spot_img
spot_img

World Yoga Day: ಯಾದವಾಡ ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯಲ್ಲಿ ವಿಶ್ವ ಯೋಗ ದಿನಾಚರಣೆ

Must Read

spot_img
- Advertisement -

ಮೂಡಲಗಿ: ಯೋಗವು ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಯೋಗವನ್ನು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸದೆ ಪ್ರತಿದಿನ ಮಾಡಲು ಕಾರ್ಖಾನೆಯಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಯಾದವಾಡ ದಾಲ್ಮಿಯಾ ಸಿಮೆಂಟ ಕಾರ್ಖಾನೆ ಘಟಕದ ಮುಖ್ಯಸ್ಥ ಪ್ರಭಾತ್ ಕುಮಾರ್ ಸಿಂಗ್ ಹೇಳಿದರು.

ಬುಧವಾರದಂದು ತಾಲೂಕಿನ ಯಾದವಾಡದಲ್ಲಿ ದಾಲ್ಮಿಯಾ ಸಿಮೆಂಟ ಕಾರ್ಖಾನೆಯ ಆವರಣದಲ್ಲಿ ಏರ್ಪಡಿಸಿದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ವಂದನಾಸಿಂಗ್ ಅವರು ಗುರುಗಳು ಕಲಿಸಿದ ಯೋಗವನ್ನು ದಿನಾಲು ಮಾಡುವುದರ ಮೂಲಕ ನಮ್ಮ ಶಾರಿರಿಕ ಹಾಗೂ ಮಾನಸಿಕ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳೋಣ ಎಂದರು.  

- Advertisement -

ಯೋಗ ಗುರು ಪ್ರಶಾಂತ್ ನಾಯಕ್ ಅವರು ಯೋಗದ ಮಹತ್ವ ಹಾಗೂ ಯೋಗ ದಿನಾಚರಣೆ ಮಹತ್ವವನ್ನು ತಿಳಿಸುವುದರೊಂದಿಗೆ ವಿವಿಧ ಯೋಗಾಸನಗಳನ್ನು ಮಾಡಿಸುವುದರ ಮೂಲಕ ಸುಲಭ ಯೋಗ ಅಭ್ಯಾಸಗಳನ್ನು ತಿಳಿಸಿಕೊಟ್ಟರು.

ಕಾರ್ಯಕ್ರಮದಲ್ಲಿ ಕಾರ್ಖಾನೆಯ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಮಾಯಾಂಕ್ ಕುಮಾರ್  ಪಠಾಕ್, ರಾಮನಗೌಡ ಬಿರಾದಾರ ಹಾಗೂ ವಿವಿಧ ವಿಭಾಗದ ಮುಖ್ಯಸ್ಥರು, ಕಾರ್ಖಾನೆ ಸಿಬ್ಬಂದಿ ವರ್ಗ ಹಾಗೂ ಅವರ ಕುಟುಂಬ ಯೋಗ ದಿನಾಚರಣೆಯಲ್ಲಿ ಭಾಗಿಯಾಗುವ ಮೂಲಕ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು. ಡಾ.ನೀಲಕಂಠಗೌಡ ನಿರೂಪಿಸಿದರು,  ಮಾನವ ಸಂಪನ್ಮೂಲ ವಿಭಾಗ ಹಿರಿಯ ವ್ಯವಸ್ಥಾಪಕ ಉಮೇಶ್ ದೇಸಾಯಿ ವಂದಿಸಿದರು.

- Advertisement -
- Advertisement -

Latest News

ಯೋಗ ಸ್ಪರ್ಧಾ ವಿಜೇತರಿಗೆ ಕಡಾಡಿ ಸನ್ಮಾನ

ಮೂಡಲಗಿ: ಗ್ರಾಮೀಣ ಪ್ರದೇಶದ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಯೋಗದಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ ಇಂತಹ ಪ್ರತಿಭೆಗಳು ಬೆಳಕಿಗೆ ಬಂದು ನಾಡಿನ...
- Advertisement -

More Articles Like This

- Advertisement -
close
error: Content is protected !!
Join WhatsApp Group