Homeಸುದ್ದಿಗಳುಮಹಿಳೆಯರು, ಯುವಕರು ತರಬೇತಿ ಕಾರ್ಯಕ್ರಮ ಸದುಪಯೋಗಪಡಿಸಿಕೊಳ್ಳಬೇಕು

ಮಹಿಳೆಯರು, ಯುವಕರು ತರಬೇತಿ ಕಾರ್ಯಕ್ರಮ ಸದುಪಯೋಗಪಡಿಸಿಕೊಳ್ಳಬೇಕು

ಮೂಡಲಗಿ – ಮಹಿಳೆಯರು ಮತ್ತು ಯುವಕರು ಸ್ವಾವಲಂಬಿ ಜೀವನವನ್ನು ನಡೆಸಲು ಕಂಪ್ಯೂಟರ್ ಮತ್ತು ಹೊಲಿಗೆ ತರಬೇತಿ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣಾಭಿವೃದ್ದಿ ಸಂಘದ ಅಧ್ಯಕ್ಷ ಸಿದ್ದಣ್ಣ ದುರದುಂಡಿ ಹೇಳಿದರು.

ಅವರು ಮೂಡಲಗಿ ಪಟ್ಟಣದ ನಾಗಲಿಂಗ ನಗರದ ಶ್ರಿನಿವಾಸ ಕಂಪ್ಯೂಟರ್ ತರಬೇತಿ ಕೇಂದ್ರದ ಕಾರ್ಯಾಲಯದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ ಮತ್ತು ಮಧು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಂಘ ಮೂಡಲಗಿ ಸಹಯೋಗದಲ್ಲಿ ಕಂಪ್ಯೂಟರ್ ತರಬೇತಿ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗದ ಮಹಿಳೆಯರು ಮತ್ತು ಯುವಕರಿಗೆ ಉಚಿತವಾಗಿ ಕೇಂದ್ರ ಸರ್ಕಾರ ತರಬೇತಿ ನೀಡುತ್ತಿದೆ ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕೆಂದು ತಿಳಿಸಿದರು.

ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ರೋಹಿತ ಕಲರಾ ಮಾತನಾಡಿ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ವತಿಯಿಂದ ಜಿಲ್ಲೆಯಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದು ಪ್ರತಿಯೊಂದು ವ್ಯವಹಾರದಲ್ಲಿ ಕಂಪ್ಯೂಟರ್ ಕಲಿಕೆ ಅತೀ ಅವಶ್ಯವಿದ್ದು ಪ್ರತಿಯೊಬ್ಬರು ಕಂಪ್ಯೂಟರ್ ಜ್ಞಾನವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಲ್ಲಯ್ಯ ಕರಡಿ, ಸಂಘದ ಅಧ್ಯಕ್ಷೆ ಅಕ್ಕಮಹಾದೇವಿ ಗೊಡ್ಯಾಗೋಳ, ವಿಜಯಲಕ್ಷ್ಮಿ ರೇಳೇಕರ, ಮಾಯವ್ವ ಗೊಡ್ಯಾಗೋಳ ಹಾಗೂ ಮಧು ಮಹಿಳಾ ಮತ್ತು ಮಕ್ಕಳ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು. ಕಲಾವಿದ ಮಂಜುನಾಥ ರೇಳೆಕರ ಸ್ವಾಗತಿಸಿ ವಂದಿಸಿದರು.

RELATED ARTICLES

Most Popular

error: Content is protected !!
Join WhatsApp Group