ಶನಿವಾರದಂದು ಇಬಾಹ್ರಿಂ ಸುತಾರ ಕುರಿತು ವೆಬಿನಾರ್ ಆಯೋಜನೆ

Must Read

ಬೆಳಗಾವಿ : ಇತ್ತೀಚೆಗೆ ನಮ್ಮನ್ನಗಲಿದ ಕನ್ನಡ ನಾಡಿನ ಶ್ರೇಷ್ಠ ಪ್ರವಚನಕಾರ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವದರ ಜೊತೆಗೆ ಅವರ ಜೀವನ ಸಂದೇಶದ ಕುರಿತು ಶನಿವಾರ ದಿನಾಂಕ ೧೨ ರಂದು ಸಂಜೆ ೫ ಗಂಟೆಗೆ ಕಸಾಪ ಚಿಕ್ಕೋಡಿ ತಾಲೂಕಾ ಘಟಕದಿಂದ ವೆಬಿನಾರನ್ನು ಗೂಗಲ್ ಮೀಟ್ ಮುಖಾಂತರ ಆಯೋಜಿಸಲಾಗಿದೆ ಎಂದು ಕಸಾಪ ಚಿಕ್ಕೋಡಿ ತಾಲೂಕಾ ಅಧ್ಯಕ್ಷ ಡಾ.ಸುರೇಶ ಉಕ್ಕಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಬಕವಿ ಹಿರಿಯ ಸಾಹಿತಿ ಮಲ್ಲಿಕಾರ್ಜುನ ಹುಲಗಬಾಳಿ ಇಬ್ರಾಹಿಂ ಸುತಾರ ಅವರ ಜೀವನ ಸಂದೇಶದ ಕುರಿತು ಉಪನ್ಯಾಸ ನೀಡಲಿದ್ದಾರೆ. ಕಸಾಪ ಬೆಳಗಾವಿ ಜಿಲ್ಲಾ ಅಧ್ಯಕ್ಷೆ ಶ್ರೀಮತಿ ಮಂಗಲಾ ಮೆಟಗುಡ್ಡ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. http//meet.google.com/mdd-pdue-veh ಈ ಕೊಂಡಿ ಬಳಸಿಕೊಂಡು ವೆಬಿನಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಸಂಯೋಜಕರಾದ ಕಸಾಪ ಚಿಕ್ಕೋಡಿ ತಾಲೂಕಾ ಅಧ್ಯಕ್ಷ ಡಾ.ಸುರೇಶ ಉಕ್ಕಲಿ ವಿನಂತಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group