spot_img
spot_img

ಎಲ್ಲವನ್ನೂ ತಿಳಿದವನೇ ಸರ್ವಜ್ಞ

Must Read

- Advertisement -

ಸಿಂದಗಿ: ಸರ್ವಜ್ಞ ಎಂದರೆ ಸಂಸ್ಕೃತದಲ್ಲಿ ಎಲ್ಲವನ್ನೂ ತಿಳಿದವ ಎನ್ನಲಾಗಿದೆ ಇವರು ಕನ್ನಡದ ತ್ರಿಪದಿ ಸಾಹಿತ್ಯದ ಪ್ರಮುಖ ಕವಿ ಎಂದು ತಹಶೀಲ್ದಾರ ನಿಂಗಣ್ಣ ಬಿರಾದಾರ ಹೇಳಿದರು.

ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಸರ್ವಜ್ಞ ಜಯಂತಿಯಲ್ಲಿ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ, ಪ್ರಮುಖವಾಗಿ ತ್ರಿಪದಿಗಳೆಂಬ ಮೂರು ಸಾಲಿನ ವಚನಗಳನ್ನು ರಚಿಸಿರುವ ಈತನ ಕಾಲದ ಕುರಿತು ಹೆಚ್ಚು ತಿಳಿದಿಲ್ಲ. ಇತರ ಲೇಖಕರು ಅವನ ಬಗ್ಗೆ ಮಾಡಿರುವ ಪ್ರಸ್ತಾಪಗಳಿಂದ ಮತ್ತು ಸರ್ವಜ್ಞನ ಭಾಷಾ ಪ್ರಯೋಗದ ಲಕ್ಷಣಗಳ ಅಧ್ಯಯನದಿಂದ ಈತನು ಜೀವಿಸಿದ್ದ ಕಾಲ ಸುಮಾರಾಗಿ 16ನೇ ಶತಮಾನದ ಆದಿಭಾಗ ಎಂದು ಪ್ರತಿಪಾದಿಸಲಾಗಿದೆ. ಪ್ರಾಯಶಃ ಪುಷ್ಪದತ್ತ ಈತನ ನಿಜ ಹೆಸರಾಗಿದ್ದು ಸರ್ವಜ್ಞ ಎಂಬುದು ಇವರ ಕಾವ್ಯನಾಮವಾಗಿದೆ ಇವರು ಜನಿಸಿದ್ದು ಇಂದಿನ ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲ್ಲೂಕು ಅಂಬಲೂರ ಮಾಸೂರು. ಇದು ಈಗ ಸರ್ವಜ್ಞನ ಮಾಸೂರು ಎಂದೇ ಪ್ರಸಿದ್ಧಿ ಪಡೆದಿದೆ ಎಂದು ತಿಳಿಸಿದರು.

ಅವರ ಹೆತ್ತಮ್ಮ ಕುಂಬಾರ ಮಾಳೆ, ಪ್ರೀತಿಯಿಂದ ನಾಮಕರಣ ಮಾಡಿದ ಹೆಸರು ಪುಷ್ಪದತ್ತ. ಸಾಕು ತಾಯಿ ಮಲ್ಲಕ್ಕ. ತಂದೆ ಬಸವರಸ. ಹಾವೇರಿ ಜಿಲ್ಲೆಯ ಹಿರೇಕೇರೂರು ತಾಲ್ಲೂಕು ಮಾಸೂರಿನಲ್ಲಿ ವಾಸವಾಗಿದ್ದ ಆರಾಧ್ಯ ಬ್ರಾಹ್ಮಣ, ಬಸವರಸನು, ಎಷ್ಟು ದಿನಗಳಾದರೂ ಮಕ್ಕಳಾಗದಿದ್ದಾಗ ಮಲ್ಲಮ್ಮನನ್ನು ಸಮಾಧಾನ ಮಾಡಿ, ಪುತ್ರಸಂತಾನದ ವರ ಪಡೆಯಲು ಕಾಶೀ ಕ್ಷೇತ್ರಕ್ಕೆ ಪ್ರಯಾಣ ಬೆಳೆಸಿ ಭಕ್ತಿಯಿಂದ ಸೇವೆ ಮಾಡಿದ ಬಸವರಸನಿಗೆ ಕಾಶಿ ವಿಶ್ವನಾಥನು ಕನಸಿನಲ್ಲಿ ಪ್ರತ್ಯಕ್ಷನಾಗಿ, ‘ನಿನಗೆ ಪುತ್ರಪ್ರಾಪ್ತಿಯಾಗುವುದು. ಹುಟ್ಟುವ ಮಗನು ನನ್ನ ಪ್ರಸಾದದಿಂದ ಮಹಾಜ್ಞಾನಿಯಾಗುವನು ಎಂದು ಹೇಳಲು ಆನಂದಭರಿತನಾದ ಬಸವರಸನು, ಪ್ರಾತಃಕಾಲದಲ್ಲಿ ಎದ್ದು, ಪವಿತ್ರ ಗಂಗಾಸ್ನಾನ ಮಾಡಿ, ವಿಶ್ವನಾಥನನ್ನು ಅರ್ಚಿಸಿ, ಪ್ರಸಾದಗಳೊಂದಿಗೆ ತನ್ನ ಗ್ರಾಮದ ಹಾದಿ ಹಿಡಿದನು. 9 ತಿಂಗಳ ನಂತರ ಪ್ರತಿಯ ಮಗು ಜನಿಸಿ ಬೆಳೆಯುತ್ತ ಆತನಿಗೆ ತಂದೆ ತಾಯಿಗಳಿಂದ ಅಗಲಿ ಪುಣ್ಯಕ್ಷೇತ್ರಗಳನ್ನೂ ಗುರುಮಠಗಳನ್ನೂ ಭೇಟಿ ಮಾಡಿ ಜ್ಞಾನಾರ್ಜನೆ ಮಾಡಿದನು. ಎಲ್ಲಾ ಶಾಸ್ತ್ರಗಳ ಜ್ಞಾನವನ್ನು ಸಂಪಾದಿಸಿದನು. ಅವನ ಜನಪ್ರಿಯ ವಚನಗಳು ಅವನ ಬಗ್ಗೆ ಸಾಕಷ್ಟು ಮಾಹಿತಿಗಳನ್ನು ಒದಗಿಸಿವೆ. ಅವನು ರಚಿಸಿದ ತ್ರಿಪದಿಗಳಿಗೆ ಲೆಕ್ಕವಿಲ್ಲ. ಅವನು ಆಶುಕವಿಯಾದ್ದರಿಂದ, ಎಷ್ಟೋ ಕವನಗಳು ಅವನ ಸ್ಮೃತಿಯಲ್ಲೇ ಉಳಿದಿರಬಹುದು. ಸುಮಾರು 7,070 ವಚನಗಳು ಲಭ್ಯವಾಗಿದೆಯೆಂದು ತಜ್ಞರ ಅಭಿಪ್ರಾಯ ಎಂದರು.

- Advertisement -

ಈ ಸಂದರ್ಭದಲ್ಲಿ ಶಿರಸ್ತೆದಾರ ಸಿ.ಬಿ.ಬಾಬಾನಗರ ಕಂದಾಯ ನಿರೀಕ್ಷಕ ಆಯ್.ಎ.ಮಕಾನದಾರ, ಚೇತನ ಭೋಸಗಿ, ಕೀರ್ತಿ ಅಗ್ನಿಹೋತ್ರಿ, ಜಿ.ಎಸ್.ಸೋಮನಾಯಕ, ರಾಮಪ್ಪ ರಾಂಪೂರ ವಿನೋದ ಕರನಾಳ, ಸಮಾಜದ ಸಿದ್ದಪ್ಪ ಕುಂಬಾರ, ನೀಲಪ್ಪ ಕುಂಬಾರ, ಸದಾನಂದ ಕುಂಬಾರ, ಶಾಂತು ಕುಂಬಾರ, ಸಂಗಮೇಶ ಕುಂಬಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಕಾರ್ಯಕರ್ತರೇ, ನಾಯಕರ ದಾಳಗಳಾಗದೆ ಜಾಗೃತರಾಗಿರಿ.

ಎಲ್ಲ ಪಕ್ಷಗಳ ಕಾರ್ಯಕರ್ತರಿಗೆ ಎಚ್ಚರಿಕೆ.ಕಾರ್ಯಕರ್ತರು ಅದರಲ್ಲೂ ವಿಶೇಷವಾಗಿ ಕಾಂಗ್ರೆಸ್ ಕಾರ್ಯಕರ್ತರಿಗೆ ನನ್ನ ಸಲಹೆ. ನಿಮ್ಮನ್ನ ರಾಜ್ಯ ಸರ್ಕಾರ ತಮ್ಮದಿದೆ ಆದ್ದರಿಂದ ನಿಮಗೆ ರಕ್ಷಣೆ ನೀಡುತ್ತದೆ ಏನೂ...
- Advertisement -

More Articles Like This

- Advertisement -
close
error: Content is protected !!
Join WhatsApp Group