ಕೋರೋನಾ ಹಿನ್ನಲೆಯಲ್ಲಿ ವೀಡಿಯೋ ಸಂವಾದ

Must Read

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಟೈಮ್ಸ್ ಆಫ್ ಕರ್ನಾಟಕ ವರದಿಗೆ ಸ್ಪಂದನೆ ; ಅಕ್ರಮ ಮರಳು ದಂಧೆಯ ಬಗ್ಗೆ ಸ್ಪಷ್ಟೀಕರಣ ನೀಡಿದ ಎಸಿ

ಸಿಂದಗಿ: "ಅಕ್ರಮ ಮರಳು ಸಾಗಾಟ ನಿರಂತರ ; ಜಾಣ ಕುರುಡರಾದ ಅಧಿಕಾರಿಗಳು " ಎಂಬ ಶೀರ್ಷಿಕೆಯಲ್ಲಿ ನಮ್ಮ ಟೈಮ್ಸ ಆಫ್ ಕರ್ನಾಟಕ ವೆಬ್ ಪತ್ರಿಕೆಯಲ್ಲಿ ದಿ....

ಸವದತ್ತಿ: “ಮಹಾಮಾರಿ ಕೊರೋನಾ ರೋಗವು ಇಡೀ ಜಗತ್ತನ್ನೇ ಆವರಿಸಿದೆ ಅದನ್ನು ನಾವೆಲ್ಲರೂ ನಮ್ಮ ದೇಶದಿಂದ ಹೊಡೆದೋಡಿಸಬೇಕಾಗಿದೆ ಆದ್ದರಿಂದ ತಾಲೂಕಿನ ಸಾರ್ವಜನಿಕರು ಮೊದಲು ತಮ್ಮ ತಮ್ಮ ಜೀವವನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು ಜೀವ ಉಳಿದರೆ ಜೀವನ.

ಆ ನಿಟ್ಟಿನಲ್ಲಿ ಎಲ್ಲರೂ ಆಲೋಚಿಸಬೇಕು. ಎಲ್ಲರೂ ಕೊವೀಡ್ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು. ಎಲ್ಲ ವ್ಯಾಪಾರಸ್ಥರು ಬೆಳಿಗ್ಗೆ 6 ಘಂಟೆಯಿಂದ 10 ಘಂಟೆಯವರೆಗೆ ಮಾತ್ರ ವ್ಯಾಪಾರ ವಹಿವಾಟು ಮಾಡಬೇಕು.

ತಾಲೂಕಿನ ಯಾವ ಗ್ರಾಮಗಳಲ್ಲಿಯೂ ಮದುವೆ ಸಮಾರಂಭಗಳಿಗೆ ಸಂತೆ ಜಾತ್ರೆಗಳಿಗೆ ಅವಕಾಶ ಇರುವುದಿಲ್ಲ ಈ ಒಂದು ಸರಕಾರದ ಆದೇಶವನ್ನು ಎಲ್ಲರೂ ಪಾಲಿಸಬೇಕು. ಜೀವ ಇದ್ದರೆ ಜೀವನ ಎಂದು ಉಪ ಸಭಾಧ್ಯಕ್ಷ ಆನಂದ ಮಾಮನಿ ಮಾತನಾಡಿದರು.

- Advertisement -

ಅವರು ತಾಲೂಕು ಪಂಚಾಯತ ಸಭಾಭವನದಲ್ಲಿ ಕೋರೋನಾ ಮತ್ತು ಉದ್ಯೋಗ ಖಾತರಿ ಅನುಷ್ಠಾನ ಎಂಬ ವಿಷಯವಾಗಿ ತಾಲೂಕಾ ಮಟ್ಟದ ಅಧಿಕಾರಿಗಳ ಮತ್ತು ಎರಡೂ ಪುರಸಭೆ ಮುಖ್ಯಾಧಿಕಾರಿಗಳು ತಾಲೂಕಿನ ಎಲ್ಲ ಗ್ರಾಮ ಪಂಚಾಯತ ಅಧ್ಯಕ್ಷರು ಸದಸ್ಯರು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ವಿಡಿಯೋ ಸಂವಾದವನ್ನು ತಮ್ಮ ಮನೆಯಲ್ಲಿಯೇ ಕುಳಿತು ನಡೆಸಿದರು.

ಉಪ ಸಭಾಧ್ಯಕ್ಷ ಆನಂದ ಮಾಮನಿಯವರು ವೀಡಿಯೋ ಸಂವಾದದಲ್ಲಿ ಮಾತನಾಡುತ್ತಿರುವ ಚಿತ್ರ

ಇತ್ತೀಚೆಗೆ ಕೋರೋನಾ ದೃಡಪಟ್ಟಿದ್ದರಿಂದ ಮನೆಯಲ್ಲಿಯೇ ಕುಳಿತು ವಿಡಿಯೋ ಸಂವಾದ ನಡೆಸಿ ಕೊಟ್ಟರು.

ಮುಂದುವರೆದು ಮಾತನಾಡುತ್ತ “ ತಾಲೂಕಾ ಮಟ್ಟದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಮಾಸ್ಕ ಧರಿಸಿ ಸೈನಿಟೈಝರ ಬಳಕೆ ಮಾಡುವುದನ್ನು ಮಾಡಲೇಬೇಕು ಮತ್ತು ಸರಕಾರದ ಕೋವಿಡ್ ಮಾರ್ಗಸೂಚಿಯಲ್ಲಿ ಏನಾದರೂ ಮಾರ್ಪಾಡು ಮಾಡುವುದಾದರೆ ತಹಶೀಲ್ದಾರ ಮತ್ತು ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಸಂಪರ್ಕಿಸಬೇಕು.

ಪಂಚಾಯತ ಅಭಿವೃದ್ದಿ ಅಧಿಕಾರಿಗಳ ಕುರಿತು ಮಾತನಾಡಿದ ಅವರು ಬಹಳಷ್ಟು ಪಂಚಾಯತ ಗಳಲ್ಲಿ ಜಲಜೀವನ ಮಿಷನ್ ಕಾಮಗಾರಿ ಸರಿಯಾಗಿ ನಡೆಯುತ್ತಿಲ್ಲ ಕುಡಿಯುವ ನೀರಿನ ಕಾಮಗಾರಿ ಸರಿಯಾಗಿ ನಡೆಯುತ್ತಿಲ್ಲವೆಂದು ಸಾರ್ವಜನಿಕರು ದೂರು ನೀಡುತ್ತಿದ್ದಾರೆ.

ಆದ್ದರಿಂದ ತಹಶಿಲ್ದಾರ ಮತ್ತು ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಆ ಕಾಮಗಾರಿಗಳನ್ನು ಮತ್ತು ಉದ್ಯೋಗ ಖಾತರಿ ಯೋಜನೆಗಳನ್ನು ಪರಿಶೀಲಿಸಬೇಕು ಮತ್ತು ಗ್ರಾಮಗಳಲ್ಲಿ ಗ್ರಾಮ ಪಂಚಾಯತ ಸದಸ್ಯರು ಮತ್ತು ಟಾಸ್ಕಪೋರ್ಸ ಕಮಿಟಿಯವರೆ ಜವಾಬ್ದಾರಿಯಿಂದ ಗ್ರಾಮದ ಜನರಲ್ಲಿ ಸೌಜನ್ಯದಿಂದ ನಡೆದುಕೊಂಡು ಕೊರೋನಾ ನಿಯಮಾವಳಿಗಳನ್ನು ಪಾಲಿಸಬೇಕು.ಪೋಲಿಸರಿಂದಲೇ ಎಲ್ಲವನ್ನೂ ಮಾಡಿಸಬಾರದು.

ತಮ್ಮ ಹಂತದಲ್ಲಿ ಎಷ್ಟು ಸಾಧ್ಯವೋ ಅಷ್ಟು ಸೌಜನ್ಯ ಮತ್ತು ಸಹಕಾರದಿಂದ ಮಾಡುವುದು ಸೂಕ್ತ. ತಾಲೂಕಾ ಮಟ್ಟದ ಅಧಿಕಾರಿಗಳು ಮತ್ತು ಪಂಚಾಯತ ಸಿಬ್ಬಂದಿಗಳು ಪಿಡಿಓ ಗಳು ರಜೆಯ ಮೇಲೆ ಯಾರೂ ಹೋಗಬಾರದು ಕಡ್ಡಾಯವಾಗಿ ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸಬೇಕು.

ತಾಲೂಕಿನ ಯರಝರ್ವಿ ಬುದಿಗೊಪ್ಪ ಗಳ ಪಿಎಚ್‍ಸಿ ಗಳಿಂದ ವರ್ಗಾವಣಿಯಾದ ವೈದ್ಯರನ್ನು ಪುನಃ ಅಲ್ಲಿಯೇ ಕಾರ್ಯನಿರ್ವಹಿಸುವಂತೆ ಆದೇಶ ಮಾಡಬೇಕು” ಎಂದು ಅಧಿಕಾರಿಗಳಿಗೆ ಹೇಳಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಶಾಂತ ಬಿ ಪಾಟೀಲ. ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಯಶ್ವಂತಕುಮಾರ ಸಿಪಿಐ ಮಂಜುನಾಥ ನಡುವಿನಮನಿ. ತಾಲೂಕಾ ವೈದ್ಯಾಧಿಕಾರಿಕಾರಿ ಡಾಕ್ಟರ ಮಹೇಶ ಚಿತ್ತರಗಿ.ಸಂಗನಗೌಡಾ ಹಂದ್ರಾಳ. ಸೇರಿದಂತೆ ತಾಲೂಕಾ ಮಟ್ಟದ ಎಲ್ಲ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -
- Advertisement -

Latest News

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...
- Advertisement -

More Articles Like This

- Advertisement -
close
error: Content is protected !!