spot_img
spot_img

ಕನ್ನಡ ನಾಡಿನ ಪ್ರಗತಿಗೆ ನಾವೆಲ್ಲರೂ ಮುಂದಾಗಬೇಕು-ಸಂಸದ ಈರಣ್ಣ ಕಡಾಡಿ

Must Read

- Advertisement -

ಮೂಡಲಗಿ: ಕನ್ನಡ ನಾಡು, ನುಡಿಯ ಬಗ್ಗೆ ಪ್ರೀತಿ ಅಭಿಮಾನ ಇರಬೇಕು, ಕನ್ನಡ ಭಾಷೆಯಿಂದಾಗಿ ನಮ್ಮ ನಾಡಿನ ಹಿರಿಮೆ ಹೆಚ್ಚಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ರವಿವಾರ ನ.21 ರಂದು ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ರಾಜ್ಯ ಹಾಗೂ ಜಿಲ್ಲಾ ಅಧ್ಯಕ್ಷರ ಸ್ಥಾನದ ಚುನಾವಣೆ ನಿಮಿತ್ತ ಮೂಡಲಗಿ ತಹಶೀಲ್ಧಾರ ಕಛೇರಿಯ ಮತಗಟ್ಟೆಯಲ್ಲಿ ಮತದಾನ ಮಾಡಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು, ಕನ್ನಡ ನಾಡು, ನುಡಿಯ ಬೆಳವಣಿಗೆಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿ, ಈ ನಾಡಿನ ಪ್ರತಿಯೊಬ್ಬರು ಕನ್ನಡ ಉಳಿಸಿ, ಬೆಳೆಸಬೇಕೆಂದರು.

ನಮ್ಮ ಭಾಷೆ ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ದಿನನಿತ್ಯ ಕನ್ನಡ ಬಳಕೆ ಮಾಡುವ ಮೂಲಕ ಕನ್ನಡ ನಾಡಿನ ಪ್ರಗತಿಗೆ ನಾವೆಲ್ಲರೂ ಮುಂದಾಗಬೇಕು. ದಿನಂಪ್ರತಿ ಕನ್ನಡ ಭಾಷೆಯನ್ನು ಬಳಸಬೇಕೆಂದರು.

- Advertisement -

ತಾಲೂಕಾ ಕನ್ನಡ ಸಾಹಿತ್ಯ ಪರಿಷತ ನಿಕಟಪೂರ್ವ ಅಧ್ಯಕ್ಷ ಬಾಲಶೇಖರ ಬಂದಿ, ಮಕ್ಕಳ ಸಾಹಿತಿ ಪ್ರೊ. ಸಂಗಮೇಶ ಗುಜಗೊಂಡ, ನಿಂಗಪ್ಪ ಗಾಡವಿ, ಕೃಷ್ಣಾ ಗಿರೆಣ್ಣವರ, ಪ್ರಮುಖರಾದ ಪ್ರಕಾಶ ಸೋನವಾಲ್ಕರ, ಪ್ರಕಾಶ ಮಾದರ, ಡಾ. ತುಕಾರಾಮ ಉಮರಾಣಿ, ನ್ಯಾಯವಾದಿ ಶಂಕರ ಗೋರೋಶಿ, ಈಶ್ವರ ಮುರಗೋಡ, ಪರಪ್ಪ ಗಿರೆಣ್ಣವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಸೌರ ವಿದ್ಯುತ್ ಉತ್ಪಾದನೆ ಮಾಹಿತಿ ಕಾರ್ಯಾಗಾರ

ಕ್ಯಾಷುಟೆಕ್ ನಿರ್ಮಿತಿ ಕೇಂದ್ರ ಶಕ್ತಿನಗರದ ಅಭಿಯಂತರುಗಳಿಗೆ ಹಾಗೂ, ರಾಯಚೂರು ಜಿಲ್ಲೆಯ ವಿವಿಧ ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ "ಸುಸ್ಥಿರ ಹಸಿರು ವಿದ್ಯುಚ್ಛಕ್ತಿ ಉತ್ಪಾದನೆಗೆ ಸೌರಶಕ್ತಿ ಬಳಕೆ"...
- Advertisement -

More Articles Like This

- Advertisement -
close
error: Content is protected !!
Join WhatsApp Group