spot_img
spot_img

ಸಾಹಿತಿ , ಕನ್ನಡಪರ ಚಿಂತಕ ಡಾ.ಭೇರ್ಯ ರಾಮಕುಮಾರ್ ಅವರಿಗೆ ಸ್ವಾಮಿ ವಿವೇಕಾನಂದ ಪ್ರಶಸ್ತಿ

Must Read

spot_img
- Advertisement -

ಮೈಸೂರಿನ ಹಿರಿಯ ಸಾಹಿತಿ , ಪತ್ರಕರ್ತ, ಕನ್ನಡಪರ ಚಿಂತಕ ಹಾಗೂ ಪರಿಸರ ಪ್ರೇಮಿ ಡಾ.ಭೇರ್ಯ ರಾಮಕುಮಾರ್ ಅವರು ಬೆಂಗಳೂರಿನ ಚೈತನ್ಯ ಅಂತರ ರಾಷ್ಟ್ರೀಯ ಆರ್ಟ್ಸ್ ಅಕಾಡೆಮಿ ನೀಡುವ ಸ್ವಾಮಿ ವಿವೇಕಾನಂದ ರಾಜ್ಯಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.

ಗ್ರಾಮಾಂತರ ಬುದ್ಧಿಜೀವಿಗಳ ಬಳಗದ ಅಧ್ಯಕ್ಷರಾಗಿ 354 ಸಾಹಿತ್ಯ ಕಾರ್ಯಕ್ರಮಗಳ ಸಂಘಟನೆ , ಉದಯೋನ್ಮುಖ ಬರಹಗಾರರ 303 ಸಾಹಿತ್ಯ ಕೃತಿಗಳ ಪ್ರಕಟಣೆ, ಸಾಮೂಹಿಕ ನೇತ್ರದಾನ ಕಾರ್ಯಕ್ರಮದ ಮೂಲಕ ನೇತ್ರದಾನ ಮಾಡಲು ಎಂಟು ಸಾವಿರಕ್ಕೂ ಹೆಚ್ಚು ಜನರ ಮನ ಒಲಿಸುವಿಕೆ , ಐದು ನೂರಕ್ಕೂ ಹೆಚ್ಚು ಶಾಲಾ ಕಾಲೇಜುಗಳಲ್ಲಿ ಪರಿಸರ ಸಂರಕ್ಷಣೆ ಕುರಿತು ಉಪನ್ಯಾಸ ಹಾಗೂ ಹತ್ತು ಸಾವಿರಕ್ಕೂ ಹೆಚ್ಚು ಸಸಿಗಳ ಉಚಿತ ವಿತರಣೆ …ಈ ಸಾಧನೆಗಳನ್ನು ಪರಿಗಣಿಸಿ ಸ್ವಾಮಿ ವಿವೇಕಾನಂದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾಗಿ ಕನ್ನಡ ಭಾಷೆ ಬಳಸದ ಐದು ನೂರಕ್ಕೂ ಹೆಚ್ಚು ಅನ್ಯ ಭಾಷಾ ಫಲಕಗಳ ಬಗ್ಗೆ ದೂರು ಸಲ್ಲಿಕೆ, ಕನ್ನಡ ಭಾಷೆ ಬಳಸದ ಬ್ಯಾಂಕ್ ಸಿಬ್ಬಂದಿಗಳ ವಿರುದ್ಧ ದೂರು , ಐದು ನೂರಕ್ಕೂ ಹೆಚ್ಚು ಶಾಲಾ ಕಾಲೇಜುಗಳಲ್ಲಿ ಕನ್ನಡ ನಾಡು – ನುಡಿಯ ಮಹತ್ವ ಕುರಿತು ಉಪನ್ಯಾಸ ,ಆಯ್ದ ಶಾಲಾ ಕಾಲೇಜುಗಳಿಗೆ ಜ್ಞಾನ ಪೀಠ ಪ್ರಶಸ್ತಿ ವಿಜೇತ ಕನ್ನಡ ಭಾವ ಚಿತ್ರಗಳ ನೀಡಿಕೆ ಮಾಡುವ ಮೂಲಕ ಸಾಹಿತಿ ಭೇರ್ಯ ರಾಮಕುಮಾರ್ ಸುವರ್ಣ ಕರ್ನಾಟಕಕ್ಕೆ ತಮ್ಮದೇ ಅದ ಮಹತ್ವದ ಕೊಡುಗೆ ನೀಡಿದ್ದಾರೆ.ಈ ಕೊಡುಗೆಗಳನ್ನು ಪರಿಗಣಿಸಿ ಭೇರ್ಯ ರಾಮಕುಮಾರ್ ಅವರನ್ನು ಸ್ವಾಮಿ ವಿವೇಕಾನಂದ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಚೈತನ್ಯ ಆಕಾಡೆಮಿ ಪ್ರಕಟಣೆ ತಿಳಿಸಿದೆ.

- Advertisement -

ಇವರ ಕನ್ನಡ ನಾಡು ನುಡಿ ಸೇವೆಯನ್ನು ಗುರುತಿಸಿ 2022 ರ ಮೈಸೂರು ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, 2023 ರಲ್ಲಿ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ನೀಡಿ ಇವರನ್ನು ಗೌರವಿಸಲಾಗಿದೆ.

ಮುಂಬರುವ ಜನವರಿ 6 ರಂದು ಬೆಂಗಳೂರಿನ ಕೆಂಪೇಗೌಡ ನಗರದ ಉದಯ ಭಾನು ಕಲಾಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಪುರಸ್ಕಾರ ಪ್ರದಾನ ಮಾಡಲಾಗುವುದು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

  ಅವ ಹಿಂದು ಅವ ಜೈನ ಅವ ಬೌದ್ಧ ಅವ ಸಿಖ್ಖ ಅವ ಕ್ರೈಸ್ತ ಅವ ಮಹಮದೀಯನೆಂದು ದಯಮಾಡಿ ಕರೆಯದಿರು ಬೇರೆಯವರೆನ್ನದಿರು ಅವರು ನಮ್ಮವರೆನ್ನು - ಎಮ್ಮೆತಮ್ಮ ಶಬ್ಧಾರ್ಥ ಮಹಮದೀಯ‌ = ಮುಸಲ್ಮಾನ ತಾತ್ಪರ್ಯ ಜಗತ್ತಿನಲ್ಲಿ‌ ಹಿಂದು‌,...
- Advertisement -

More Articles Like This

- Advertisement -
close
error: Content is protected !!
Join WhatsApp Group