ಅವರು ಮೂಡಲಗಿ ಪಟ್ಟಣದ ಶ್ರೀ ಮಂಜುನಾಥ ಸೈನಿಕ ತರಬೇತಿ ಕೇಂದ್ರದ ಸಭಾಂಗಣದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈ ಭಾರತ ಯುವ ಕೇಂದ್ರ ಬೆಳಗಾವಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಮತ್ತು ಜೈ ಕರ್ನಾಟಕ ಅಂಗವಿಕಲ ಗ್ರಾಮೀಣ ಅಭಿವೃದ್ಧಿ ಸಂಘ ಹಳ್ಳೂರ, ಸಂಕಲ್ಪ ಕ್ರೀಡಾ ಮತ್ತು ಸಮಾಜ ಸೇವಾ ಸಂಘ ಮೂಡಲಗಿ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಸ್ವಾಮಿ ವಿವೇಕಾನಂದರ 164ನೇ ಜನ್ಮ ದಿನೋತ್ಸವದ ಅಂಗವಾಗಿ ತಾಲೂಕ ಮಟ್ಟದ ಯುವ ಸಪ್ತಾಹ ಕಾರ್ಯಕ್ರಮವನ್ನು ಸಸಿಗೆ ನೀರು ಉಳಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ಭಾರತಮಾತೆಯ ಸ್ವರೂಪಿಯಾದ ನಮ್ಮ ತಾಯಿಯನ್ನು ಮೊದಲು ಪೂಜಿಸಬೇಕು ತಂದೆ ಮತ್ತು ತಾಯಿ ನಮ್ಮ ಪಾಲಿನ ಮೊದಲ ದೇವರು ಎಂದು ಹೇಳಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಮೂಡಲಗಿ ತಾಲೂಕ ಸರ್ಕಾರಿ ನೌಕರರ ಸಂಘದ ನಿರ್ದೇಶಕರಾದ ಶಿವಲಿಂಗಪ್ಪ ಪಾಟೀಲ್ ಮಾತನಾಡಿ ಯುವಜನರು ಸ್ವಾಮಿ ವಿವೇಕಾನಂದರ ಜೀವನ ಆದರ್ಶ ತತ್ವಗಳನ್ನು ಪಾಲನೆ ಮಾಡಬೇಕು ಮತ್ತು ದುಶ್ಚಟಗಳಿಗೆ ಬಲಿಯಾಗದೆ ಆರೋಗ್ಯವಂತ ಜೀವನ ನಡೆಸಲು ಯುವಕರಿಗೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಲಕ್ಷ್ಮಣ ಅಡಿಹುಡಿ ವಹಿಸಿದರು. ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ ವಿಜೇತರಾದ ಸಿದ್ದಣ್ಣ ದುರದುಂಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಕಲ್ಪ ಕ್ರೀಡಾ ಮತ್ತು ಸಮಾಜ ಸೇವಾ ಸಂಘದ ಅಧ್ಯಕ್ಷ ಸುಭಾಸ ಗೊಡ್ಯಾಗೋಳ, ಮೂಡಲಗಿಯ ಜಾನಪದ ಜಾಣ ಶಬ್ಬೀರ್ ಡಾಂಗೆ, ಸಂಸ್ಥೆಯ ಮುಖ್ಯ ಆಡಳಿತ ಅಧಿಕಾರಿ ಮಹಾಂತೇಶ ಕೊಟ್ಟಬಾಗಿ, ಆನಂದ ಸುಳ್ಳನ್ನವರ, ಶಿಲ್ಪಾ ಗದಾಡಿ, ಲಕ್ಷ್ಮೀಬಾಯಿ ಜೋಕಾನಟ್ಟಿ, ಗೀತಾ ಕೊಡಗನೂರ, ಮಂಜುನಾಥ ರೆಳೇಕರ ಮುಂತಾದವರು ಉಪಸ್ಥಿತರಿದ್ದರು.
ರಾಷ್ಟ್ರೀಯ ಯುವ ಸಪ್ತಾಹ ಹಾಗೂ ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಟ್ರೋಫಿ ಮತ್ತು ಪ್ರಮಾಣ ಪತ್ರಗಳನ್ನು ನೀಡಲಾಯಿತು. ಕಾರ್ಯಕ್ರಮವನ್ನು ರವಿ ಕರಿಗಾರ ನಿರೂಪಿಸಿದರು. ಸಚಿನ್ ಕಾಂಬಳೆ ವಂಧಿಸಿದರು.

