ಬೆಳಗಾವಿ – ರಾಜಲಕ್ಷ್ಮಿ ಚಿಲ್ಡ್ರನ್ ಫೌಂಡೇಶನ್ ಬೆಳಗಾವಿ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಶಿವಬಸವ ನಗರ ಬೆಳಗಾವಿ ಇಲ್ಲಿ “ವಿಶ್ವ ಶೌಚಾಲಯ ದಿನಾಚರಣೆ” ಕಾರ್ಯಕ್ರಮ ಆಯೋಜಿಸಲಾಗಿತ್ತು.
ರಾಜಲಕ್ಷ್ಮಿ ಚಿಲ್ಡ್ರನ್ ಫೌಂಡೇಶನ್ ನ ಸಂಸ್ಥಾಪಕ ನಿರ್ದೇಶಕರಾದ ಡಾ. ಶಶಿಕಾಂತ ವಾಯ್. ಕುಲಗೋಡ ರವರು ಕಾರ್ಯಕ್ರಮ ಉದ್ಘಾಟಿಸಿದರು.
ನಗರವಲಯದ ಕ್ಷೇತ್ರ ಸಮನ್ವಯಾಧಿಕಾರಿ ಐ ಡಿ. ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಬೆಳಗಾವಿ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಡಾ. ಎಮ್ ಎಸ್ ಮೇದಾರ, ರಾಜಲಕ್ಷ್ಮಿ ಚಿಲ್ಡ್ರನ್ ಫೌಂಡೇಶನ್ ನ ನಿರ್ದೇಶಕಿಯರಾದ ಡಾ. ವಿಜಯಲಕ್ಷ್ಮಿ ಎಸ್. ಕುಲಗೋಡ, ಡಾ. ರವೀಂದ್ರ ಎನ್. ಗುರುವಣ್ಣವರ,ಡಾ. ಕೀರ್ತಿ ಶಿವಕುಮಾರ ರವರು ಆಗಮಿಸಿದ್ದರು. ಮುಖ್ಯೋಪಾಧ್ಯಾಯರಾದ ಎಮ್ ಎಸ್. ಶಿವಪೂಜಿಮಠ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ರಾಜಲಕ್ಷ್ಮಿ ಚಿಲ್ಡ್ರನ್ ಫೌಂಡೇಶನ್ ವತಿಯಿಂದ ಬೆಳಗಾವಿ ನಗರ ಹಾಗೂ ಗ್ರಾಮೀಣ ವಲಯದ ಆಯ್ದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶೌಚಾಲಯಗಳ ನಿರಂತರ ಸ್ವಚ್ಛತೆ ಮತ್ತು ನಿರ್ವಹಣೆ ಪ್ರಕ್ರಿಯೆಗಾಗಿ ದತ್ತು ಸ್ವೀಕರಿಸಿದರು.
ಈ ಒಡಂಬಡಿಕೆ ಪತ್ರವನ್ನು ಬೆಳಗಾವಿ ನಗರ ಹಾಗೂ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳು ವಿನಿಮಯ ಮಾಡಿಕೊಂಡರು. ಈ ಸಂದರ್ಭದಲ್ಲಿ ದತ್ತು ಪ್ರಕ್ರಿಯೆಗೆ ಒಳಪಟ್ಟ ಎಲ್ಲಾ ಶಾಲೆಗಳ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು.