spot_img
spot_img

ಬಸವನಗುಡಿ ಉತ್ತರಾದಿ ಮಠದ ಆವರಣದಲ್ಲಿ ಪುರಂದರ ದಾಸರ ಆರಾಧನಾ ಮಹೋತ್ಸವ

Must Read

- Advertisement -

ಗಾನ– ಜ್ಞಾನ ಯಜ್ಞ;

ಖ್ಯಾತ ವಿದ್ವಾಂಸ ಡಾ. ವ್ಯಾಸನಕೆರೆ ಪ್ರಭಂಜನಾಚಾರ್ಯರವರಿಗೆ ‘ಮಧ್ವ ಪುರಂದರ’ ಪ್ರಶಸ್ತಿ ಮತ್ತು

ಖ್ಯಾತ ಹಿಂದೂಸ್ತಾನಿ ಗಾಯಕ ಡಾ. ಪಂ. ನಾಗರಾಜರಾವ್ ಹವಾಲ್ದಾರ್ ಅವರಿಗೆ ‘ಪುರಂದರ ಸಂಗೀತ ರತ್ನ’ ಪ್ರಶಸ್ತಿ 

- Advertisement -

ಹಾಗೂ ಸಾಧಕರಿಗೆ ‘ಹರಿದಾಸಾನುಗ್ರಹ ’ಪ್ರಶಸ್ತಿ ಪ್ರದಾನ 

ದಾಸ ಸಾಹಿತ್ಯ ಪ್ರಚಾರ ಮಾಧ್ಯಮ – ಶ್ರೀನಿವಾಸ ಉತ್ಸವ ಬಳಗದಿಂದ ಶ್ರೀ ಉತ್ತರಾದಿ ಮಠಾಧೀಶರಾದ ಪೂಜ್ಯ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರ ಅನುಗ್ರಹದೊಂದಿಗೆ ದಾಸಸಾಹಿತ್ಯದ ಪಿತಾಮಹ ಶ್ರೀಪುರಂದರದಾಸರ ಬೃಹತ್ ಏಕಶಿಲಾ ವಿಗ್ರಹವನ್ನು ಬೆಂಗಳೂರು ನಗರದ ಬಸವನಗುಡಿಯ ನ್ಯಾಷನಲ್ ಕಾಲೇಜು ಎದುರಿನ ಶ್ರೀಮದ್ ಉತ್ತರಾದಿಮಠದ  ಶ್ರೀ ದಿಗ್ವಿಜಯ ಲಕ್ಷ್ಮೀನರಸಿಂಹ ದೇವಸ್ಥಾನದ ಆವರಣದಲ್ಲಿ ಪ್ರತಿಷ್ಠಾಪಿಸಲಾಗಿದೆ. 

ಇದೀಗ ಪ್ರತಿಷ್ಠಾಪನೆಯ ನಾಲ್ಕನೇ ವರ್ಷದ ಸಂಭ್ರಮದಲ್ಲಿ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಲರ್ಬುಗಿಯ ದಾಸ ಸೌರಭ, ಶ್ರೀಮದ್ವಾದಿರಾಜ ಆರಾಧನಾ ಟ್ರಸ್ಟ್; ನಾದವೈಭವ ಸಂಗೀತ ವಿದ್ಯಾಲಯ, ಶಿವಮೊಗ್ಗದ ಶ್ರೀ ಗುರುಗುಹ ಸಂಗೀತ ಮಹವಿದ್ಯಾಲಯ ಮತ್ತು ಅನುಗ್ರಹ ಸಂಗೀತ ಮಹಾವಿದ್ಯಾಲಯದ ಸಹಯೋಗದಲ್ಲಿ ‘ಪುರಂದರದಾಸರ ಆರಾಧನಾ ಮಹೋತ್ಸವ’ವನ್ನು ಗಾನ-ಜ್ಞಾನ ಯಜ್ಞದೊಂದಿಗೆ ಆಚರಿಸಲಾಯಿತು.

- Advertisement -

ವಿದ್ವಾನ್ ಆರ್.ಕೆ.ಪದ್ಮನಾಭ ಮತ್ತು ಶಿಷ್ಯವೃಂದದಿಂದ ಪುರಂದರದಾಸರ ಕೃತಿಗಳ ಗೋಷ್ಠಿ ಗಾಯನದೊಂದಿಗೆ ಪುರಂದರ ದಾಸರ ಬೃಹತ್ ಶಿಲಾ ವಿಗ್ರಹಕ್ಕೆ  ವಿಶೇಷ ಅಭಿಷೇಕದೊಂದಿಗೆ ಚಾಲನೆ ದೊರೆಯಿತು.

ಪೂಜ್ಯ ಶ್ರೀ ಸುವಿದ್ಯೇಂದ್ರ ತೀರ್ಥ ಶ್ರೀಪಾದರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಖ್ಯಾತ ವಿದ್ವಾಂಸ, ಶ್ರೀವ್ಯಾಸ ಮಧ್ವ ಸೇವಾ ಪ್ರತಿಷ್ಠಾನದ ನಿರ್ದೇಶಕ ಡಾ. ವ್ಯಾಸನಕೆರೆ ಪ್ರಭಂಜನಾಚಾರ್ಯರವರಿಗೆ ಪ್ರತಿಷ್ಠಿತ ಮಧ್ವ ಪುರಂದರ ಪ್ರಶಸ್ತಿಯನ್ನು ನೀಡಿ ಗೌರವಿಸಿ ಅನುಗ್ರಹ ಸಂದೇಶ ನೀಡುತ್ತ ದೇಶದ ಉದ್ದಗಲದಲ್ಲಿ ನಿರಂತರವಾಗಿ ಸಂಚರಿಸುತ್ತ ವಿದ್ವತ್ಪೂರ್ಣವಾದ ಪ್ರವಚನಗಳ ಮೂಲಕ ಏಕಾದಶೀ ಉಪವಾಸ-ಚಾತುರ್ಮಾಸ್ಯ ಆಚರಣೆ-ಅನುಷ್ಠಾನಗಳ ಬಗ್ಗೆ ಜಾಗೃತಿಯನ್ನು ಮೂಡಿಸಿ ಜನರು ಸನ್ಮಾರ್ಗದಲ್ಲಿ ನಡೆಯುವಂತೆ ಮಾಡಿದ ಕಾರ್ಯ ಅತ್ಯಂತ ಪ್ರಶಂಸನಾರ್ಹವಾಗಿದೆ ತಿಳಿಸಿದರು.       

ಸಮಾರಂಭದ ಮುಖ್ಯ ಅತಿಥಿಗಳಾಗಿ ಜಯತೀರ್ಥ ವಿದ್ಯಾಪೀಠದ ಕುಲಪತಿ ಪಂ.ಗುತ್ತಲ್ ರಂಗಾಚಾರ್, , ಶ್ರೀವಾರಿ ಫೌಂಡೇಷನ್‍ನ ಎಸ್.ವೆಂಕಟೇಶಮೂರ್ತಿ ಮತ್ತು ಖ್ಯಾತ ಗಾಯಕ ಗಾನಕಲಾಭೂಷಣ ವಿದ್ವಾನ್ ಆರ್.ಕೆ.ಪದ್ಮನಾಭರವರು ಭಾಗವಹಿಸಿದ್ದರು.

ಆಧ್ಯಾತ್ಮಿಕ ಮತ್ತು ಸಮಾಜಸೇವೆಗಾಗಿ ವಟ್ಟಂಗಾಡ್ ಕೃಷ್ಣಾಚಾರ್ಯ; ಪತ್ರಿಕೋದ್ಯಮ-ಹಿರಿಯ ಪತ್ರಕರ್ತ ಶೇಷಚಂದ್ರಿಕ ಮತ್ತು ದಾಸಸಾಹಿತ್ಯ ಪ್ರಸರಣ-ತಂತ್ರಜ್ಞ ದಂಡಿನ್ ಅನಂತರಾವ್‍ರವರಿಗೆ ಹರಿದಾಸ ಅನುಗ್ರಹ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಖ್ಯಾತ ಹಿಂದೂಸ್ತಾನಿ ಗಾಯಕ ನಿವೃತ್ತ ಐಎಎಸ್ ಅಧಿಕಾರಿ ಡಾ. ಪಂ. ಮುದ್ದುಮೋಹನ್‍ರವರಿಂದ ದಾಸವಾಣಿ ನಡೆಯಿತು.

ಮಧ್ಯಾರಾಧನಾ ಮಹೋತ್ಸವದ ಅಂಗವಾಗಿ ಪುರಂದರದಾಸರ ಕುರಿತು ವಿಶೇಷ ಉಪನ್ಯಾಸ ಖ್ಯಾತ ವಾಗ್ಮಿ ಮತ್ತು ಅಧ್ಯಾತ್ಮ ಚಿಂತಕ ಡಾ. ಪಂ. ಆತನೂರು ಭೀಮಸೇನಾಚಾರ್ಯ ನಡೆಸಿಕೊಟ್ಟರು ಮತ್ತು ಖ್ಯಾತ ಗಾಯಕ ಡಾ. ರಾಯಚೂರು ಶೇಷಗಿರಿದಾಸ್‍ರವರಿಂದ ದಾಸರ ಪದಗಳ ಗಾಯನ ಆಯೋಜಿಸಿತ್ತು. 

ಸಂಜೆ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಭಾಗವಹಿಸಿ. ಖ್ಯಾತ ಹಿಂದೂಸ್ತಾನಿ ಗಾಯಕ ಡಾ. ಪಂ. ನಾಗರಾಜರಾವ್ ಹವಾಲ್ದಾರ್ ಅವರಿಗೆ ‘ಪುರಂದರ ಸಂಗೀತ ರತ್ನ’ ಪ್ರಶಸ್ತಿ ನೀಡಿ ಗೌರವಿಸಿ ಮಾತನಾಡುತ್ತ  ಹೃದಯವನ್ನು ಅರಳಿಸುವ ಸಾಹಿತ್ಯವನ್ನು ತಮ್ಮ ಜೀವನದ ಉಸಿರಾಗಿಸಿಕೊಂಡು, ಕಳೆದ ಹನ್ನರೆಡು  ವರ್ಷಗಳಿಂದ ‘ಶ್ರೀ ಶ್ರೀನಿವಾಸ ಉತ್ಸವ ಬಳಗ (ರಿ) ದಾಸಸಾಹಿತ್ಯ ಪ್ರಚಾರ ಮಾಧ್ಯಮ ಸಂಘಟನೆಯ ಮೂಲಕ ‘ಶ್ರೀ ಪುರಂದರದಾಸರ ಆರಾಧನಾ ಮಹೋತ್ಸವ’ವನ್ನು ಮಾಡುತ್ತ ಜನಹಿತಕಾರ್ಯ ಮಾಡುತ್ತಿರುವುದು ತುಂಬಾ ಶ್ಲಾಘನೀಯ ವಿಚಾರ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಗುಲಬರ್ಗಾದ ಸಂಶೋಧಕರಾದ ಶ್ರೀಮತಿ ಸುಮಿತ್ರ ಜಯತೀರ್ಥ ಪ್ರತಿನಿಧಿ, ಅಂಕಣಕಾರ ಶ್ರೀಧರ ರಾಯಸಂ ಮತ್ತು ಹಾರ್ಮೋನಿಯಂ ವಾದಕ ಪಂ. ಕೃಷ್ಣ ಹುನಗುಂದರವರಿಗೆ ಹರಿದಾಸ ಅನುಗ್ರಹ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.

ಶ್ರೀ ಗುರುಗುಹ ಸಂಗೀತ ಮಹಾವಿದ್ಯಾಲಯ, ಬೆಂಗಳೂರು ಮತ್ತು ಶಿವಮೊಗ್ಗ ಶ್ರೀ ಅನುಗ್ರಹ ಸಂಗೀತ ಮಹಾವಿದ್ಯಾಲಯ, ಬೆಂಗಳೂರು ಮತ್ತು ತುಮಕೂರು ವಿದ್ಯಾರ್ಥಿಗಳಿಂದ ವಿದ್ವಾನ್ ಶೃಂಗೇರಿ ಹೆಚ್.ಎಸ್. ನಾಗರಾಜ್ ಮತ್ತು ವಿದ್ವಾನ್ ಜೆ.ಎಸ್. ಶ್ರೀಕಂಠಭಟ್ ನೇತೃತ್ವದಲ್ಲಿ ಪುರಂದರದಾಸರ ನವರತ್ನಮಾಲಿಕ ಕೃತಿಗಳ ಗೋಷ್ಠಿ ಗಾಯನಕ್ಕೆ ಪಕ್ಕವಾದ್ಯದಲ್ಲಿ ವಯೋಲಿನ್ ವಿದ್ವಾನ್ ವೆಂಕಟೇಶ್ ಜೋಷಿಯಾರ್ ಮತ್ತು ಮೃದಂಗ ಪಿ.ಎಸ್. ಶ್ರೀಧರ್ ಸಾಥ್ ನೀಡಿದರು..

ಸಮಾರೋಪ ಸಮಾರಂಭದ  ಮುಖ್ಯ ಅತಿಥಿಗಳಾಗಿ ಸೇಡಂನ ಹರಿದಾಸ ಸಂಶೋಧಕ ಡಾ. ವಾಸುದೇವ ಅಗ್ನಿಹೋತ್ರಿ ಮತ್ತು ಖ್ಯಾತ ಹೃದ್ರೋಗ ತಜ್ಞ ಡಾ. ವೇಣುಗೋಪಾಲ ರಾಮರಾವ್ ಭಾಗವಹಿಸಿ ಶ್ರೀನಿವಾಸ ಲೋಕ ಕಲ್ಯಾಣ ಟ್ರಸ್ಟ್ ಅಧ್ಯಕ್ಷ ಬಿ.ಎನ್. ರಾಜೇಂದ್ರರವರಿಗೆ ಹರಿದಾಸ ಅನುಗ್ರಹ ಪ್ರಶಸ್ತಿ ಪ್ರದಾನ, ಶಶಿಕಲ ನಾಗರಾಜನ್ ನಿರೂಪಣೆಯಲ್ಲಿ ವಿದುಷಿ ಶ್ರೀಮತಿ ಪವಿತ್ರ ವೈಭವರಾವ್‍ರವರಿಂದ ಭರತನಾಟ್ಯ ಖ್ಯಾತ ಸಂಗೀತ ವಿದುಷಿ ಶ್ರೀಮತಿ ಶುಭ ಸಂತೋಷ್‍ರವರ ಗಾಯನ ಮತ್ತು ಖ್ಯಾತ ಉಪನ್ಯಾಸಕಾರ ವಿದ್ವಾನ್ ಶ್ರೀ ಕಲ್ಲಾಪುರ ಪವಮಾನಾಚಾರ್ಯರವರಿಂದ ಸಂಪ್ರವಚನವನ್ನು ಏರ್ಪಡಿಸಲಾಗಿತ್ತು ಎಂದು ಕಾರ್ಯಕ್ರಮದ ಆಯೋಜಕರಾದ ಶ್ರೀನಿವಾಸ ಉತ್ಸವ ಬಳಗದ ಅಧ್ಯಕ್ಷ ಡಾ. ಟಿ. ವಾದಿರಾಜ್ ತಿಳಿಸಿರುತ್ತಾರೆ. 

ಹೆಚ್ಚಿನ ವಿವರಗಳಿಗೆ ಮೊ. 98861 08550

- Advertisement -
- Advertisement -

Latest News

ಕವನ : ಗೊಂಬೆಗಳ ಕಣ್ಣೀರು

ಗೊಂಬೆಗಳ ಕಣ್ಣೀರು ಅಂದು ನಾವು ಅಪ್ಪ ಅವ್ವನನ್ನು ಕಾಡಿ ಬೇಡಿ ಗೊಂಬೆಗಳಿಗಾಗಿ ಅಳುತ್ತಿದ್ದೆವು ಜಾತ್ರೆ ಉತ್ಸವದಲ್ಲಿ ಹಿರಿಯರಿಗೆ ದೇವರ ಮೇಲಿನ ಭಕ್ತಿ ನಮಗೋ ಬಣ್ಣ ಬಣ್ಣದ ಗೊಂಬೆಗಳ ಮೇಲೆ ಆಸಕ್ತಿ ಅವ್ವ ಹೇಗೋ ಮಾಡಿ ಅಪ್ಪನ ತುಡುಗಿನಲಿ ತನ್ನಲಿದ್ದ ದುಡ್ಡು ಕೊಟ್ಟು ತಂದಳು ಗೊಂಬೆಗಳ ಮಿತಿ ಇರಲಿಲ್ಲ...
- Advertisement -

More Articles Like This

- Advertisement -
close
error: Content is protected !!
Join WhatsApp Group