spot_img
spot_img

ವಿಶ್ವವಂದ್ಯರು ಶ್ರೀ ಗುರುರಾಯರು – ಡಾ.ಅರಳು ಮಲ್ಲಿಗೆ ಪಾರ್ಥಸಾರಥಿ

Must Read

spot_img
 ಸ್ವದೇಶಿ ಉದ್ಯಮ ಪ್ರಕಟಿತ ಶ್ರೀ ಗುರು ಸಾರ್ವಭೌಮ ವಿಶೇಷ ಸಂಚಿಕೆ ಲೋಕಾರ್ಪಣೆ 
    ಬೆಂಗಳೂರು ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಅಂಗವಾಗಿ ಬಿ.ಕೆ ಪ್ರಸನ್ನ ಸಂಪಾದಕತ್ವದಲ್ಲಿ ಸ್ವದೇಶಿ ಉದ್ಯಮ  ಪ್ರಕಟಿಸಿರುವ ಶ್ರೀ ಗುರು ಸಾರ್ವಭೌಮ ವಿಶೇಷ ಸಂಚಿಕೆಯನ್ನು ಖ್ಯಾತ ಹರಿದಾಸ ವಿದ್ವಾಂಸ ಡಾ. ಅರಳುಮಲ್ಲಿಗೆ ಪಾರ್ಥಸಾರಥಿ ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭದಲ್ಲಿ ಅವರು, ಮಾತನಾಡುತ್ತಾ ಇಂದು ಎನಗೆ ಗೋವಿಂದ ಹಾಡಿನ ಮೂಲಕ ಹರಿದಾಸ ಪ್ರಪಂಚಕ್ಕೆ ಸ್ಪೂರ್ತಿಯಾದವರು ರಾಘವೇಂದ್ರರು ಜಾತಿ ಮತ ದೇಶ ಭಾಷೆ ಪಂಥಗಳ ಭೇದಭಾವವಿಲ್ಲದೆ ಎಲ್ಲ ಶ್ರದ್ಧಾಾವಂತರಿಗೂ ಸಂತೃಪ್ತಿ ಮನಃಶಾಂತಿ ವರ ನೀಡಿ ಅನುಗ್ರಹಿಸುತ್ತಿದ್ದಾರೆ ಮಂತ್ರಾಲಯದ ಮಹಾಮಹಿಮರು. ನಾಸ್ತಿಕ ಯುಗದ ನಿಃಸತ್ವ ಚೇತನಗಳಲ್ಲಿ ದೈವಭಕ್ತಿ ಆತ್ಮವಿಶ್ವಾಸ ಹಾಗೂ ವಿಚಾರ ಶ್ರದ್ಧೆ ಗಳನ್ನು ಉದ್ದೀಪಿಸಿದ  ಗುರುಗಳು ವಿಶ್ವ ವಂದ್ಯರು ಎಂದು ಅಭಿಪ್ರಾಯ ಪಟ್ಟರು.
    ಪರಮಪೂಜ್ಯ ಡಾ.ಶ್ರೀ ಸುಬುಧೇoದ್ರ ತೀರ್ಥ ಶ್ರೀ ಪಾದರ ಅನುಗ್ರಹದೊಡನೆ ನಡೆದ ವಿಶೇಷ ಸಂಚಿಕೆ ಬಿಡುಗಡೆ ಸಂದರ್ಭದಲ್ಲಿ ಶ್ರೀಮಠದ ಹಿರಿಯ ವ್ಯವಸ್ಥಾಪಕ  ಆರ್ ಕೆ ವಾದೀoದ್ರ ಆಚಾರ್ಯ, ನಂದ ಕಿಶೋರ್ ಆಚಾರ್, ಗುರು ವಿಜಯ ಪ್ರತಿಷ್ಠಾನದ ಆಚಾರ್ಯ ನಾಗರಾಜು ಹಾವೇರಿ, ಪರಿಮಳ ಪತ್ರಿಕೆಯ ಸಂಪಾದಕ ಜಿಕೆ ಆಚಾರ್ಯ, ಪ್ರಣವ ಮೀಡಿಯಾ ಹೌಸ್ ಪ್ರಕಾಶನದ  ಕಾರ್ಯನಿರ್ವಾಹಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಮೊದಲಾದವರು ಉಪಸ್ಥಿತರಿದ್ದರು
- Advertisement -
- Advertisement -

Latest News

ಪ್ಲಾಸ್ಟಿಕ್ ತ್ಯಾಜ್ಯ ಮುಕ್ತ ಗ್ರಾಮ ಆಂದೋಲನಕ್ಕೆ ಚಾಲನೆ

ಮೂಡಲಗಿ : ಕಳೆದ ಶನಿವಾರದಂದು ಗೋಸಬಾಳದ ಸರಕಾರಿ ಕೆ.ಹೆಚ್.ಪಿ.ಎಸ್ ಮತ್ತು ಉನ್ನತೀಕರಿಸಿದ ಪ್ರೌಢ ಶಾಲೆಯಲ್ಲಿ ಸಾಲುಮರದ ತಿಮ್ಮಕ್ಕ ಇಕೋ ಕ್ಲಬ್ ವತಿಯಿಂದ ಪ್ಲಾಸ್ಟಿಕ್ ತ್ಯಾಜ್ಯ ಮುಕ್ತ...
- Advertisement -

More Articles Like This

- Advertisement -
close
error: Content is protected !!
Join WhatsApp Group