Homeಸುದ್ದಿಗಳುಉಪ್ಪಾರ ಅಂತಾರಾಷ್ಟ್ರೀಯ ವಧು ವರರ ಸಮಾವೇಶ ಅರ್ಜಿ ಆಹ್ವಾನ

ಉಪ್ಪಾರ ಅಂತಾರಾಷ್ಟ್ರೀಯ ವಧು ವರರ ಸಮಾವೇಶ ಅರ್ಜಿ ಆಹ್ವಾನ

ಮೂಡಲಗಿ: ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ವತಿಯಿಂದ ಜ 8 ರಂದು ಭಾನುವಾರ ಬೆಳಗಾವಿಯ ಪ್ರತಿಷ್ಠಿತ ಹೋಟೆಲ್ ಸಂಕಮ್ ರೆಸಿಡೆನ್ಸಿನಲ್ಲಿ ಅಂತರ ರಾಷ್ಟ್ರಮಟ್ಟದ ಉಪ್ಪಾರರ ವಧು-ವರ ವೇದಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ.

ಉಪ್ಪಾರ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷ ವಿಷ್ಣು ಲಾತೂರ ಮತ್ತು ಜಿಲ್ಲಾಧ್ಯಕ್ಷ ಮಂಜುನಾಥ ರಾಜಪ್ಪನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂತಾರಾಜ್ಯ ಮತ್ತು ಅಂತಾರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಅನೇಕ ಕುಟುಂಬಗಳು ಈ ಕಾರ್ಯಕ್ರಮಕ್ಕೆ ಬರಲಿದ್ದಾರೆ. ಈಗಾಗಲೇ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿರುತ್ತದೆ. ಅರ್ಜಿಯ ನಮೂನೆಯನ್ನು ಸಮಾಜದ ಸಾಮಾಜಿಕ ಜಾಲತಾಣಗಳಲ್ಲಿ ಹಾಕಲಾಗಿದ್ದು ಸಮಾಜದ ಬಾಂಧವರು ಬರುವಾಗ ಅರ್ಜಿಯನ್ನು ಪ್ರಿಂಟ್ ಹಾಕಿಸಿಕೊಂಡು ಫೋಟೋದೊಂದಿಗೆ ವಿವರಗಳನ್ನು ಭರ್ತಿ ಮಾಡಿಕೊಂಡು ತರತಕ್ಕದ್ದು.

ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ಆಯೋಜಿಸಿರುವ ವಧು ವರ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ರಾಜ್ಯ ಉಪಾಧ್ಯಕ್ಷ ಅರಣು ಸಂವತಿಕಾಯಿ ತಿಳಿಸಿದ್ದಾರೆ. ಮಾಹಿತಿಗಾಗಿ ಸಂರ್ಕಿಸಿ 9448225046,9742716264

RELATED ARTICLES

Most Popular

error: Content is protected !!
Join WhatsApp Group