ಸಮಗ್ರ ಅಭಿವೃದ್ಧಿಗೆ ಬಿಜೆಪಿಗೆ ಮತ ಹಾಕಿ – ಈರಣ್ಣ ಕಡಾಡಿ

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಮೂಡಲಗಿ: ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲ ಪಡಿಸಲು ದೇಶದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರಿಗೆ ಮತ ನೀಡುವಂತೆ ರಾಜ್ಯ ಸಭಾ ಸದಸ್ಯ ಮತ್ತು ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು.

ತಾಲೂಕಿನ ಅರಭಾಂವಿ ಪಟ್ಟಣದಲ್ಲಿ ಗುರುವಾರದಂದು ಬೆಳಗಾವಿ ಲೋಕಸಭಾ ಕ್ರೇತ್ರದ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ದಿ. ಸುರೇಶ ಅಂಗಡಿ ಅವರ ಅಭಿವೃದ್ಧಿ ಕಾರ್ಯಗಳನ್ನು ಸ್ಮರಿಸಿಕೊಂಡು ಅವರ ಧರ್ಮಪತ್ನಿ ಮಂಗಳಾ ಅವರಿಗೆ ಅಮೂಲ್ಯ ಮತ ನೀಡಿ ಲೋಕಸಭೆಗೆ ಆರಿಸಿ ಕಳುಹಿಸುವಂತೆ ಕೋರಿದರು.

ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಅಸ್ಥಿತ್ವದಲ್ಲಿದೆ. ದೇಶದ ಎಲ್ಲ ವರ್ಗಗಳ ಅಭಿವೃದ್ಧಿಗಾಗಿ ಸಾಕಷ್ಟು ಯೋಜನೆಗಳನ್ನು ನೀಡಿವೆ ಅದರಲ್ಲೂ ಅನ್ನದಾತ ರೈತನ ಶ್ರೇಯೋಭಿವೃದ್ಧಿಗೆ ಹಲವಾರು ಹೊಸ ಯೋಜನೆಗಳನ್ನು ಪ್ರಕಟಿಸಿದ್ದು ಅವುಗಳನ್ನು ರೈತ ಸಮುದಾಯ ಪ್ರಯೋಜನ ಪಡೆದುಕೊಳ್ಳ ಬೇಕು ಎಂದು ತಿಳಿಸಿದರು.

- Advertisement -

ಸಾಮಾನ್ಯ ರೈತ ಕುಟುಂಭದಿಂದ ಹಾಗೂ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದೆ ರಾಜಕೀಯಕ್ಕೆ ಪ್ರವೇಶಿಸಿದ ದಿ. ಸುರೇಶ ಅಂಗಡಿಯವರು ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿ ಅಸ್ಥಿತ್ವದಲ್ಲಿಲ್ಲದ ಸಮಯದಲ್ಲಿ ಪಕ್ಷವನ್ನು ಕೇಳ ಹಂತದಿಂದ ಸಂಘಟಿಸಿದರು. ಜಿಲ್ಲಾಧ್ಯಕ್ಷರಾಗಿ, ನಾಲ್ಕು ಬಾರಿ ಸಂಸತ ಸದಸ್ಯರಾಗಿ ಸೇವೆ ಸಲ್ಲಿಸಿದರು. ನಂತರ ಪ್ರಧಾನಿ ಮೋದಿ ಅವರ 2.0 ಸರಕಾರದಲ್ಲಿ ಮಹತ್ವದ ರೈಲ್ವೆ ಖಾತೆಯ ಸಚಿವರಾಗಿ ರಾಜ್ಯಕ್ಕೆ ಉತ್ತಮ ಕೊಡುಗೆ ನೀಡಿದರು. ಬೆಳಗಾವಿ-ಕಿತ್ತೂರ-ದಾರವಾಡ ಮದ್ಯದ 73 ಕೀ.ಮಿ ಮಾರ್ಗದಲ್ಲಿ ಹೊಸ ರೈಲ್ವೆ ಮಾರ್ಗದ ಕಾಮಗಾರಿಗೆ ಅನುಮತಿ ನೀಡಿದರು. ಬೆಳಗಾವಿ-ಬೆಂಗಳೂರು-ಬೆಳಗಾವಿ ಹೊಸ ರೈಲು ಸಂಚಾರವನ್ನು ಪ್ರಾರಂಭಿಸಿದ ಕೀರ್ತಿ ಅಂಗಡಿಯವರಿಗೆ ಸಲ್ಲುತ್ತದೆ. ಈ ರೈಲಿಗೆ ಸುರೇಶ ಅಂಗಡಿ ರೈಲೆಂದೆ ಜನರಿಂದ ಹೆಸರುವಾಸಿಯಾಗಿದೆ. ಜೊತೆಗೆ ಹುಬ್ಬಳ್ಳಿ ರೈಲ್ವೆ ನಿಲ್ದಾಣಕ್ಕೆ ಸಿದ್ದಾರೋಢ ರೈಲ್ವೆ ನಿಲ್ದಾಣವೆಂದು ನಾಮಕರಣ ಮಾಡಿದ ಶ್ರೇಯಸ್ಸು ದಿ. ಅಂಗಡಿಯವರಿಗೆ ಸಲ್ಲುತ್ತದೆ ಎಂದು ಹೇಳಿದರು.

ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಮಾತನಾಡಿ, ಈ ಹಿಂದೆ ನಿಮ್ಮ ಅಳಿಯನನ್ನು ಬೆಂಬಲಿಸಿದಂತೆ ಈಗ ನಿಮ್ಮ ಮನೆ ಮಗಳಿಗೆ ಆಶೀರ್ವಾದ ಮಾಡುವಂತೆ ಮತಯಾಚಿಸಿದರು.

ವೇದಿಕೆಯಲ್ಲಿ ಅರಭಾಂವಿ ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಮುಖಂಡರಾದ ನಿಂಗಪ್ಪ ಈಳಿಗೇರ, ಮಂಜುಳಾ ಶಂಕರ ಬಿಲಕುಂದಿ, ರಾಯಪ್ಪ ಬಂಡಿವಡ್ಡರ, ಅರಭಾಂವಿ ಮಂಡಲ ಬಿಜೆಪಿ ಅಧ್ಯಕ್ಷ ಮಹದೇವ ಶೆಕ್ಕಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ, ಚುನಾವಣಾ ಸಂಚಾಲಕ ಗೋವಿಂದ ಕೊಪ್ಪದ, ಒಬಿಸಿ ಜಿಲ್ಲಾಧ್ಯಕ್ಷ ಬಸವರಾಜ ಮಾಳೇದ, ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಈರಣ್ಣ ಅಂಗಡಿ, ಆನಂದ ಮೂಡಲಗಿ, ತಮ್ಮಣ್ಣ ದೇವರ, ಇಕ್ಬಾಲ ಸರ್ಕಾವಸ್, ಕೆಂಚಪ್ಪ ಮಂಟೂರ, ಸಾತಪ್ಪ ಜೈನ್, ಲಕ್ಷ್ಮಣ ನಿಂಗಣ್ಣನವರ, ಯಲ್ಲಪ್ಪ ಸತ್ತಿಗೇರಿ, ಸುನೀಲ ಜಮಖಂಡಿ, ಪ್ರಕಾಶ ಮಾದರ, ಇಂದಿರಾ ಅಂತರಗಟ್ಟಿ, ಮಂಜುಳಾ ಹಿರೇಮಠ, ಅಡಿವೇಪ್ಪ ಬಿಲಕುಂದಿ, ಕುಮಾರ ಪೂಜೇರಿ, ಸತ್ತೇಪ್ಪ ಬಡಾಯಿ, ಮಹಾಂತೇಶ ನೇಮಗೌಡರ, ಮಹಾಂತೇಶ ಕುಡಚಿ, ಪರಪ್ಪ ಗಿರೆನ್ನವರ, ಪಟ್ಟಣ ಪಂಚಾಯಿತಿ ಸದಸ್ಯರು, ಬಿಜೆಪಿ ವಿವಿಧ ಮೋರ್ಚಾಗಳ ಪ್ರಮುಖರು ಉಪಸ್ಥಿತರಿದ್ದರು.

ನಂತರ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿಯವರು ತುಕ್ಕಾನಟ್ಟಿ, ಕಲ್ಲೋಳ್ಳಿ, ನಾಗನೂರ ಪಟ್ಟಣಗಳಿಗೆ ತೆರಳಿ ಮತಯಾಚಿಸಿದರು.

- Advertisement -
- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!