ಸಿಂದಗಿ: 1951ರಲ್ಲಿ ಜನಸಂಘ ಸ್ಥಾಪನೆ ಮಾಡಿ ಸಮಾಜ ಚಿಂತನೆ ನಡೆಸಿ ಪಕ್ಷ ಕಟ್ಟಿದ ಮಹಾಪುರುಷ ಪಂಡಿತ ದೀನ ದಯಾಳ ಉಪಾಧ್ಯಾಯರು. ಅವರ ತತ್ವಗಳನ್ನು ನಾವೆಲ್ಲ ಮೈಗೂಡಿಸಿಕೊಂಡು ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾದರೆ ಪಕ್ಷ ಗಟ್ಟಿಗೊಳ್ಳುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಜಿಲ್ಲಾ ಅದ್ಯಕ್ಷ ಆರ್ ಎಸ್ ಪಾಟೀಲ (ಕೂಚಬಾಳ) ಹೇಳಿದರು.
ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಭಾರತಿಯ ಜನತಾ ಪಕ್ಷದ ಮಂಡಲದ ವತಿಯಿಂದ ಹಮ್ಮಿಕೊಂಡ ಪಂಡಿತ ದೀನದಯಾಳ ಉಪಾಧ್ಯಾಯ ರವರ 105 ನೇ ಜನ್ಮದಿನದ ಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಈರಣ್ಣ ರಾವೂರ, ಕರ್ನಾಟಕ ಲಿಂಬೆ ಅಭಿವೃದ್ಧಿ ಮಂಡಳಿ ಅದ್ಯಕ್ಷ ಅಶೋಕ ಅಲ್ಲಾಪುರ, ಎಂ.ಎಸ್.ಮಠ, ಜಿಲ್ಲಾ ವಕ್ತಾರ ರಾಜಶೇಖರ ಪೂಜಾರಿ, ಪಕ್ಷದ ಮುಖಂಡರು, ಜನಪ್ರತಿನಿಧಿಗಳು, ಹಿರಿಯರು, ಕಾರ್ಯಕರ್ತರು,ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಮಹಿಳಾ ಮೋರ್ಚಾದ ಪದಾಧಿಕಾರಿಗಳಾದ ಅನಸೂಯಾ ಪರಾಗೊಂಡ, ಶಾರದಾ ಮಂಗಳೂರು ಹಾಗೂ ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಮಾಧ್ಯಮ ಪ್ರಮುಖ ಸುದರ್ಶನ ಜಂಗಣ್ಣಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.