- Advertisement -
ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಜಗದೀಶಚಂದ್ರ ಭೋಸ್ ರಾಷ್ಟ್ರೀಯ ಹಸಿರು ಪಡೆಯ ವತಿಯಿಂದ ಮಕ್ಕಳಲ್ಲಿ ಪರಿಸರ ಪ್ರೇಮ ಬೆಳೆಸುವ ಉದ್ದೇಶದಿಂದ ವನಮಹೋತ್ಸವ ಆಚರಿಸಲಾಯಿತು. ಶಾಲಾ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ಆಯೋಜಿಸಿ ಪರಿಸರ ಜಾಗೃತಿ ಮೂಡಿಸಲಾಯಿತು. ಹಳೆಯ ವಿದ್ಯಾರ್ಥಿಗಳಾದ ರಾಜಶೇಖರಯ್ಯ ದೊಡವಾಡ, ಬೀರಪ್ಪ ಆಡಿನ, ಅದೃಶ ಗುಡ್ಡದ, ಮಂಜುನಾಥ ಕುಲಕರ್ಣಿ, ರವಿಚಂದ್ರಗೌಡ ಪಾಟೀಲ, ಮಂಜುನಾಥ ಅರವಟಗಿ ಕಿರಣ ಹೊಂಗಲ, ಸುನಿಲ ಮೇಲಗಿರಿ ವಿವಿಧ ಸಸಿಗಳನ್ನು ಶಾಲೆಗೆ ದೇಣಿಗೆ ನೀಡುವ ಮೂಲಕ ಪರಿಸರ ಪ್ರೇಮ ತೋರಿದ್ದು ವಿಶೇಷವಾಗಿತ್ತು.
ಮುಖ್ಯಶಿಕ್ಷಕರಾದ ಎನ್.ಆರ್.ಠಕ್ಕಾಯಿ, ಶಿಕ್ಷಕರಾದ ಜಗದೀಶ ನರಿ, ಪ್ರವೀಣ ಗುರುನಗೌಡರ, ಸುನಿಲ ಭಜಂತ್ರಿ, ರೇಖಾ ಸೊರಟೂರ, ಶಿವಾನಂದ ಬಳಿಗಾರ, ವೀರೇಂದ್ರ ಪಾಟೀಲ, ಎಸ್.ಡಿ.ಎಂ.ಸಿ ಪದಾಧಿಕಾರಿಗಳು, ಗ್ರಾಮಸ್ಥರು, ಶಾಲೆಯ ರಾಷ್ಟ್ರೀಯ ಹಸಿರು ಪಡೆಯ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡರು.