ರೈತ ವಿರೋಧಿ ಬಿಜೆಪಿ ಪಕ್ಷವನ್ನು ಸೋಲಿಸುವ ಪಣ ತೊಟ್ಟಿದ್ದೇವೆ – ಬಾಬಾಗೌಡಾ ಪಾಟೀಲ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಮೂಡಲಗಿ: ‘ಕೇಂದ್ರ ಸರ್ಕಾರವು ರೈತ ವಿರೋಧಿ ಮೂರು ಮಸೂದೆಗಳನ್ನು ಜಾರಿ ತಂದು ಸರ್ವಾಧಿಕಾರವನ್ನು ಮೆರೆದಿರುವುದನ್ನು ರೈತರೆಲ್ಲರೂ ತೀವ್ರವಾಗಿ ಖಂಡಿಸುತ್ತೇವೆ’ ಎಂದು ಕೇಂದ್ರ ಮಾಜಿ ಸಚಿವ ಬಾಬಾಗೌಡ ಪಾಟೀಲ ಹೇಳಿದರು.

ಶನಿವಾರ ಮಾಧ್ಯಮ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಉಪಚುನಾವಣೆಯಲ್ಲಿ ರೈತರೆಲ್ಲ ಬಿಜೆಪಿಯ ವಿರುದ್ಧ ಮತ ಚಲಾಯಿಸಿ ರೈತರ ಶಕ್ತಿ ಏನೆಂಬುದನ್ನು ತೋರಿಸುತ್ತೇವೆ, ಬಿಜೆಪಿ ಸೋಲಿಸುವುದು ರೈತರ ಪಣವಾಗಿದೆ ಎಂದರು.

ರಾಜ್ಯಸರ್ಕಾರವನ್ನು ಗಮನಕ್ಕೆ ತರದೆ, ಲೋಕಸಭೆಯಲ್ಲಿ ಸರಿಯಾಗಿ ಚರ್ಚೆ ಮಾಡದೆ ಕೊರೊನಾ ಆತಂಕದಲ್ಲಿ ಕೃಷಿ ಮಸೂದೆಗಳನ್ನು ಜಾರಿಗೆ ತರುವ ಮೂಲಕ ತಾನು ಮಾಡಿದ್ದೆ ಸರಿ ಎನ್ನುವ ಮೋದಿ ಅವರ ಧೋರಣೆಯು ಖಂಡನೀಯವಾಗಿದೆ ಎಂದು ದೂರಿದರು.

- Advertisement -

ರೈತರು ಬೆಳೆದ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನೀಡುವ ಬಗ್ಗೆ ಯಾವದೇ ಕಾನೂನು ಜಾರಿಗೆ ಮಾಡಲಿಲ್ಲ. ರೈತರ ಕಾಯಕಕ್ಕೆ ಸಂಕಷ್ಟ ತಂದಿರುವ ಬಿಜೆಪಿಯು ರೈತ ವಿರೋಧಿಯಾಗಿದ್ದು. ರೈತರೆಲ್ಲ ಒಗ್ಗಟ್ಟಾಗಿದ್ದು ಉಪ ಚುನಾವಣೆಯಲ್ಲಿ ಬಿಜೆಪಿ ವಿರೋಧ ಮತ ಚಲಾಯಿಸುವ ಮೂಲಕ ಮೋದಿ ಅವರಿಗೆ ಉತ್ತರಿಸುತ್ತೇವೆ ಎಂದರು.

ತಾವು ಬಿಜೆಪಿ ಪಕ್ಷದಲ್ಲಿದ್ದಾಗ ಅಟಲ್‍ಬಿಹಾರಿ ವಾಜಪೇಯಿ ಅವರ ಬಿಜೆಪಿ ಜನಪರ ಇತ್ತು ಈಗ ಮೋದಿ ಅವರ ಬಿಜೆಪಿಯು ಕೇವಲ ಬಂಡವಳಾಶಾಹಿಗಳ ಕಪಿಮುಷ್ಟಿಯಲ್ಲಿದೆ. ಪೆಟ್ರೋಲ್, ಡಿಸೈಲ್ ಬೆಲೆ, ರಸಗೊಬ್ಬರ ಬೆಲೆ ಗಗನಕ್ಕೆ ಏರಿದೆ ಎಂದು ಹರಿಹಾಯ್ದರು.
ಬಿಜೆಪಿ ವಿರೋಧಿಸುವ ತಾವು ಯಾವ ಪಕ್ಷಕ್ಕೆ ರೈತರೆಲ್ಲ ಮತ ಚಲಾಯಿಸುವ ಬಗ್ಗೆ ನಿರ್ಧರಿಸಿರುವಿರಿ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಕಾಂಗ್ರೆಸ್ ಪಕ್ಷದ ಸತೀಶ ಜಾರಕಿಹೊಳಿ ಅವರಿಗೆ ರೈತರೆಲ್ಲ ಮತ ಚಲಾಯಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ಸಿಐಟಿಯು ಜಿಲ್ಲಾಧ್ಯಕ್ಷ ವಿ.ಪಿ. ಕುಲಕರ್ಣಿ, ಭಾರತೀಯ ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಸಿದ್ದುಗೌಡ ಮೋದಗಿ ಮಾತನಾಡಿ, ಬಿಜೆಪಿ ಪಕ್ಷವನ್ನು ಸೋಲಿಸುವ ಮೂಲಕ ದೇಶಕ್ಕೆ ಬೆಳಗಾವಿ ಲೋಕಸಭಾ ಚುನಾವಣೆಯ ಮೂಲಕ ಸಂದೇಶ ಕೊಡಬೇಕಾಗಿದೆ. ಕೇಂದ್ರಕ್ಕೆ ಬಿಸಿ ಮುಟ್ಟಿಸಬೇಕಾಗಿದೆ. ರೈತರೆಲ್ಲ ಕಾಂಗ್ರೆಸ್ ಪಕ್ಷಕ್ಕೆ ಮತ ಚಲಾಯಿಸಿ ಎಂದರು.
ವಕೀಲ ನಾಗೇಶ ಸಾತೇರಿ, ಸಿಐಟಿಯು ಜಿಲ್ಲಾ ಮುಖಂಡ ಜೆ.ಎಂ. ಜೈನೆಖಾನ ಮತ್ತಿರರು ಇದ್ದರು.

- Advertisement -
- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!