ಬೆಳಗಾವಿವರೆಗೆ ವಂದೇ ಭಾರತ ಎಕ್ಸ್‌ಪ್ರೆಸ್‌

Must Read

ಬೆಳಗಾವಿ: ಜಿಲ್ಲೆಯ ಜನರ ಬಹು ದಿನಗಳ ಬೇಡಿಕೆಯಾದ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲನ್ನು ಬೆಂಗಳೂರು- ಧಾರವಾಡದಿಂದ ಬೆಳಗಾವಿಯವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ಮಂಗಳವಾರ ನ-14 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು  ಬೆಂಗಳೂರಿನಿಂದ ರೈಲು ಸಂಖ್ಯೆ (20661) ಬೆಳಿಗ್ಗೆ  05.45 ಕ್ಕೆ ಬೆಂಗಳೂರು ನಿಲ್ದಾಣದಿಂದ ಹೊರಟು ಮಧ್ಯಾಹ್ನ 01.30 ಕ್ಕೆ ಬೆಳಗಾವಿ ತಲುಪಲಿದೆ. ಬೆಳಗಾವಿಯಿಂದ ರೈಲು ಸಂಖ್ಯೆ (20662) ಮಧ್ಯಾಹ್ನ 02.00 ಕ್ಕೆ ಬೆಳಗಾವಿಯಿಂದ ಹೊರಟು ರಾತ್ರಿ 10.10 ಕ್ಕೆ ಬೆಂಗಳೂರು ನಿಲ್ದಾಣ ತಲುಪಲಿದೆ. 

ಶೀಘ್ರದಲ್ಲಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರದ ದಿನಾಂಕ ನಿಗದಿಯಾಗಲಿದೆ. ನನ್ನ ಮನವಿಗೆ ಸ್ಪಂದಿಸಿ ಶೀಘ್ರ ರೈಲಿನ ವ್ಯವಸ್ಥೆ ಮಾಡಿದ ಕೇಂದ್ರ ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ ಅವರಿಗೆ ಹಾಗೂ ರೈಲ್ವೆ ಇಲಾಖೆಗೆ ಈ ಮೂಲಕ ಧನ್ಯವಾದಗಳನ್ನು ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group