ಬೀದರ: ನಾವು ಆಗಿನ ಬ್ರಿಟಿಷರಿಗೇ ಹೆದರಿಲ್ಲ ಇನ್ನು ಈ ನರೇಂದ್ರ ಮೋದಿ, ಬಿಜೆಪಿ, ಆರ್ ಎಸ್ ಎಸ್ ಕುನ್ನಿ ಗಳಿಗೆ ಹೆದರುತ್ತೇವಾ ಎಂದು ಮಾಜಿ ಸಚಿವ ಶರಣಪ್ರಕಾಶ ಪಾಟೀಲ ಬೀದರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕನಾದ ರಾಹುಲ್ ಗಾಂಧಿ ಅವರನ್ನು ED ಅಧಿಕಾರಿಗಳು ವಿಚಾರಣೆ ನಡೆಸುತ್ತಿರುವುದರ ವಿರುದ್ದ ಕಾಂಗ್ರೆಸ್ ಪಕ್ಷದ ನಾಯಕರು ಕಳೆದ ಮೂರ್ನಾಲ್ಕು ದಿನಗಳಿಂದ ರಾಷ್ಟ್ರದಾದ್ಯಂತ ನಡೆಸುತ್ತಿರುವ ಪ್ರತಿಭಟನೆ ಉದ್ದೇಶಿಸಿ ಅವರು ಮಾತನಾಡಿದರು.
ಬೀದರ್ ನಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಮಾಜಿ ಸಚಿವ ಶರಣಪ್ರಕಾಶ ಪಾಟೀಲ ಅವರು ನರೇಂದ್ರ ಮೋದಿ ಅವರು ನಮ್ಮ ದೇಶದ ಮೊದಲ ಪ್ರಧಾನ ಮಂತ್ರಿಯಾಗಿದ್ದ ಜವಹರಲಾಲ್ ನೆಹರು ಅವರ ಯಾವುದೆ ಕುರುಹಗಳನ್ನು ನಮ್ಮ ದೇಶದಲ್ಲಿ ಉಳಿಸಬಾರದು ಮತ್ತು ಪ್ರತಿ ಪಕ್ಷದ ನಾಯಕರನ್ನು ಕಟ್ಟಿಹಾಕುವ ಉದ್ದೇಶ ದಿಂದ ಅನಾವಶ್ಯಕ ವಾಗಿ ನಮ್ಮ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರಿಗೆ ED ಅಧಿಕಾರಿಗಳಿಂದ ವಿಚಾರಣೆ ನಡೆಸಿ ನಮ್ಮನ್ನು ಹೆದರಿಸುವ ಪ್ರಯತ್ನ ಮಾಡುತಿದ್ದಾರೆ.
ಸ್ವಾತಂತ್ರ್ಯದ ಪೂರ್ವದಲ್ಲಿ ಬ್ರಿಟಿಷ್ ರಿಗೇ ಹೆದರದ ನಾವು ಈ ನರೇಂದ್ರ ಮೋದಿ ಬಿಜೆಪಿ ಕುನ್ನಿ ಮತ್ತು ಈ ಆರ್ ಎಸ್ ಎಸ್ ಕುನ್ನಿ ಗಳಿಗೆ ಹೆದರುತ್ತೇವಾ? ಎಂದು ಪ್ರಧಾನಿ ನರೇಂದ್ರ ಮೋದಿ ಗಳ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು.
ಈ ಮುಂಚೆ ಕಾಂಗ್ರೆಸ್ ಪಕ್ಷದಿಂದ ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾತಿ ಕಚೇರಿವರೆಗೆ ರ್ಯಾಲಿ ನಡೆಸಲಾಯಿತು.
ವರದಿ: ನಂದಕುಮಾರ ಕರಂಜೆ, ಬೀದರ