spot_img
spot_img

ಸಾರಂಗಮಠದಲ್ಲಿ ಸ್ವಯಂ ಪ್ರೇರಿತ ರಕ್ತದಾನ

Must Read

ಸಿಂದಗಿ: ಆರೋಗ್ಯವಂತ ಯುವ ಸಮುದಾಯವು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ರಕ್ತದ ಅವಶ್ಯಕತೆಯಿಂದ ಬಳಲುವ ಅಮೂಲ್ಯ ಜೀವ ಉಳಿಸಲು ಮುಂದಾಗಬೇಕು ಎಂದು ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.

ವಿಜಯಪುರದ ಬಿಎಲ್‍ಡಿಯ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಾರಂಗಮಠದ ಸಹಯೋಗದಲ್ಲಿ ಹಮ್ಮಿಕೊಂಡ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀಗಳು ರಕ್ತದಾನದಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಎಂಬ ತಪ್ಪು ಕಲ್ಪನೆ ಸಮಾಜದಲ್ಲಿ ಬೇರೂರಿದೆ. ಇದನ್ನು ತೊಲಗಿಸಬೇಕಿದೆ. ಆದ್ದರಿಂದ ಆರೋಗ್ಯವಂತ ವ್ಯಕ್ತಿಗಳು ರಕ್ತದಾನಕ್ಕೆ ಮುಂದಾಗಿ ಮತ್ತೊಬ್ಬರಿಗೆ ಮಾದರಿಯಾಗಬೇಕು. ಯುವಕರು ರಕ್ತದಾನದ ಕುರಿತು ಇರುವ ಮೌಢ್ಯವನ್ನು ದೂರ ಮಾಡಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ವೈದ್ಯ ಡಾ.ವಿಜಯಕುಮಾರ ವಾರದ ಮಾತನಾಡಿ, ರಕ್ತದಾನದಿಂದ ರಕ್ತದ ಅವಶ್ಯಕತೆ ಇರುವವರಿಗೆ ಮಾತ್ರ ಲಾಭವಾಗುವುದಿಲ್ಲ. ರಕ್ತದಾನಿಗಳೂ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳಬಹುದು. ಇದರಿಂದ ರಕ್ತದಾನ ಮಾಡಿದವರಲ್ಲಿ ಹೊಸ ರಕ್ತಕಣಗಳು ಉತ್ಪತ್ತಿಯಾಗುತ್ತವೆ. ಜತೆಗೆ ಹೃದಯಾಘಾತದ ಸಂಭವ, ರಕ್ತದಲ್ಲಿ ಕೊಬ್ಬಿನ ಅಂಶ ಕಡಿಮೆಯಾಗುತ್ತದೆ. ಆದ್ದರಿಂದ ರಕ್ತದಾನ ಮಾಡಲು ಹಿಂಜರಿಯಬಾರದು. ಈ ಬಗ್ಗೆ ಯುವಕರು ಜನರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಶಿಬಿರದಲ್ಲಿ ವಿದ್ಯಾರ್ಥಿಗಳು ಸೇರಿದಂತೆ 51 ಜನರು ರಕ್ತದಾನ ಮಾಡಿದರು. ಡಾ ಪ್ರಕಾಶ್ ಪಾಟೀಲ್, ಅಶೋಕ ವಾರದ, ರವಿ ಲಮಾಣಿ, ಡಾ.ಸುಮಾ ನಿರಣಿ, ರವಿ ಗೋಲಾ ಸೇರಿದಂತೆ ಪ್ರಾದ್ಯಾಪಕರು, ಎನ್‍ಸಿಸಿ ಮತ್ತು ಎನ್‍ಎಸ್‍ಎಸ್ ವಿದ್ಯಾರ್ಥಿಳು ಹಾಗೂ ಸರ್ವಜನಿಕರು ಉಪಸ್ಥಿತರಿದ್ದರು.

- Advertisement -
- Advertisement -

Latest News

ವಿಶೇಷ ಅಗತ್ಯತೆಯುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ

ಯರಗಟ್ಟಿಃ ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಮಾದರಿ ಶಾಲೆಯಲ್ಲಿ ೨೦೨೨-೨೩ ನೇ ಸಾಲಿನ ಯರಗಟ್ಟಿ ಹಾಗೂ ಮುರಗೋಡ ವಲಯಗಳ ವಿಕಲಚೇತನ ಮಕ್ಕಳ ಮೌಲಾಂಕನ ಶಿಬಿರ ಜರುಗಿತು. ಕಾರ‍್ಯಕ್ರಮದ...
- Advertisement -

More Articles Like This

- Advertisement -
close
error: Content is protected !!