ಸಿಂದಗಿ: ಕನ್ನಡ ರಾಜ್ಯೋತ್ಸವದ ನಿಮಿತ್ತ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ನ.12 ರಂದು ಬಸವ ಮಂಟಪದಲ್ಲಿ ಹಮ್ಮಿಕೊಂಡಿರುವ ಕನ್ನಡ ರಾಜ್ಯೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದ ಅಂಗವಾಗಿ ಶಾಲಾ- ಕಾಲೇಜು ಮಕ್ಕಳಿಗೆ ನ. 5 ರಂದು ಬೆಳಿಗ್ಗೆ 10.30 ಗಂಟೆಗೆ ಪಟ್ಟಣದ ಶ್ರೀ ಸಂಗಮೇಶ್ವರ ವಿದ್ಯಾಲಯದಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಅದರಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನ. 12 ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನ ನೀಡಲಾಗುವುದು ಎಂದು ಕಸಾಪ ತಾಲೂಕಾಧ್ಯಕ್ಷ ರಾಜಶೇಖರ ಕೂಚಬಾಳ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಸ್ಪರ್ಧೆಗಳು ಪ್ರೌಢ ಶಾಲಾ ಮಕ್ಕಳಿಗೆ ಕನ್ನಡ ಸಾಹಿತ್ಯ, ಸಂಸ್ಕೃತಿಗೆ ಸಂಬಂಧಿಸಿದಂತೆ ರಸಪ್ರಶ್ನೆ ಕಾರ್ಯಕ್ರಮ, ಕನ್ನಡದ ಪರಂಪರೆಗೆ ಸಂಬಂಧಿಸಿದ ಚಿತ್ರಕಲಾ ಸ್ಪರ್ಧೆ, ಶುದ್ದ ಓದು ಶುದ್ದ ಬರಹ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಭಾಗವಹಿಸಬೇಕು.
ಸಿಂದಗಿ ತಾಲೂಕಿಗೆ ಸಂಬಂಧಿಸಿದಂತೆ 2021-22 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರಿಕ್ಷೇಯಲ್ಲಿ ಕನ್ನಡ ವಿಷಯದಲ್ಲಿ 125 ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳು ಮತ್ತು ಪಿಯುಸಿ ದ್ವಿತೀಯ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 100 ಕ್ಕೆ 100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ ಅಂತಹ ವಿದ್ಯಾರ್ಥಿಗಳು ಕಸಾಪ ಗೌರವ ಕಾರ್ಯದರ್ಶಿ ಶಿವಕುಮಾರ ಕಲ್ಲೂರ. 8884446648, ಪತ್ರಿಕಾ ಪ್ರತಿನಿಧಿ ಪಂಡಿತ ಯಂಪೂರೆ- 9620038013 ಇವರನ್ನು ಸಂಪರ್ಕಿಸಿ ಹೆಸರು ನೊಂದಾಯಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.