ವಿದ್ಯಾ ರೆಡ್ಡಿಗೆ ಸಿರಿಗನ್ನಡ ರಾಜ್ಯೋತ್ಸವ ಪ್ರಶಸ್ತಿ

Must Read

ಗೋಕಾವಿಯ ಯುವ ಸಾಹಿತಿ ವಿದ್ಯಾ ರೆಡ್ಡಿ ಇವರ ಸಾಹಿತ್ಯ ಹಾಗೂ ಸಾಮಾಜಿಕ ಕ್ಷೇತ್ರಗಳ ಸೇವೆಯನ್ನು ಗುರುತಿಸಿ ಬೆಳಗಾವಿಯ ಸಪ್ತ ಸ್ವರ ಸಂಗೀತ ಕಲಾ ಬಳಗವು ಸಿರಿಗನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.

ಅಕ್ಟೋಬರ್ 31 ರಂದು ಬೆಳಗಾವಿ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದು, ಬೈಲಹೊಂಗಲ ಆರಾಧ್ಯಮಠದ ವೇದಮೂರ್ತಿ ಡಾ. ಮಹಾಂತೇಶ ಶಾಸ್ತ್ರಿಗಳು ಹಾಗೂ ಮಲ್ಲಮ್ಮನ ಬೆಳವಡಿಯ ವೇದಮೂರ್ತಿ ಬಸಯ್ಯಸ್ವಾಮಿಗಳ ದಿವ್ಯಸಾನ್ನಿಧ್ಯದಲ್ಲಿ ಬೆಳಗಾವಿ ಲೋಕಸಭಾ ಸದಸ್ಯೆ ಮಂಗಳಾ ಅಂಗಡಿ ಹಾಗೂ ಕೆಪಿಸಿಸಿ ಅಧ್ಯಕ್ಷ ಮತ್ತು ಯಮಕನಮರ್ಡಿ ಶಾಸಕ ಸತೀಶ್ ಜಾರಕಿಹೊಳಿ ಅವರು ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಸಂಘಟನೆಯ ಪ್ರಕಟನೆ ತಿಳಿಸಿದೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group