ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಜಗದೀಶಚಂದ್ರ ಭೋಸ್ ರಾಷ್ಟ್ರೀಯ ಹಸಿರು ಪಡೆಯ ವತಿಯಿಂದ ಪರಿಸರ ಸ್ನೇಹಿ ವಾತಾವರಣ ನಿರ್ಮಾಣ ಮಾಡುವುದರ ಮೂಲಕ ಮಕ್ಕಳಲ್ಲಿ ಪರಿಸರ ಪ್ರೇಮ ಬೆಳೆಸುವ ಉದ್ದೇಶದಿಂದ ವನಮಹೋತ್ಸವ ಆಚರಿಸಲಾಯಿತು.
ಶಾಲಾ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ಆಯೋಜಿಸಿ ಪರಿಸರ ಜಾಗೃತಿ ಮೂಡಿಸಲಾಯಿತು. ವಿವಿಧ ಅಲಂಕಾರಿಕ ಸಸಿಗಳನ್ನು ವಿದ್ಯಾರ್ಥಿಗಳು ಖುಷಿಯಿಂದ ನೆಟ್ಟು ನೀರುಣಿಸಿದರು.
ಮುಖ್ಯಶಿಕ್ಷಕರಾದ ಎನ್.ಆರ್.ಠಕ್ಕಾಯಿ, ಶಿಕ್ಷಕರಾದ ಜಗದೀಶ ನರಿ, ಪ್ರವೀಣ ಗುರುನಗೌಡರ, ಸುನಿಲ ಭಜಂತ್ರಿ, ಶ್ರೀಪಾಲ ಚೌಗಲಾ, ರೇಖಾ ಸೊರಟೂರ, ವೀರೇಂದ್ರ ಪಾಟೀಲ, ಶಾಲೆಯ ರಾಷ್ಟ್ರೀಯ ಹಸಿರು ಪಡೆಯ ಅಧ್ಯಕ್ಷ ಅಭಿಲಾಷ ಹೊಂಗಲ, ಕಾರ್ಯದರ್ಶಿ ಅಮೃತ ನರೇಂದ್ರಮಠ ಮತ್ತು ಸದಸ್ಯರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡರು.