ಸಂವಿಧಾನ ವಿರೋಧಿ ತುರ್ತು ಪರಿಸ್ಥಿತಿ ಘೋಷಣೆ – ಅಶೋಕ ಅಲ್ಲಾಪೂರ

Must Read

ಹೊಸ ಪುಸ್ತಕ ಓದು: ಕನ್ನಡ ಸಾಹಿತ್ಯದಲ್ಲಿ ಅನುಭಾವ

ಕನ್ನಡ ಸಾಹಿತ್ಯದಲ್ಲಿ ಅನುಭಾವ ಪ್ರಧಾನ ಸಂಪಾದಕರು : ಪ್ರೊ. ಬಿ. ಬಿ. ಡೆಂಗನವರ ಪ್ರಕಾಶಕರು : ಬೆಳದಿಂಗಳು ಪ್ರಕಾಶನ, ಬೆಳಗಾವಿ, ೨೦೨೦ ಮೊ: ೯೯೦೨೪೯೫೬೯೫ ‘ಕನ್ನಡದಲ್ಲಿ ಅನುಭಾವ ಸಾಹಿತ್ಯ’ ಇದೊಂದು ಮೌಲಿಕ...

ಸ್ನೇಹಿತರ ದಿನಾಚರಣೆಯ ಶುಭಾಷಯಗಳು

ನಮ್ಮಲ್ಲಿ ಎಷ್ಟೋ ದಿನಾಚರಣೆಗಳಿವೆ. ಇದರಲ್ಲಿ ಸ್ನೇಹಕ್ಕೆ ಕೊಡುವ ಬೆಲೆ ಯಾವುದಕ್ಕೂ ಕೊಡಲಾಗದು ಎನ್ನುತ್ತಾರೆ. ಕಾರಣ ಇಲ್ಲಿ ಸ್ವಾರ್ಥ ಅಹಂಕಾರವಿರದೆ ಶುದ್ದ ಭಾವನೆಗಳ ಸಮ್ಮಿಲನವಿರುತ್ತದೆ. ಬಡವ ಬಡವನನ್ನು...

ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸಲು ಒತ್ತಾಯ

ಸಿಂದಗಿ: ರಾಜ್ಯದಲ್ಲಿ ಪಿಂಜಾರ, ನದಾಫ್ ಸಮುದಾಯಗಳು ಶಿಕ್ಷಣ, ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಹಿಂದುಳಿದಿದ್ದು ಈ ಜನಾಂಗ ಉದ್ದಾರವಾಗಬೇಕಾದರೆ ಪಿಂಜಾರ್ ಅಭಿವೃದ್ಧಿ ನಿಗಮ ಅವಶ್ಯಕತೆ ಇದೆ. ಪ್ರವರ್ಗ...

ಸಿಂದಗಿ: 25 ಜೂನ 1975 ರಂದು ಕಾಂಗ್ರೆಸ್ ನಾಯಕಿ ಶ್ರೀಮತಿ ಇಂದಿರಾ ಗಾಂಧಿ, ತುರ್ತು ಪರಿಸ್ಥಿತಿ ದೇಶಾದ್ಯಂತ ಜಾರಿ ಮಾಡಿ ದೇಶದ ಬಹುತೇಕ ವಿರೋಧಿ ನಾಯಕರನ್ನು ಹಾಗು ಪತ್ರಕರ್ತರನ್ನು ಜೈಲಿಗೆ ತಳ್ಳಿದ ದಿನದ ಪ್ರತಿಭಟನಾರ್ಥ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ಕಾರ್ಯಕರ್ತರು ತೋಳಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು 46ನೇ ವರುಷದ ಕರಾಳ ದಿನವನ್ನು ಆಚರಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ ಮಾತನಾಡಿ, ಅಂದಿನ ಪ್ರಧಾನ ಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಅವರು ರಾಯ ಬರೇಲಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆ ಯಾಗಿದ್ದನ್ನು ಅಲಹಾಬಾದ್ ಹೈಕೋರ್ಟ್ ರದ್ದು ಮಾಡಿ ತೀರ್ಪು ನೀಡಿದ್ದನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದ ಪರಿಣಾಮ ಸಂವಿಧಾನ ಹಾಗು ಕಾನೂನಿಗೆ ತಲೆಬಾಗಿ ರಾಜೀನಾಮೆ ನೀಡುವ ಬದಲು ದೇಶಾದ್ಯಂತ ತುರ್ತು ಪರಿಸ್ಥಿತಿ ಜಾರಿ ಮಾಡಿ ದೇಶದ ಬಹುತೇಕ ವಿರೋಧ ಪಕ್ಷಗಳ ನಾಯಕರನ್ನು ಹಾಗು ಪತ್ರಕರ್ತರನ್ನು ಜೈಲಿಗೆ ತಳ್ಳಿ ಏಕಸ್ವಾಮಿತ್ವವನ್ನು ಸಾಧಿಸಿ ಡಾ. ಅಂಬೇಡ್ಕರ್ ಅವರ ಸಂವಿಧಾನವನ್ನು ತಳ್ಳಿ ಹಾಕಿ ತಮ್ಮದೇ ಅಧಿಕಾರ ಚಲಾಯಿಸಿದ್ದು ಜನವಿರೋಧ ವ್ಯಕ್ತ ಪಡಿಸುವಂತಾಗಿದೆ ಅದನ್ನೆಲ್ಲ ಮನವರಿಕೆ ಮಾಡುವ ನಿಟ್ಟಿನಲ್ಲಿ ಇಡೀ ದೇಶಾದ್ಯಂತ ಇಂದು ಕರಾಳ ದಿನವನ್ನಾಗಿ ಅಚರಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಶಂಭುಲಿಂಗ ಕಕ್ಕಳಮೇಲಿ, ಚಂದ್ರಶೇಖರ ನಾಗೂರ, ಮುತ್ತು ಶಾಬಾದಿ, ಶ್ರೀಶೈಲ ಯಳಮೇಲಿ, ಶ್ಯಾಮ್ ಪೂಜಾರಿ, ಬಾಬುಗೌಡ ಬಿರಾದಾರ, ರಾಹುಲ್ ತಳವಾರ  ಹಾಗೂ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇದ್ದರು.

- Advertisement -
- Advertisement -
- Advertisement -

Latest News

ಹೊಸ ಪುಸ್ತಕ ಓದು: ಕನ್ನಡ ಸಾಹಿತ್ಯದಲ್ಲಿ ಅನುಭಾವ

ಕನ್ನಡ ಸಾಹಿತ್ಯದಲ್ಲಿ ಅನುಭಾವ ಪ್ರಧಾನ ಸಂಪಾದಕರು : ಪ್ರೊ. ಬಿ. ಬಿ. ಡೆಂಗನವರ ಪ್ರಕಾಶಕರು : ಬೆಳದಿಂಗಳು ಪ್ರಕಾಶನ, ಬೆಳಗಾವಿ, ೨೦೨೦ ಮೊ: ೯೯೦೨೪೯೫೬೯೫ ‘ಕನ್ನಡದಲ್ಲಿ ಅನುಭಾವ ಸಾಹಿತ್ಯ’ ಇದೊಂದು ಮೌಲಿಕ...
- Advertisement -

More Articles Like This

- Advertisement -
close
error: Content is protected !!