ಮಹಿಳೆಯರು ಒಳ್ಳೆಯ ಗೃಹಿಣಿಯಾಗುವುದರ ಜೊತೆಗೆ ಸಾಹಿತಿಗಳಾಗಿಯೂ ಹೊರಹೊಮ್ಮುತ್ತಿದ್ದಾರೆ – ಶಾಸಕ ವಿಶ್ವಾಸ ವೈದ್ಯ

Must Read

ಸವದತ್ತಿ : ಈಗಿನ ಮಹಿಳೆಯರು ಮನಸ್ಸು ಮಾಡಿದರೆ ಏನೆಲ್ಲವನ್ನು ಸಾಧಿಸಬಹುದು ಈಗಿನ ಮಹಿಳೆಯರು ಎಲ್ಲ ರಂಗಗಳಲ್ಲಿಯೂ ಮುಂದೆ ಇದ್ದಾರೆ ಅದರಂತೆ ಸಾಹಿತ್ಯದಲ್ಲಿಯೂ ಕೂಡ ಅವರು ಮುಂದೆ ಇದ್ದಾರೆ.ಮನೆಯ ಜವಾಬ್ದಾರಿಯನ್ನು ಹೊತ್ತು ಮನೆಯ ಗೃಹಿಣಿಯಾಗಿ ಇರುವುದರ ಜೊತೆಗೆ ಸಾಹಿತಿಗಳಾಗಿಯೂ ಹೊರಹೊಮ್ಮುತ್ತಿದ್ದಾರೆ ಎಂದು ಶಾಸಕ ವಿಶ್ವಾಸ ವೈದ್ಯರವರು ಹೇಳಿದರು.

ಅವರು ಪಟ್ಟಣದ ಗುರುಭವನದಲ್ಲಿ ನಡೆದ ಸೀಮಾ ಶಶಿರಾಜ್ ವನಕಿ ಯವರು ರಚಿಸಿದ ಕರಿನೆರಳಕೃಷ್ಣೆ ಮತ್ತು ಅವಳೊಂದು ಪಾರಿಜಾತ ಎಂಬ ಕೃತಿಗಳ ಲೋಕಾರ್ಪಣೆ ಸಮಾರಂಭದಲ್ಲಿ ಜ್ಯೋತಿ ಬೆಳಗಿಸಿ ಮಾತನಾಡಿದರು.

ಮುನವಳ್ಳಿಯ ಸೋಮಶೇಖರ ಮಠದ ಮುರುಘೇಂದ್ರ ಮಹಾಸ್ವಾಮಿಗಳು ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿ ಕೃತಿಗಳ ಲೋಕಾರ್ಪಣೆ ಮಾಡಿ ಆಶೀರ್ವಚನ ನೀಡಿದರು.

ವೇದಿಕೆಯ ಮೇಲೆ ಪುರಸಭೆ ಅಧ್ಯಕ್ಷರಾದ ಚಿನ್ನವ್ವ ಗಿ ಹುಚ್ಚಣ್ಣವರ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ, ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ದಂಡಿನ, ಧಾರವಾಡದ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಶಂಕರ ಹಲಗತ್ತಿ, ಅಲ್ಲಮಪ್ರಭು ಪ್ರಭು ನವರ, ಬಸವರಾಜ ಕಾರದಗಿ,  ಡಾ. ನಯನಾ ಭಸ್ಮೇ, ಡಾ. ವೈ ಬಿ ಕಡಕೋಳ. ಡಾ. ಅಭಿನಂದನ ಕಬ್ಬಿನ, ಝಕೀರ್ ನದಾಫ, ಶಿವರಾಜ ಸುರೇಶ ವಣಕಿ, ಬಸವರಾಜ ಕಪ್ಪಣ್ಣವರ,  ಮಹೇಶ ವನಕಿ, ಪ್ರಕಾಶ ವನಕಿ, ಎಲ್,ಎಸ್ ನಾಯ್ಕ್  ವೇದಿಕೆ ಮೇಲೆ ಉಪಸ್ಥಿತರಿದ್ದರು.

ಇದೇ ವೇದಿಕೆಯ ಮೇಲೆ ಶಾಸಕ ವಿಶ್ವಾಸ ವೈದ್ಯರವರನ್ನು ಹಾಗೂ ಮುನವಳ್ಳಿ ಸೋಮಶೇಖರ ಮಠದ ಮುರುಘೇಂದ್ರ ಮಹಾಸ್ವಾಮಿಗಳನ್ನು ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲ ಮುಖ್ಯ ಅತಿಥಿಗಳನ್ನು ಮಾಧ್ಯಮದವರನ್ನು ವನಕಿ ಕುಟುಂಬದ ವರು ಸನ್ಮಾನಿಸಿ ಗೌರವಿಸಿದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ಸೀಮಾ ಶಶಿರಾಜ ವನಕಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ಬಿ.ಐ.ಚಿನಗುಡಿ ಹಾಗೂ ಉಮೇಶ ಬಡಿಗೇರ ಕೃತಿ ಪರಿಚಯ ಮಾಡಿದರು. ಶಶಿರಾಜ ಸುರೇಶ ವನಕಿ ಸ್ವಾಗತಿಸಿದರು. ಶಿವಾನಂದ ತಾರಿಹಾಳ ಕಾರ್ಯಕ್ರಮ ನಿರೂಪಿಸಿದರು.

Latest News

ಲೇಖನ : ಒತ್ತಡದ ಬದುಕಿಗೆ ನೆಮ್ಮದಿಯ ಔಷಧಿ

ಅತ್ಯಾಧುನಿಕ ತಂತ್ರಜ್ಞಾನದಿಂದಾಗಿ ನಮ್ಮ ಹಿಂದಿನ ಹಿರಿಯರು ಪಡುತ್ತಿದ್ದ ಶ್ರಮಜೀವನ ಈಗಿಲ್ಲ. ಆದರೂ ವರ್ಗ ವಯಸ್ಸು ಲಿಂಗಭೇದವನ್ನು ಲೆಕ್ಕಿಸದೇ ದಿನದಿಂದ ದಿನೇ ಒತ್ತಡ ಹೆಚ್ಚುತ್ತಲೇ ಇದೆ. ಶಾಂತವಿರಬೇಕೆನ್ನುವ...

More Articles Like This

error: Content is protected !!
Join WhatsApp Group