spot_img
spot_img

ದಿ.೧೦ ರಂದು ಮಹಿಳಾ ಸಮಾವೇಶ

Must Read

- Advertisement -

ಬೆಳಗಾವಿ – ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಇದೇ ದಿ. ೧೦ ರಂದು ಬೆಳಿಗ್ಗೆ ೧೦ ಗಂಟೆಗೆ ಮಹಿಳಾ ಸಮಾವೇಶ ನಡೆಯಲಿದೆ.

ಕುಮಾರ ಗಂಧರ್ವ ರಂಗಮಂದಿರದ ಹತ್ತಿರದ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ನಡೆಯಲಿರುವ ಮಹಿಳಾ ಸಮಾವೇಶದ ಸರ್ವಾಧ್ಯಕ್ಷತೆಯನ್ನು ಮಕ್ಕಳ ಹೃದಯ ತಜ್ಞ ರಾದ ಡಾ. ವಿಜಯಲಕ್ಷ್ಮಿ ಬಾಳೆಕುಂದ್ರಿ ವಹಿಸಲಿದ್ದಾರೆ. ಸಮಾರಂಭವನ್ನು ಹಿರಿಯ ಸಾಹಿತಿ ಶ್ರೀಮತಿ ನೀಲಗಂಗಾ ಚರಂತಿಮಠ ಉದ್ಘಾಟಿಸಲಿದ್ದಾರೆ.

- Advertisement -

ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಶ್ರೀಮತಿ ವಿದ್ಯಾವತಿ ಭಜಂತ್ರಿ, ಜಿಲ್ಲಾ ಕಸಾಪ ಅಧ್ಯಕ್ಷೆ ಶ್ರೀಮತಿ ಮಂಗಲಾ ಮೆಟಗುಡ್ಡ ಆಗಮಿಸಲಿದ್ದಾರೆ.

ಪರಿಚಯ ಭಾಷಣ ಶ್ರೀಮತಿ ದೇಸಾಯಿ, ಸ್ವಾಗತ ಡಾ. ಹೇಮಾವತಿ ಸೋನೊಳ್ಳಿ, ಪ್ರಾಸ್ತಾವಿಕ ನುಡಿ ಶ್ರೀಮತಿ ಆಶಾ ಕಡಪಟ್ಟಿ ಆಡಲಿದ್ದಾರೆ.

ಸಮಾರಂಭದ ನಂತರ ಮಧ್ಯಾಹ್ನ ಚಿಂತನ ಗೋಷ್ಠಿಗಳು ನಡೆಯಲಿವೆ. ಸಮಾರೋಪ ಸಮಾರಂಭ ಸಾಯಂಕಾಲ ನಡೆಯಲಿದ್ದು ನಂತರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಾಮೂಹಿಕ ಗೀತೆಗಳು ಹಾಗೂ ಪುಷ್ಕಲಾ ನೃತ್ಯಾಲಯದಿಂದ ನೃತ್ಯ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

- Advertisement -
- Advertisement -

Latest News

ಮನುಷ್ಯನಿಗೆ ಹಣ, ಆಸ್ತಿ ಬೇಕಾಗಿಲ್ಲ, ಬದುಕುವ ಛಲ ಇರಬೇಕು – ಬಸವರಾಜ ಮಡಿವಾಳ

ಮೂಡಲಗಿ: ಪಟ್ಟಣದ ಪತ್ರಿಕಾ ಕಾರ್ಯಾಲಯದಲ್ಲಿ ಮಡಿವಾಳ ಸಮಾಜ ಬಾಂಧವರಿಂದ ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ...
- Advertisement -

More Articles Like This

- Advertisement -
close
error: Content is protected !!
Join WhatsApp Group