ಸಿಬಿಎಸ್ಇ ಶಿಕ್ಷಕರಿಗಾಗಿ ಎರಡು ದಿನಗಳ ಕಾರ್ಯಾಗಾರ

Must Read

ಬೆಳಗಾವಿ – ದಕ್ಷಿಣ ಮಹಾರಾಷ್ಟ್ರ ಶಿಕ್ಷಣ ಮಂಡಳಿಯ ಜ್ಯೋತಿ ಸೆಂಟ್ರಲ್ ಶಾಲೆಯಲ್ಲಿ ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಸೋನಾಲಿ ಕಂಗ್ರಾಳ್ಕರ ಅವರ ಮಾರ್ಗದರ್ಶನದಲ್ಲಿ ಸಿಬಿಎಸ್‌ಇ ಶಿಕ್ಷಕರಿಗಾಗಿ “ವಿಮರ್ಶಾತ್ಮಕ ಮತ್ತು ಸೃಜನಶೀಲ ಚಿಂತನೆ” ಕುರಿತು ಎರಡು ದಿನಗಳ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

ಈ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಸಂಕೇಶ್ವರದ ಎ.ಬಿ. ಪಾಟೀಲ ಪಬ್ಲಿಕ್ ಶಾಲೆಯ ಸಂಯೋಜಕರಾದ ಶ್ರೀಮತಿ ಗುಲ್ತಾಜ್ ಖಾನ್ ಮತ್ತು ಬೆಳಗಾವಿಯ ಲವ್‌ಡೇಲ್ ಸೆಂಟ್ರಲ್ ಶಾಲೆಯ ಸಿಬಿಎಸ್‌ಇ ಆಡಳಿತಾಧಿಕಾರಿ ಶ್ರೀಮತಿ ಕವಿತಾ ಕುಲಕರ್ಣಿ ಈ ಕಾರ್ಯಾಗಾರವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.

ಬೆಳಗಾವಿ ಜಿಲ್ಲೆಯ ಸಿಬಿಎಸ್‌ಇ ಶಾಲೆಗಳಿಂದ ಒಟ್ಟು 60 ಶಿಕ್ಷಕರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು ಮತ್ತು ಕಾರ್ಯಕ್ರಮವನ್ನು ಶಾಲಾ ಶಿಕ್ಷಕಿ ಶ್ರೀಮತಿ ಕೃಪಾ ಕದಮ ನಿರ್ವಹಿಸಿದರು.

Latest News

ಗಂಡನ ಮನೆಯವರ ಕಿರುಕುಳ ; ಗೃಹಿಣಿ ಆತ್ಮಹತ್ಯೆ, ಅನಾಥವಾದ ೧೧ ತಿಂಗಳ ಮಗು

ಬೀದರ - ಗಂಡ, ಅತ್ತೆ, ಮಾವ ಸೇರಿ ಗೃಹಿಣಿಗೆ ಸತತವಾಗಿ ಮಾನಸಿಕ ಕಿರುಕುಳ ನೀಡಿದ ಕಾರಣ ಮನನೊಂದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರನಲ್ಲಿ ನಡೆದಿದೆಹೌದು...

More Articles Like This

error: Content is protected !!
Join WhatsApp Group