೧೯ ರಂದು ಶ್ರೀ ಪದ್ಮರಾಜ ಸಂಸ್ಥೆಯಲ್ಲಿ ಮಹಿಳಾ ದಿನಾಚರಣೆ

Must Read

ಸಿಂದಗಿ: ಪಟ್ಟಣದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಅಂಗ ಸಂಸ್ಥೆಯಾದ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಮಾ.೧೯ ಬುಧವಾರ ಬೆಳಿಗ್ಗೆ ೯:೩೦ಗಂಟೆಗೆ ಮಹಾವಿದ್ಯಾಲಯದ ಸಭಾಭವನದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಮಹಿಳಾ ಸಾಂಸ್ಕೃತಿಕ ಸಿರಿ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಚಾರ್ಯ ಎಸ್.ಎಂ.ಪೂಜಾರಿ ತಿಳಿಸಿದ್ದಾರೆ.

ಕಾರ್ಯಕ್ರಮವನ್ನು ಸಾರಂಗಮಠದ ನಿಯೋಜಿತ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಉದ್ಘಾಟಿಸಲಿದ್ದಾರೆ.

ಪಾವನ ಸಾನ್ನಿಧ್ಯವನ್ನು ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಆರ್.ಡಿ.ಪಾಟೀಲ ಪಪೂ ಕಾಲೇಜಿನ ಉಪನ್ಯಾಸಕರಾದ ವಿಜಯಲಕ್ಷ್ಮಿ ಹಿರೇಮಠ ಆಗಮಿಸಲಿದ್ದಾರೆ. ಅತಿಥಿ ಸ್ಥಾನವನ್ನು ಸಂಸ್ಥೆಯ ಆಡಳಿತಾಧಿಕಾರಿಗಳಾದ ಡಾ.ಬಿ.ಜಿ.ಮಠ ವಹಿಸುವರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಎಸ್.ಎಂ.ಪೂಜಾರಿ ವಹಿಸಿಕೊಳ್ಳುವರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ಯು.ಸಿ.ಪೂಜೇರಿ, ಕಾರ್ಯದರ್ಶಿ ಅಕ್ಷತಾ ಕತ್ನಳ್ಳಿ ಇರಲಿದ್ದಾರೆ ಎಂದು ಪತ್ರಿಕಾ ವಿಭಾಗ ಪ್ರತಿನಿಧಿ, ಪ್ರಾಧ್ಯಾಪಕ ಮಹಾಂತೇಶ ನೂಲಾನವರ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

Latest News

ಗಡಿಗಳನ್ನು ಮೀರಿ ಹರಿದ ಭಕ್ತಿ: ಓಮಾನ್‌ನಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ವೈಭವ  

     ಗಡಿಗಳನ್ನು ಮೀರಿ ಹರಿಯುವ ಭಕ್ತಿಯ ಹರಿವು ಮಸ್ಕಟ್‌ನಲ್ಲಿ ಮತ್ತೆ ಒಮ್ಮೆ ತಿರುಮಲೆಯ ಸಾನ್ನಿಧ್ಯವನ್ನು ಮೂಡಿಸಿತು. ದಾರ್ಸೈಟ್‌ನ ಶ್ರೀ ಕೃಷ್ಣ ಮಂದಿರದಲ್ಲಿ ನೆರವೇರಿದ ಶ್ರೀ...

More Articles Like This

error: Content is protected !!
Join WhatsApp Group