಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸವುದನ್ನು ಈಗಿನ ಯುವಕರು ಮಾಡಬೇಕು. ಕ್ಷಯರೋಗವನ್ನು ಸಂಪೂರ್ಣವಾಗಿ ಹೊಡೆದೋಡಿಸಬೇಕಾದರೆ ಎಲ್ಲರ ಸಹಕಾರ ಸಂಪೂರ್ಣವಾಗಿ ಬೇಕು ಎಂದು ತಾಲೂಕಾ ವೈದ್ಯಾಧಿಕಾರಿ ಡಾ.ಮಹೇಶ ಚಿತ್ತರಗಿ ಹೇಳಿದರು
ಅವರು ಸ್ಥಳೀಯ ಸ್ವಾಮಿ ವಿವೇಕಾನಂದ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಆಚರಿಸಿದ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ ಮತ್ತು ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮವನ್ನು
ಉದ್ಘಾಟಿಸಿ ಮಾತನಾಡಿದರು.
ಈ ಕಾರ್ಯಕ್ರಮದ ಪ್ರಾರಂಭದಲ್ಲಿ ಡಾ.ಗೀತಾ ಸೂಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸ್ಥಳೀಯ ಖ್ಯಾತ ತಜ್ಞ ವೈದ್ಯರಾದ ಡಾ. ವಿಜಯ ಸಿ ನಾವದಗಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಕ್ಷಯರೋಗವು ನಮ್ಮ ಭಾರತ ದೇಶದ ಆರ್ಥಿಕತೆಯ ಮೇಲೂ ಮತ್ತು ಸಾಮಾಜಿಕ ಸ್ಥಿತಿಗತಿಗಳ ಮೇಲೂ ಸಾಕಷ್ಟು ದುಷ್ಪರಿಣಾಮ ಬೀರುತ್ತಿದೆ ಎಂದರು.
ಅತಿಥಿಗಳಾಗಿ ಆಗಮಿಸಿದ್ದ ಡಾ. ನಯನಾ ಭಸ್ಮೇ ಮಾತನಾಡಿ ಕ್ಷಯರೋಗವು ಒಬ್ಬರಿಂದ ಇನ್ನೊಬ್ಬರಿಗೆ ಅತಿ ಬೇಗ ಹರಡುವ ರೋಗವಾಗಿದೆ ಆದ್ದರಿಂದ ಕ್ಷಯರೋಗವನ್ನು ಸಂಪೂರ್ಣವಾಗಿ ಹೊಡೆದೋಡಿಸುವಲ್ಲಿ ಎಲ್ಲರ ಜವಾವ್ದಾರಿ ಇದೆ ಎಂದರು
ಕಾಲೇಜಿನ ಅಧ್ಯಕ್ಷರಾದ ಡಾ. ಮೌನೇಶ ಅರ್ಕಸಾಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯ ಮೇಲೆ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿದ ಸರಕಾರಿ ಮತ್ತು ಖಾಸಗಿ ವೈದ್ಯರಿಗೆ ಹಾಗೂ ಸಿಬ್ಬಂದಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.
ಎಸ್ ಆಯ್ ಡೋನಿ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಕನ್ನಡ ಉಪನ್ಯಾಸಕರಾದ ಬಿ ವಾಯ್ ಹೊಸೂರ.ಸ್ವಾಗತಿಸಿದರು ಎಮ್ ವಿ ಹಟ್ಟಿ ವಂದನಾರ್ಪಣೆ ಮಾಡಿದರು.