spot_img
spot_img

ಯಕ್ಷಗಾನದ ಮೂಲಕ ಮತದಾನ ಜಾಗೃತಿ ಅಭಿಯಾನ

Must Read

- Advertisement -

ಹೊಸಗುಂದ ಶ್ರೀ ಉಮಾಮಹೇಶ್ವರ ದೇವಾಲಯದಲ್ಲಿ ವಿಶಿಷ್ಟ ರೀತಿಯ ಮತದಾನ ಜಾಗೃತಿ ಅಭಿಯಾನ

ಹೊಸಗುಂದ : ಸಾಗರ ತಾಲ್ಲೂಕು ಸ್ವೀಪ್ ಸಮಿತಿ ಸಾಗರ ರವರಿಂದ ಸಾಗರ ತಾಲ್ಲೂಕು ಹೊಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊಸಗುಂದ ಗ್ರಾಮದ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ದಿನಾಂಕ : 30-04-2024 ರಂದು ವಿಶಿಷ್ಟ ರೀತಿಯ ಜನಜಾಗೃತಿ ಸ್ವೀಪ್ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಸದೃಢ ದೇಶ ಕಟ್ಟುವ ಕೆಲಸವನ್ನು ಮತ ಚಲಾಯಿಸುವ ಮೂಲಕ ನಾವೆಲ್ಲ ಮಾಡಬೇಕು ಎಂದು ಕಾರ್ಯ ನಿರ್ವಾಹಕ ಅಧಿಕಾರಿ ಸುನೀತಾ ಎ .ಎಸ್ ಅಭಿಪ್ರಾಯಪಡುತ್ತಾ,
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವ ರೀತಿಯ ಸರ್ಕಾರ ರಚಿಸಬೇಕು ಎಂಬ ಅಧಿಕಾರ ಪ್ರಜೆಗಳಿಗೆ ಇರುತ್ತದೆ , ದೇಶವನ್ನು ಕಾಯುವ ಕೆಲಸ ಸೈನಿಕ ಮಾಡುತ್ತಾನೆ. ಆದರೆ ದೇಶವನ್ನು ಕಟ್ಟುವ ಕೆಲಸ ಮತದಾನದ ಮೂಲಕ ಆಗಬೇಕು, ಭಾರತೀಯ ಸಂವಿಧಾನ ನಮಗೆ ಮತದಾನ ಮಾಡುವ ಹಕ್ಕನ್ನು ನೀಡಿದ್ದು, ನಾವೆಲ್ಲರೂ ಮತದಾನವನ್ನು ನಮ್ಮ ಕರ್ತವ್ಯ ಎಂದು ಭಾವಿಸಿ ಮತದಾನ ಮಾಡೋಣ , ಅದಕ್ಕಾಗಿ ಐದು ವರ್ಷಕ್ಕೆ ಒಮ್ಮೆ ಬರುವ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಿ ಸದೃಢ ದೇಶ ಕಟ್ಟುವ ಕೆಲಸವನ್ನು ಮತ ಚಲಾಯಿಸುವ ಮೂಲಕ ನಾವೆಲ್ಲ ಮಾಡಬೇಕು ಎಂದು ಕರೆ ನೀಡಿದರು.

- Advertisement -

ಯಕ್ಷಗಾನದ ಮೂಲಕ ಮತದಾನ ಜಾಗೃತಿ ಅಭಿಯಾನ :

ಮತದಾನ ಜಾಗೃತಿ ಅಭಿಯಾನದಲ್ಲಿ ಶ್ರೀ ಚೌಡಮ್ಮ ದೇವಿ ಕೃಪಾ ಪೋಷಿತ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಸಿಗಂದೂರುರವರಿಂದ ವಿಶಿಷ್ಟ ರೀತಿಯ ಯಕ್ಷಗಾನ ಪ್ರದರ್ಶನದ ಮೂಲಕ ಮತದಾನ ಜಾಗೃತಿಯನ್ನು ಮೂಡಿಸಲಾಯಿತು.

ಹೊಸಗುಂದ ಶ್ರೀ ಉಮಾಮಹೇಶ್ವರ ದೇವಾಲಯ ಮುಂಭಾಗದಲ್ಲಿ ಜಾಗೃತ ಮತದಾರರ ವೇದಿಕೆ ಹಾಗೂ ಗ್ರಾಮ ಪಂಚಾಯತ್ ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾವಿದರು ನಮ್ಮ ನಡೆ ಮತಗಟ್ಟೆ ಕಡೆ, ಮತದಾನ ಮಾಡಿದವನೇ ಹೀರೊ , ಮತದಾನ ನಮ್ಮ ಹಕ್ಕು , ಚುನಾವಣಾ ಪರ್ವ ದೇಶದ ಗರ್ವ  ಮತ್ತು ಮತದಾನ ನಮ್ಮ ಕರ್ತವ್ಯ-ಎಲ್ಲರೂ ಮತದಾನದಲ್ಲಿ ಪಾಲ್ಗೊಳ್ಳೋಣ : ಎಂದು ವಿಶಿಷ್ಟ ರೀತಿಯಲ್ಲಿ ಅಭಿಯಾನ ಕೈಗೊಂಡರು.

- Advertisement -

ಸದರಿ ಯಕ್ಷಗಾನ ಪ್ರದರ್ಶನವನ್ನು  ಆನಂದ್ ಅಂಕೋಲಾ ರವರ ಭಾಗವತಿಕೆಯಲ್ಲಿ ಮತ್ತು ಉದಯ್ ಕಲ್ಲಾಳ್, ಧನಂಜಯ್ ಪುರದಮಠ, ದೇವೇಂದ್ರ ಇಡುವಾಣಿ, ಮಹೇಶ, ನಾರಾಯಣ , ಗೌಡ ನಾಗಭೂಷಣ ಮುಂತಾದ ಪಾತ್ರಧಾರಿಗಳು ಚಂದ್ರಪ್ಪ ರವರ ನಿರ್ದೇಶನದಡಿಯಲ್ಲಿ ಯಕ್ಷಗಾನ ಪ್ರದರ್ಶನದ ಮೂಲಕ ಮತದಾನ ಜಾಗೃತಿಯನ್ನು ಮೂಡಿಸಿದರು.

ಮತದಾನ ಮಾಡುವ ಬಗ್ಗೆ ಜಾನಪದ ಶೈಲಿಯಲ್ಲಿ ಹಾಡು ಹೇಳುವ ಮೂಲಕ ಮತ ದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು.

ಸಾಗರ ತಾಲ್ಲೂಕು ಪಂಚಾಯತಿಯ ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಕಾರ್ಯ ನಿರ್ವಾಹಕ ಅಧಿಕಾರಿಗಳು, ತಾಪಂ.ಸಾಗರ ರವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಸಾಗರ ತಾಲ್ಲೂಕಿನ 35 ಗ್ರಾಮ ಪಂಚಾಯತಿಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ಚಿತ್ರ – ಮಾಹಿತಿ – ತೀರ್ಥಹಳ್ಳಿ ಅನಂತ ಕಲ್ಲಾಪುರ

- Advertisement -
- Advertisement -

Latest News

ಕನ್ಯಾಕುಮಾರಿಯಲ್ಲಿ ಮೋದಿ ಧ್ಯಾನ ಆರಂಭ

ತಿರುವನಂತಪುರಂ - ಲೋಕಸಭಾ ಚುನಾವಣೆಯ ಕೊನೆಯ ಹಂತದ ಚುನಾವಣಾ ಪ್ರಚಾರ ಮುಗಿಸಿದ ಕೂಡಲೆ ನರೇಂದ್ರ ಮೋದಿ ತಮ್ಮ ೪೫ ತಾಸುಗಳ ಧ್ಯಾನ ಪೂರೈಸಲು ತಮಿಳುನಾಡಿನ ಕನ್ಯಾಕುಮಾರಿಗೆ...
- Advertisement -

More Articles Like This

- Advertisement -
close
error: Content is protected !!
Join WhatsApp Group