ರಾಜ್ಯಮಟ್ಟದ ವ್ಹೀಲ್-ಚೇರ್ ರಗ್ಬಿ ಚಾಂಪಿಯನ್‍ಶಿಪ್ ಟ್ರೋಪಿ ಬೆಳಗಾವಿ ತಂಡಕ್ಕೆ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಬೆಳಗಾವಿ – ದಿ.೩ ರಂದು ಬೆಳಗಾವಿಯಲ್ಲಿ ನಡೆದ ರಾಜ್ಯಮಟ್ಟದ ವ್ಹೀಲ್-ಚೇರ್ ರಗ್ಬಿ ಚಾಂಪಿಯನ್‍ಶಿಪ್‍ನಲ್ಲಿ ಬೆಳಗಾವಿಯ ವಿಕಲಚೇತನರ ತಂಡ ಗೆಲುವು ಸಾಧಿಸುವ ಮೂಲಕ ಜಿಲ್ಲೆಯ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದೆ.

ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಉದ್ಘಾಟನೆಗೊಂಡ ೨೦೨೦-೨೧ ನೇ ಸಾಲಿನ ಕರ್ನಾಟಕ ರಾಜ್ಯ ಮಟ್ಟದ ಎರಡು ದಿನಗಳ ವ್ಹೀಲ್-ಚೇರ್ ರಗ್ಬಿ ಚಾಂಪಿಯನ್-ಶಿಪ್‍ನಲ್ಲಿ ಬೆಳಗಾವಿಯ ತಂಡ ಮೊದಲ ಸ್ಥಾನ ಪಡೆದುಕೊಂಡರೆ, ಬಾಗಲಕೋಟೆ ತಂಡ ಎರಡನೇ ಸ್ಥಾನ ಪಡೆದುಕೊಂಡಿದೆ. ಮೂರನೇ ಸ್ಥಾನವನ್ನು ಮೈಸೂರು ತಂಡ ಪಡೆದುಕೊಂಡಿದೆ. ರಾಜ್ಯದ ವಿವಿಧ ಜಿಲ್ಲೆಗಳ ಒಟ್ಟು ೮ ತಂಡಗಳು ಭಾಗಿಯಾಗಿದ್ದವು. ರವಿವಾರ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಪದಕ, ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.

- Advertisement -

ಈ ವೇಳೆ ಮಾತನಾಡಿದ ಸಮಾಜ ಸೇವಕ ಸುರೇಶ ಯಾದವ, ಬೆಳಗಾವಿಯಲ್ಲಿ ರಾಜ್ಯಮಟ್ಟದ ವಿಕಲಚೇತನರ ಕ್ರೀಡಾಕೂಟ ನಡೆಯುತ್ತಿರುವುದು ನಮ್ಮ ಹೆಮ್ಮೆ. ವಿಕಲಚೇತನರು ಇಂದು ವಿವಿಧ ವಿಭಾಗಗಳಲ್ಲಿ ಸಾಧನೆ ತೋರಿ ಅನೇಕ ಪದಕಗಳನ್ನು ಗಳಿಸಿ ದೇಶಕ್ಕೆ, ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ. ಎಲ್ಲ ರೀತಿಯಿಂದಲೂ ಸದೃಢರಾಗಿರುವವರಿಗೂ ಅವರು ಸ್ಫೂರ್ತಿಯಾಗಲಿ ಎಂದು ಕರೆ ನೀಡಿದರು.

ನಂತರ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಕ್ತಾರಹುಸೇನ್ ಪಠಾಣ ಮಾತನಾಡಿ, ಆಧುನಿಕ ಜೀವನ ಪದ್ಧತಿಯಿಂದ ಹೆಚ್ಚಿನ ಜನರನ್ನು ಅನಾರೋಗ್ಯ ಭಾದಿಸುತ್ತಿದೆ. ಎಲ್ಲರೂ ಆರೋಗ್ಯವಾಗಿ ಇರಬೇಕಾದರೆ ಕ್ರೀಡೆಗಳಲ್ಲಿ ಆಸಕ್ತಿ ಹೊಂದಬೇಕು. ವಿಕಲಚೇತನರ ರಾಜ್ಯಮಟ್ಟದ ಕ್ರೀಡಾಕೂಟ ನಮಗೆಲ್ಲ ಮಾದರಿಯಾಗಲಿ ಎಂದರು.

ಈ ವೇಳೆ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಬಸವರಾಜ ಮಿಲ್ಲಾನಟ್ಟಿ, ತರಬೇತುದಾರರಾದ ವಿ.ಎಸ್.ಪಾಟೀಲ, ಕೆಎಲ್‍ಇ ಆಸ್ಪತ್ರೆಯ ವೈದ್ಯರಾದ ಡಾ.ಸುನಿಲ ಚಿಕ್ಕೋಡಿ, ಕರ್ನಾಟಕ ವ್ಹೀಲ್-ಚೇರ್ ರಗ್ಬಿ ಅಶೋಸಿಯೇಷನ್ ಹಾಗೂ ಬೆಳಗಾವಿ ಜಿಲ್ಲಾ ವಿಕಲಚೇತನರ ಕ್ರೀಡಾ ಸಂಘದ ಅಧ್ಯಕ್ಷ ಮಹಾಂತೇಶ ಹೊಂಗಲ್, ಚಿಗುರು ಸೇವಾ ಫೌಂಡೇಶನ್ ಅಧ್ಯಕ್ಷ ಲಕ್ಷ್ಮಣ ತರಕಾರ, ಅಂಧರ ಸೇವಾ ಸಂಸ್ಥೆ ಕಾರ್ಯದರ್ಶಿ ಶಿವನಗೌಡ ಪಾಟೀಲ, ಪ್ರೊಫೆಷನಲ್ ಸೋಶಿಯಲ್ ವರ್ಕ್ ಅಸೋಸಿಯೇಷನ್ ಕರ್ನಾಟಕ ಅಧ್ಯಕ್ಷ ದೀಪಕ ಕಾಂಬಳೆ, ಪ್ರಧಾನ ಕಾರ್ಯದರ್ಶಿ ಆಕಾಶ ಬೇವಿನಕಟ್ಟಿ, ಉತ್ತರ ಮಂಡಲ ಯುವಮೋರ್ಚಾ ಅಧ್ಯಕ್ಷ ಸದಾನಂದ ಗುಂಟೆಪ್ಪನವರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!