ಬೀದರ – ಭಾರೀ ಮಳೆಗೆ ಮನೆಯ ಗೋಡೆ ಕುಸಿದು, ಓರ್ವ ಮಹಿಳೆ ಮೃತಪಟ್ಟು ಇಬ್ಬರು ಬಾಲಕಿಯರು ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ಹುಮನಾಬಾದ್ ತಾಲ್ಲೂಕು ಕುಮಾರ ಚಿಂಚೋಳಿ ಗ್ರಾಮದಲ್ಲಿ ಮಂಗಳವಾರ ಮಧ್ಯರಾತ್ರಿ ಸಂಭವಿಸಿದೆ.
ಪಾರ್ವತಿ ವೈಜನಾಥ ವಡ್ಡರ್(30) ಮೃತಪಟ್ಟಿದ್ದಾರೆ. ಪತಿ ವೈಜನಾಥ, ಮೃತಳ ಮಕ್ಕಳಾದ ಅರ್ಚನಾ(7), ಅಕ್ಷರಾ(4) ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಷಯ ತಿಳಿದ ತಹಶೀಲ್ದಾರ್ ನಾಗಯ್ಯಸ್ವಾಮಿ ಹಿರೇಮಠ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗೋವಿಂದ ಅವರು ಗ್ರಾಮಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ.