ಮೈಸೂರು ಜಿಲ್ಲೆ ಕೆ.ಆರ್.ನಗರದ ಭಗತ್ ಸಿಂಗ್ ಯೂತ್ ಫೌಂಡೇಶನ್ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ವಿಚಾರಪೂರ್ಣವಾಗಿ ಆಚರಿಸಲಾಯಿತು.
ಸಮಾಜಸೇವಕಿ ಶ್ರೀಮತಿ ಚೆಲುವಾಂಬಿಕಾ ಕಾರ್ಯಕ್ರಮ ಉದ್ಘಾಟಿಸಿದರು. ಸಾಹಿತಿ ಹಾಗೂ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಮಹಿಳಾ ದಿನಾಚರಣೆಯ ಅಂಗವಾಗಿ ಮೈಸೂರಿನಲ್ಲಿ ಸ್ಮಶಾನದ ಕಾವಲುಗಾರರಾಗುವ ಮೂಲಕ ಸುಮಾರು ಎರಡು ಸಾವಿರ ಶವಗಳನ್ನು ಅಂತ್ಯಸಂಸ್ಕಾರ ಮಾಡುವ ಮೂಲಕ ದಾಖಲೆ ಸ್ಥಾಪಿಸಿರುವ ಶ್ರೀಮತಿ ನೀಲಮ್ಮ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಗಾಯಿತ್ರಿ ಅವರ ಸೇವೆಯನ್ನು ಶ್ಲಾಘಿಸಿ, ಸನ್ಮಾನಿಸಲಾಯಿತು.
ಶಿಶು ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ಪೂರ್ಣಿಮಾ ಹಾಗೂ ಮಹಿಳಾ ಪರಿವರ್ತನಾ ವೇದಿಕೆಯ ಅಧ್ಯಕ್ಷರಾದ ಪೂರ್ಣಿಮಾ ಮುಖ್ಯ ಅತಿಥಿಗಳಾಗಿ ಸಭೆಯಲ್ಲಿ ಮಾತನಾಡಿದರು. ಫೌಂಡೇಶನ್ ನ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಎಲ್ಲರನ್ನೂ ಸ್ವಾಗತಿಸಿದರು. ಖಜಾಂಚಿ ಕೃಷ್ಣಯ್ಯ ಕಾರ್ಯಕ್ರಮ ನಿರ್ವಹಿಸಿದರು. ಸ್ವಾಮಿಗೌಡ ವಂದಿಸಿದರು. ಇದೇ ಸಂದರ್ಭದಲ್ಲಿ ಭಗತ್ ಸಿಂಗ್ ಫೌಂಡೇಶನ್ ಸಂಸ್ಥೆಯ ಮಹಿಳಾ ಘಟಕವನ್ನು ಆರಂಭಿಸಲಾಯಿತು.
ಅಂತಾರಾಷ್ಟ್ರೀಯ ಪ್ರಸಿದ್ದಿಯ ಗಾಯಕರಾದ ಅಮ್ಮ ರಾಮಚಂದ್ರ ಭಾವಗೀತೆಗಳನ್ನು ಹಾಡಿ, ರಂಜಿಸಿದರು.
ಸ್ವಾಮಿ ಗೌಡ್ರು,ತೇಜು, ಕಿರಣ್, ಚೆಲುವನ,ಮಂಜುನಾಥ್, ಜಗದೀಶ್,ಆಶಾ, ಮಹಾಲಕ್ಷ್ಮಿ, ಮೇಘನಾ,ಅರ್ಚನಾ, ಸುದೀಪ್, ಶಿವರಾಜು, ಮೊದಲಾದವರು ಹಾಜರಿದ್ದರು.