Sindagi News: ವಿಶ್ವ ಮಲೇರಿಯಾ ದಿನ ಹಾಗೂ ಕೋವಿಡ್ ಅರಿವು ಜಾಥಾ ಆಚರಣೆ

Must Read

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಟೈಮ್ಸ್ ಆಫ್ ಕರ್ನಾಟಕ ವರದಿಗೆ ಸ್ಪಂದನೆ ; ಅಕ್ರಮ ಮರಳು ದಂಧೆಯ ಬಗ್ಗೆ ಸ್ಪಷ್ಟೀಕರಣ ನೀಡಿದ ಎಸಿ

ಸಿಂದಗಿ: "ಅಕ್ರಮ ಮರಳು ಸಾಗಾಟ ನಿರಂತರ ; ಜಾಣ ಕುರುಡರಾದ ಅಧಿಕಾರಿಗಳು " ಎಂಬ ಶೀರ್ಷಿಕೆಯಲ್ಲಿ ನಮ್ಮ ಟೈಮ್ಸ ಆಫ್ ಕರ್ನಾಟಕ ವೆಬ್ ಪತ್ರಿಕೆಯಲ್ಲಿ ದಿ....

ಸಿಂದಗಿ: ನಗರದಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ಕೋವಿಡ-19 ರ ಜಾಗೃತಿ, ವಿಶ್ವ ಮಲೇರಿಯಾ ದಿನಾಚರಣೆಯ ಜಾಥಾ ಹಾಗೂ ಕೋವಿಡ್ ಲಸಿಕೆ ಪಡೆಯುವ ಅರಿವು ಮೂಡಿಸುವ ಜಾಥಾವನ್ನು ತಾಲೂಕಾ ಆರೋಗ್ಯಾಧಿಕಾರಿ ಡಾ. ಆರ್.ಎಸ್.ಇಂಗಳೆ ಚಾಲನೆ ನೀಡಿ, ಕೋವಿಡ-19ರ ಎರಡನೇಯ ಅಲೆ ತೀವ್ರಗತಿಯಲ್ಲಿ ಹರಡುತ್ತಿದ್ದು ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ ಧರಿಸಬೇಕು ಕುಟುಂಬದಲ್ಲಿ ಯಾರಿಗಾದರು ಯಾವುದೇ ಜ್ವರ, ಮೈಕೈ ನೋವು, ನೆಗಡಿ ಕೆಮ್ಮಿನಂತಹ ಲಕ್ಷಣಗಳು ಕಂಡುಬಂದರೆ ತಕ್ಷಣವೇ ಸರಕಾರಿ ಆಗಮಿಸಿ ಗಂಟಲು ದ್ರವ ಪರೀಕ್ಷೆ ಮಾಡಿಸಿಕೊಳ್ಳಬೇಕು ಪ್ರತಿಯೊಬ್ಬರು ವೈಯಕ್ತಿಕ ಸ್ವಚ್ಚತೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಅನವಶ್ಯಕವಾಗಿ ಹೊರಗಡೆ ಬರುವದನ್ನು ತಪ್ಪಿಸಿ ಮನೆಯಲ್ಲಿಯೇ ಇರಬೇಕು.

ಈಗಾಗಲೇ 45ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ ಲಸಿಕೆ ನೀಡುತ್ತಿದ್ದು ಮೇ 1ನೇ ದಿನಾಂಕದಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಪ್ರಾರಂಭಿಸಲಾಗುವದು ಇದರ ಸದುಪಯೋಗವನ್ನು ಎಲ್ಲರು ಪಡೆಯಬೇಕೆಂದು ಹೇಳಿದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಕುಲಕರ್ಣಿ ವಿಶ್ವ ಮಲೇರಿಯಾ ದಿನಾಚರಣೆ ಜಾಥಾ ಅಂಗವಾಗಿ ಮಾತನಾಡಿ, ಛಳಿ ಜ್ವರ, ತಲೆನೋವು ವಾಂತಿ ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ಸರಕಾರಿ ಆಸ್ಪತ್ರೆಯಲ್ಲಿ ರಕ್ತ ತಪಾಸಣೆ ಮಾಡಿಸಿಕೊಳ್ಳುವುದು ಹಾಗೂ ಮನೆಯ ಸುತ್ತಮುತ್ತಲಿನಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳುವದು ಹಾಗೂ ಸೊಳ್ಳೆ ಕಡಿತದಿಂದ ಕಾಪಾಡಿಕೊಳ್ಳಲು ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆ ಪರದೆ ಉಪಯೋಗಿಸುವದು ಮನೆಯ ಕಿಟಕಿಗಳಿಗೆ ಜಾಲರಿ ಅಳವಡಿಸುವದು ಹಾಗೂ ಮನೆಯಲ್ಲಿನ ನೀರಿನ ಸಂಗ್ರಹಾಗಾರಗಳನ್ನು ವಾರಕ್ಕೊಮ್ಮೆ ಸ್ವಚ್ಚಗೊಳಿಸಿ ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಮಾಡುವುದು ಎಂಬ ಬಗ್ಗೆ ಮಾಹಿತಿ ನೀಡಿದರು.

- Advertisement -

ಈ ಸಂದರ್ಭದಲ್ಲಿ ಕೋವಿಡ-19 ಹಾಗೂ ಕೋವಿಡ್ ಲಸಿಕಾ ಕುರಿತು ಕರಪತ್ರಗಳನ್ನು ಸಾರ್ವಜನಿಕರಿಗೆ ನೀಡಿ ಲಸಿಕೆ ಪಡೆಯಲು ಪ್ರೇರೇಪಿಸಲಾಯಿತು. ಜಾಥಾ ಕಾರ್ಯಕ್ರಮದಲ್ಲಿ ಎ.ಎ.ತಂಬಾಕೆ, ಮಹಾಲಿಂಗ ಫಕೀರಪೂರ, ಪ್ರಭು ಜಂಗಿನಮಠ, ವಿರೇಂದ್ರ ಪವಾಡೆ, ಜೆ.ಕೆ ಚಿಕರೆಡ್ಡಿ ಹಾಗೂ ಸಿಂದಗಿ ನಗರದ ಆಶಾ ಕಾರ್ಯಕರ್ತೆಯರು ಹಾಜರಿದ್ದರು.

ವರದಿ: ಪಂಡಿತ್ ಯಮಪುರಿ, ಸಿಂದಗಿ

- Advertisement -
- Advertisement -

Latest News

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...
- Advertisement -

More Articles Like This

- Advertisement -
close
error: Content is protected !!