- Advertisement -
ಬೀದರ – ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಯಾರೂ ಕ್ಯಾರೆ ಅನ್ನುತ್ತಿಲ್ಲ. ಸರ್ಕಾರಕ್ಕೂ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಮನಸ್ಸು ಇದ್ದಂತಿಲ್ಲ. ಹೀಗಾಗಿ ಗೋವುಗಳ ಹತ್ಯೆ ವ್ಯಾಪಕವಾಗಿ ನಡೆಯುತ್ತಿದೆ.
ಬೀದರ್ ಜಿಲ್ಲೆಯ ಹುಮನಾಬಾದ್ ಪಟ್ಟಣದ ಹೊರವಲಯದಲ್ಲಿ ಗೋ ಹತ್ಯೆ ನಡೆದಿದ್ದು ಸುದ್ದಿ ತಿಳಿದ ತಕ್ಷಣ ಪೊಲೀಸರು ದಾಳಿ ನಡೆಸಿ ಕಟುಕರನ್ನು ಬಂಧಿಸಿದ್ದಾರೆ.
ಗೋ ಹತ್ಯೆ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಸಿಪಿಐ ಶರಣ ಬಸಪ್ಪ ಕೊಡ್ಲಾ ಅವರು ಎರಡು ಗೋವುಗಳನ್ನ ರಕ್ಷಣೆ ಮಾಡಿದ್ದಾರೆ. ಅಷ್ಟರಲ್ಲಿಯೇ ಕೆಲವು ಗೋವುಗಳ ಹತ್ಯೆ ನಡೆದಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
- Advertisement -
ವರದಿ: ನಂದಕುಮಾರ ಕರಂಜೆ, ಬೀದರ