spot_img
spot_img

ವಿದ್ಯುದ್ದೀಕರಣ ಮುಗಿದ ತಕ್ಷಣ ಬೆಳಗಾವಿ-ಪುಣೆ ನಡುವೆ ವಂದೇ ಭಾರತ್ ರೈಲು ಪ್ರಾರಂಭ: ಈರಣ್ಣ ಕಡಾಡಿ

Must Read

- Advertisement -

ಮೂಡಲಗಿ: ಬೆಳಗಾವಿಯಿಂದ-ಪುಣೆ ನಡುವೆ ವಿದ್ಯುದ್ದೀಕರಣದ ಕಾಮಗಾರಿ ಮುಗಿದ ತಕ್ಷಣ ಕುಂದಾನಗರಿಯ ಜನರ ಬಹು ನಿರೀಕ್ಷೆಯ ವಂದೇ ಭಾರತ್ ರೈಲು ಸಂಚಾರ ಪ್ರಾರಂಭವಾಗಲಿದೆ ಎಂದು ಹುಬ್ಬಳಿ ನೈರುತ್ಯ ರೇಲ್ವೆ ವಲಯ ಪ್ರಯಾಣಿಕರ ಸಲಹಾ ಮಂಡಳಿ ಸದಸ್ಯ ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

     ಈ ಬಗ್ಗೆ ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಬೆಳಗಾವಿ-ಪುಣೆ ನಡುವೆ ವಂದೇ ಭಾರತ್ ರೈಲಿನ ಅವಶ್ಯಕತೆಯ ಬಗ್ಗೆ ಮನವರಿಕೆ ಮಾಡಿ ಮನವಿ ಮಾಡಿದ ನಂತರ ರೈಲ್ವೆ ಸಚಿವರು ಪುಣೆ- ಬೆಳಗಾವಿ ನಡುವೆ ವಿದ್ಯುದ್ದೀಕರಣ ಕಾಮಗಾರಿ ಮುಕ್ತಾಯದ ನಂತರ ವಂದೇ ಭಾರತ್ ರೈಲು ಸಂಚಾರ ಪ್ರಾರಂಭಿಸುವ ಬಗ್ಗೆ  ಲಿಖಿತವಾಗಿ ಮಾಹಿತಿಯನ್ನು ನೀಡಿದ್ದಾರೆ ಎಂದು ತಿಳಿಸಿದ್ದಾರೆ.

     ಬೆಳಗಾವಿ ಜಿಲ್ಲೆಯ ರೈಲ್ವೆಗೆ ಸಂಬಂಧಪಟ್ಟ ವಿಷಯಗಳ ಕುರಿತು ಸಚಿವರ ಗಮನಕ್ಕೆ ತಂದ ಸಂಸದ ಕಡಾಡಿ ಅವರು ಮನವಿಗೆ ಸಕಾರಾತ್ಮವಾಗಿ ಸ್ಪಂದಿಸಿ, ಪ್ರಸ್ತಾವನೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದರು.            

- Advertisement -

ಈ ಸಂದರ್ಭದಲ್ಲಿ ಬೆಳಗಾವಿ ಕೋರ್ ಡೆವಲಪ್‌ಮೆಂಟ ಗ್ರೂಪ್ ಸದಸ್ಯರಾದ ಶೈಲೇಶ್ ಯಲಮಳ್ಳಿ, ಅಶ್ವಿನ್ ಪಾಟೀಲ, ಸಂದೀಪ ಪಾಟೀಲ ಉಪಸ್ಥಿತರಿದ್ದರು.

- Advertisement -
- Advertisement -

Latest News

ಮೈಸೂರು ರೋಟರಿ ಐವರಿ ಸಿಟಿ ವತಿಯಿಂದ ಮಾರ್ಗದರ್ಶಕ ಪ್ರಶಸ್ತಿ

ಮೈಸೂರು -ಮೈಸೂರು ನಗರದ ರೋಟರಿ ಐವರಿ ಸಿಟಿ ಅಫ್ ಮೈಸೂರು ವತಿಯಿಂದ ಜಯಲಕ್ಷ್ಮಿ ಪುರಂನ ಸತ್ಯ ಸಾಯಿಬಾಬಾ ಶಿಕ್ಷಣ ಸಂಸ್ಥೆಯ ಗೌರವ ಅಧ್ಯಕ್ಷರಾದ ಪ್ರೊಫೆಸರ್ ಕೆ.ಬಿ.ಪ್ರಭು...
- Advertisement -

More Articles Like This

- Advertisement -
close
error: Content is protected !!
Join WhatsApp Group