ಬೀದರ – ಔರಾದ ಪಟ್ಟಣದ ಆದರ್ಶ ವಿದ್ಯಾಲಯದಲ್ಲಿ ಶುದ್ದ ಕುಡಿಯುವ ನೀರಿನ ಘಟಕ ಇಲ್ಲದಿದ್ದದ್ದು ನನ್ನ ಗಮನಕ್ಕೆ ಬಂದಿದ್ದು ಕೂಡಲೇ ನಮ್ಮ ಕಾರ್ಯಕರ್ತರನ್ನು ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರು ಇಲ್ಲದೆ ಇರುವದನ್ನು ಕಂಡು ನಮ್ಮ ಅನುದಾನದಲ್ಲಿ 2.5 ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡಿ ಕೂಡಲೆ ವಿದ್ಯಾರ್ಥಿಗಳಿಗೆ ಶುದ್ದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಯಿತು.
ಇನ್ನೂ ತಾಲೂಕಿನಲ್ಲಿ ಹಲವು ಸಮಸ್ಯೆಗಳು ನನ್ನ ಗಮನಕ್ಕೆ ಬಂದಿದ್ದು ಅವುಗಳಿಗೆ ಮುಂದಿನ ದಿನಮಾನಗಳಲ್ಲಿ ಪರಿಶಿಲಿಸಿ ಸರಿಪಡಿಸುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿ ಜಿಲ್ಲಾ ಉಸ್ತುವಾರಿ ತವರೂರಾದ ಔರಾದ ನಲ್ಲಿ ವಿಧಾನ ಪರಿಷತ್ ಸದಸ್ಯ ವಿಜಯ ಸಿಂಗ್ ಹೇಳಿದರು.
ತಾಲೂಕಿನಲ್ಲಿ ಯಾವುದೇ ಗಮನಾರ್ಹ ಕೆಲಸ ಮಾಡದ ಪ್ರಭು ಚವ್ಹಾಣ ಅವರಿಗೆ ಟಾಂಗ್ ಕೊಟ್ಟಿದ್ದಾರೆ ಎನ್ನಲಾಗುತ್ತಿದ್ದು ಕಾದು ನೋಡಬೇಕು ಔರಾದ ತಾಲೂಕು ವಿಧಾನ ಪರಿಷತ್ ಸದಸ್ಯರಿಂದ ಯಾವ ರೀತಿಯ ಬದಲಾವಣೆ ಆಗುತ್ತದೆ ಎಂದು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
ಇದೆ ಸಂದರ್ಭದಲ್ಲಿ ಆದರ್ಶ ವಿದ್ಯಾಲಯದ ಪ್ರಾಂಶುಪಾಲರಾದ ಧೂಳಪ್ಪಾ ಮಾಳನೂರ ಮಾತನಾಡಿ ವಿದ್ಯಾರ್ಥಿಗಳಿಗೆ ಶುದ್ಧ ನೀರಿನ ವ್ಯವಸ್ಥೆ ಕಲ್ಪಿಸಿ ಕೊಟ್ಟಿದ್ದಕ್ಕಾಗಿ ಶಾಲೆಯ ಸಿಬ್ಬಂದಿ ಹಾಗೂ ಮಕ್ಕಳ ಪರವಾಗಿ ಅಭಿನಂದಿಸಿದರು.