- Advertisement -
ಮೂಡಲಗಿ: ಪಟ್ಟಣದ ಲಕ್ಷ್ಮಿ ನಗರದ ಶ್ರೀ ಕಾಳಿಕಾದೇವಿ ದೇವಸ್ಥಾನದಲ್ಲಿ, ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಸೆ.17ರಂದು ಶ್ರೀ ವಿಶ್ವಕರ್ಮ ಜಯಂತಿಯನ್ನು ಅತೀ ವಿಜೃಂಭಣೆಯಿಂದ ಆಚರಿಸಲಾಗುವುದು.
ಶನಿವಾರ ಮುಂಜಾನೆ 8 ಗಂಟೆಗೆ ಧ್ವಜಾರೋಹಣ, 9-00 ಗಂಟೆಗೆ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಶ್ರೀ ವಿಶ್ವಕರ್ಮ ಭಾವಚಿತ್ರದೊಂದಿಗೆ, ಮೆರವಣಿಗೆ, 11-00 ಗಂಟೆಗೆ ಸನ್ಮಾನ ಕಾರ್ಯಕ್ರಮ ನಂತರ ಮಧ್ಯಾನ್ಹ 1-00 ಗಂಟೆಗೆ ಪ್ರಸಾದ ವಿರುತ್ತದೆ.
ಕಾರ್ಯಕ್ರಮದಲ್ಲಿ ಶ್ರೀ ದತ್ತಾತ್ರೇಯಬೋಧ ಸ್ವಾಮಿಗಳು ಸಿದ್ಧ ಸಂಸ್ಥಾನ ಮಠ ಮೂಡಲಗಿ ಇವರು ದಿವ್ಯ ಸಾನ್ನಿಧ್ಯ ವಹಿಸುವರು ಹಾಗೂ ಮುಖ್ಯ ಅತಿಥಿಗಳಾಗಿ ಅರಭಾವಿ ಶಾಸಕರು ಹಾಗೂ ಕೆಎಮ್.ಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಭಾಗವಹಿಸಲಿದ್ದಾರೆ ಎಂದು ಶ್ರೀ ಕಾಳಿಕಾದೇವಿ ಟ್ರಸ್ಟ್ ಕಮೀಟಿಯವರು ತಿಳಿಸಿದ್ದಾರೆ.