ಸಮಗ್ರ ಅಭಿವೃದ್ಧಿಗೆ ಅಂಗಡಿಯವರಿಗೆ ಮತ ನೀಡಿ – ಈರಣ್ಣ ಕಡಾಡಿ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಮೂಡಲಗಿ: ದಿ. ಸುರೇಶ ಅಂಗಡಿಯವರ ಅಭಿವೃದ್ಧಿ ಕಾರ್ಯಗಳನ್ನು ಗುರ್ತಿಸಿ ಬಿಜೆಪಿ ಅಭ್ಯರ್ಥಿಗೆ ಮತ ನೀಡಿ ಆಯ್ಕೆ ಮಾಡುವಂತೆ ಸಂಸದ ಹಾಗೂ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು.
ಅರಭಾಂವಿ ವಿಧಾನ ಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಮಂಗಳಾ ಅಂಗಡಿ ಪರ ಮತಯಾಚಿಸಿ ಮಾತನಾಡಿದ ಅವರು, ಬೆಳಗಾವಿ ಸಮಗ್ರ ಅಭಿವೃದ್ಧಿಗೆ ಅಂಗಡಿ ಅವರಿಗೆ ಆಶೀರ್ವಾದ ಮಾಡುವಂತೆ ಕೋರಿದರು.

ದಿ. ಸುರೇಶ ಅಂಗಡಿಯವರು ಬೆಳಗಾವಿ ಸಂಸದರಾಗಿ, ಕೇಂದ್ರ ರೈಲ್ವೆ ಸಚಿವರಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ್ದರು. ಜನರ ಕಷ್ಟ ಕಾರ್ಪಣ್ಯಗಳಿಗೆ ಸದಾ ಸ್ಪಂದಿಸುತ್ತಿದ್ದರು. ಕೇಂದ್ರ ಸಚಿವರಾಗಿ ಅಧಿಕಾರ ಸ್ವಿಕರಿಸಿದ ನಂತರ ನಾವಿಬ್ಬರೂ ದಿನಾಲು ಭೇಟಿಯಾಗಿ ಮಾತನಾಡುತ್ತಿದ್ದೆವು. ರೈತನ ಮಗನಾಗಿ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದಿದ್ದರೂ ಬೆಳಗಾವಿ ಮತದಾರರು ತಮ್ಮನ್ನು ಪ್ರತಿ ಚುನಾವಣೆಯಲ್ಲಿ ಕೈ ಹಿಡಿದು ಸತತವಾಗಿ ಆಯ್ಕೆ ಮಾಡಿದ್ದಾರೆ. ಜನರ ಆಶೀರ್ವಾದದಿಂದ ಕೇಂದ್ರ ಸಚಿವನಾಗಿದ್ದೇನೆ.

ಇನ್ನೇನಿದ್ದರೂ ಜನರ ಕೆಲಸ ಮಾಡಿ ಅವರ ಋಣ ತೀರಿಸಬೇಕು ಎಂದು ಮುಕ್ತವಾಗಿ ಮಾತನಾಡಿದ್ದರು ಎಂದು ಕಡಾಡಿ ಸ್ಮರಿಸಿಕೊಂಡರು.
ರೈಲ್ವೆ ಖಾತೆಯ ಸಚಿವರಾಗಿ ಜಿಲ್ಲೆಗೆ ಹಾಗೂ ರಾಜ್ಯಕ್ಕೆ ನಾನಾ ಯೋಜನೆಗಳನ್ನು ರೂಪಿಸಿದ್ದರು. ಬೆಳಗಾವಿ ಸ್ಮಾರ್ಟ್ ಸಿಟಿಯಲ್ಲಿ ಅವರ ಕೊಡುಗೆ ಅನನ್ಯ. ಮಂಗಳಾ ಅವರ ಗೆಲುವಿನಲ್ಲಿ ಅಂಗಡಿಯವರ ಯೋಜನೆಗಳು ವರದಾನವಾಗಲಿವೆ ಎಂದು ಹೇಳಿದರು.

- Advertisement -

ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಮಾತನಾಡಿ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರಚಾರ ಕಾರ್ಯದಲ್ಲಿ ನಮ್ಮೆಲ್ಲಾ ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಳ್ಳುವಂತೆ ಸೂಚಿಸಿದ್ದಾರೆ. ಕ್ಷೇತ್ರಾದ್ಯಂತ ಬಿರುಸಿನ ಪ್ರಚಾರ ನಡೆಸಿದ್ದೇವೆ. ಮಂಗಳಾ ಅಂಗಡಿಯವರನ್ನು ಅತ್ಯಧಿಕ ಮತಗಳಿಂದ ಆಯ್ಕೆ ಮಾಡಲು ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರಕಾರದ ಸಾಧನೆಗಳು, ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಅಂಗಡಿಯವರ ಸಾಧನೆಗಳು ಬಿಜೆಪಿ ಅಭ್ಯರ್ಥಿ ಜಯಗಳಿಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ ಎಂದು ಶೇಖರಗೋಳ ಹೇಳಿದರು.

ಅಭ್ಯರ್ಥಿ ಮಂಗಳಾ ಅಂಗಡಿ, ಬಿಡಿಸಿಸಿ ಬ್ಯಾಂಕ ನಿರ್ದೇಶಕ ನೀಲಕಂಠ ಕಪ್ಪಲಗುದ್ದಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ, ಅರಭಾಂವಿ ಮಂಡಲ ಚುನಾವಣಾ ಸಂಚಾಲಕ ಗೋವಿಂದ ಕೊಪ್ಪದ, ಮಂಡಲ ಅಧ್ಯಕ್ಷ ಮಹದೇವ ಶೆಕ್ಕಿ, ಮುಖಂಡ ಸುಭಾಸ ಕುರಬೇಟ, ಡಿ.ಕೆ ನಾಯಿಕ, ಬಸವಂತ ಕಮತಿ, ಮಹಾಂತೇಶ ಕಪ್ಪಲಗುದ್ದಿ, ಮಲ್ಲಪ್ಪ ಹೆಬ್ಬಾಳ, ಲಕ್ಷ್ಮಣ ಗಣಪ್ಪಗೋಳ, ಅಶೋಕ ಮಕ್ಕಳಗೇರಿ, ವಿಠ್ಠಲ ಪಾಟೀಲ, ಅಜೀತ ಬೆಳಕೂಡ, ಓಬಿಸಿ ಜಿಲ್ಲಾಧ್ಯಕ್ಷ ಬಸವರಾಜ ಮಾಳದವರ, ಪ್ರಕಾಶ ಮಾದರ, ಪರಪ್ಪ ಗಿರೆನ್ನವರ, ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

- Advertisement -
- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!