spot_img
spot_img

ದಲಿತರ ಅನುದಾನ ಗ್ಯಾರಂಟಿಗಳಿಗೆ ಬಳಕೆ ; ಖಂಡನೆ

Must Read

spot_img
- Advertisement -

ಸಿಂದಗಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳ ಅಭಿವೃದ್ಧಿಗೆ ಬಳಕೆ ಆಗಬೇಕಿದ್ದ ಈ ಸಾಲಿನ ಅನುದಾನದಲ್ಲಿನ 11 ಸಾವಿರ ಕೋಟಿ ರೂಪಾಯಿ ಹಣವನ್ನು ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿರುವ  ನಿರ್ಧಾರದಿಂದ ಸರ್ಕಾರ ಈ ಕೂಡಲೇ ಹಿಂದೆ ಸರಿಯಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಬೆಳಗಾವಿ ವಿಭಾಗದ ಉಪಾಧ್ಯಕ್ಷ ಹರ್ಷವರ್ಧನ ಪೂಜಾರಿ ಅವರು ಆಗ್ರಹಿಸಿದರು.

ತಾಲೂಕಿನ ದಂಡಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ದಲಿತ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ಮೀಸಲಿರಬೇಕಾಗಿದ್ದ ಹಣವನ್ನು ಸರ್ಕಾರದ ಗ್ಯಾರಂಟಿ ಯೊಜನೆಗಳಿಗಾಗಿ ಬಳಸುತ್ತಿರುವುದು ಖಂಡನೀಯ. ಶೋಷಿತ ಸಮುದಾಯಗಳ ಹಕ್ಕು ಕಿತ್ತುಕೊಂಡು, ತಮ್ಮ ಘೋಷಣೆ ಯೋಜನೆಗಳಿಗಾಗಿ ನಮ್ಮ ಹಣಬಳಸದೆ ಈ ಸಮುದಾಯಗಳ ವಿದ್ಯಾರ್ಥಿ ಯುವಜನರ ಹಾಗೂ ನಿರುದ್ಯೋಗ ಯುವಕರ, ಮಹಿಳೆಯರ ಮಕ್ಕಳ, ರೈತ ಕೂಲಿ ಕಾರ್ಮಿಕರ, ಒಟ್ಟಾರೆ ಈ ದಲಿತ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಅನುದಾನ ಮೀಸಲಿಡಬೇಕೆಂದು ಮುಖ್ಯಮಂತ್ರಿಗಳಿಗೆ ಆಗ್ರಹಿಸಿದರು,

ಈ ಸಂದರ್ಭದಲ್ಲಿ ಮುತ್ತು ಗುತ್ತರಗಿ, ವಿಶ್ವನಾಥ ಹರಿಜನ, ಅಶೋಕ ಮುರಡಿ, ಜೈ ಭೀಮ ರೆಡ್ಡಿ, ಕಲ್ಲಪ್ಪ ರೆಡ್ಡಿ, ಸೇರಿದಂತೆ ಅನೇಕರು ಇದ್ದರು,

- Advertisement -
- Advertisement -

Latest News

ಹನಿಗವನಗಳು

ಹನಿಗವನಗಳು 1) ಸುಳ್ಳುಗಾರರು ಹತ್ತು ನಾಲಿಗೆಯ ರಾವಣ ಹೇಳಲಿಲ್ಲ ಒಂದು ಸುಳ್ಳು ಒಂದೇ ನಾಲಿಗೆಯ ರಾಜಕಾರಣಿ ಹೇಳುತ್ತಾನೆ ದಿನಕ್ಕತ್ತು ಸುಳ್ಳು! 2) ಶೀಲಾ ನೆರೆಮನೆ ಶೀಲಾ ಪರ ಪುರುಷರೊಡನೆ ಸೇರಿ ಹೆಸರು ಕೆಡಿಸಿಕೊಂಡಳು 3) ಟಿವಿ ಹಾವಳಿ ಮನೆಯಲ್ಲಿ ಟಿವಿ ಮುಂದೆ ಸದಾ ಇರುವ ವಿದ್ಯಾ ರ್ಥಿಗಳು ಶಾಲೆಯಲ್ಲಿ ಹಿಂದೆ ಬೀಳುವರು. 4) ವಾಸ್ತವ ಕಟ್ಟುವವು...
- Advertisement -

More Articles Like This

- Advertisement -
close
error: Content is protected !!
Join WhatsApp Group