ವನ್ಯಜೀವಿ ಸಂರಕ್ಷಣೆ ಅತೀ ಅಗತ್ಯ – ಈರಣ್ಣ ಕಡಾಡಿ

Must Read

ಗೋಕಾಕ:  ವನ್ಯಜೀವಿಗಳ ಸಂರಕ್ಷಣೆಗಾಗಿ ಅರಣ್ಯವನ್ನು ಉಳಿಸುವುದು, ಬೆಳೆಸುವುದು ಅತ್ಯಂತ ಅಗತ್ಯವಾಗಿದೆ. ಅರಣ್ಯ (ಗಿಡ, ಮರಗಳು) ಇದ್ದರೇ ಸಹಜವಾಗಿ ಉತ್ತಮ ಗಾಳಿ, ಉತ್ತಮ ಮಳೆ, ಉತ್ತಮ ಪರಿಸರ ಸಿಗುವುದರ ಜೊತೆಗೆ ಜೀವವೈವಿಧ್ಯವನ್ನು ಕೂಡಾ ಸಂರಕ್ಷಿಸಿದಂತಾಗುತ್ತದೆ ಹೀಗಾಗಿ ವನ್ಯ ಜೀವಿಗಳ ಸಂರಕ್ಷಣೆಗಾಗಿ ಅರಣ್ಯ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ಬುಧವಾರ ಅ.04 ರಂದು ನಗರದ ಗೋಕಾಕ ಅರಣ್ಯ ಇಲಾಖೆಯ ಪ್ರಾದೇಶಿಕ ವಿಭಾಗದ ಕಛೇರಿಯ ಆವರಣದಲ್ಲಿ “ವನ್ಯಜೀವಿಗಳ ಸಂರಕ್ಷಣೆಗಾಗಿ ನಡಿಗೆ” ಎಂಬ ಘೋಷವಾಕ್ಯದೊಂದಿಗೆ ಹಮ್ಮಿಕೊಂಡಿದ್ದ 69ನೇ ವನ್ಯಜೀವಿ ಸಪ್ತಾಹ-2023 ರ ಜಾಗೃತಿ ಜಾಥಾ ಹಾಗೂ ಪರಿಸರ ನಡಿಗೆ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ಮೂಲಕ ಚಾಲನೆ ನೀಡಿ ಮಾತನಾಡಿದರು.

ರಾಷ್ಟ್ರೀಯ ವನ್ಯಜೀವಿ ಸಪ್ತಾಹವನ್ನು ಭಾರತದಲ್ಲಿ ಪ್ರತಿ ವರ್ಷ ಅಕ್ಟೋಬರ್ 2 ರಿಂದ ಅಕ್ಟೋಬರ್ 8 ರವರೆಗೆ ಆಚರಿಸಲಾಗುತ್ತದೆ. ಪ್ರಕೃತಿಯ ಸಮತೋಲನವನ್ನು ಕಾಪಾಡುವಲ್ಲಿ ವನ್ಯಜೀವಿಗಳ ಪಾತ್ರದ ಬಗ್ಗೆ ಸಾಮಾನ್ಯ ಜನರಲ್ಲಿ ಜಾಗೃತಿಯನ್ನು ಹೆಚ್ಚಿಸಲು ಈ ವಾರವನ್ನು ಸ್ಮರಿಸಲಾಗುತ್ತಿದೆ ಎಂದರು.

ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು, ಈ ನಿಟ್ಟಿನಲ್ಲಿ ಜನ ಜಾಗೃತಿ ಮೂಡಿಸುವ ಸಲುವಾಗಿ ವನ್ಯಜೀವಿ ಸಪ್ತಾಹ ಆಚರಿಸಲಾಗುತ್ತಿದೆ. ಅರಣ್ಯ ಸಂರಕ್ಷಣೆಗೆ ಅರಣ್ಯ ಇಲಾಖೆಯವರು ಹೆಚ್ಚಿನ ಜವಾಬ್ದಾರಿಯಿಂದ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯವಾದುದು. ನಾವೆಲ್ಲರೂ ಅವರೊಂದಿಗೆ ಕೈಜೋಡಿಸಿ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ಪಣತಡೊನ ಎಂದು ಕರೆ ನೀಡಿದರು. 

ಗೋಕಾಕ ಡಿ.ವಾಯ್.ಎಸ್.ಪಿ ಡಿ.ಎಚ್. ಮುಲ್ಲಾ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಾಸಿಂ ತೆನಗಿ, ರಾಯಬಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುನಿತಾ ನಿಂಬರಗಿ, ವಲಯ ಅರಣ್ಯಾಧಿಕಾರಿ ಸಂಜೀವ ಸಂಸುದ್ದಿ, ರೋಟರಿ ಕ್ಲಬ್ ಅಧ್ಯಕ್ಷ ಮಲ್ಲಿಕಾರ್ಜುನ ಈಟಿ, ಇನ್ನರ್ ವಿಲ್ ಕ್ಲಬ್ ಅಧ್ಯಕ್ಷೆ ವಿದ್ಯಾ ಗುಲ್ಲ, ಬಸವರಾಜ ಹುಳ್ಳೇರ, ಸೋಮಶೇಖರ ಮಗದುಮ್ಮ ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿ ವರ್ಗದವರು, ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಜಾಥಾ ಕಾರ್ಯಕ್ರಮದಂಗವಾಗಿ ಗೋಕಾಕ ಅರಣ್ಯ ಇಲಾಖೆಯ ಪ್ರಾದೇಶಿಕ ವಿಭಾಗದ ಕಚೇರಿಯಿಂದ ಟ್ರೀ ಪಾರ್ಕವರಗೆ ಜಾಥಾ ನಡೆಯಿತು. ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡರು.

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...

More Articles Like This

error: Content is protected !!
Join WhatsApp Group